ಬಿಸಿಯೂಟ ಸೇವಿಸಿ ಮಕ್ಕಳು ಅಸ್ವಸ್ಥ
ಅರಸೀಕೆರೆ: ಮಧ್ಯಾಹ್ನದ ಬಿಸಿಯೂಟ ಮಾಡಿದ ಪಟ್ಟಣದ ರಾಮಣ್ಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 13 ಮಕ್ಕಳು ತೀವ್ರ ಅಸ್ವಸ್ಥಗೊಂಡು ಸರ್ಕಾರಿ ಜೆ.ಸಿ. ಆಸ್ಪತ್ರೆಗೆ ದಾಖಲಾದ ಘಟನೆ ಗುರುವಾರ ಸಂಭವಿಸಿದೆ. ಇದರಿಂದ ಪೋಷಕರು ಕೆಲಕಾಲ ಆತಂಕಕ್ಕೊಳಗಾಗಿದ್ದ ದೃಶ್ಯ ಕಂಡು ಬಂದಿತು.
ಮನೆಗೆ ವಾಪಸ್: ಈ ಹಿನ್ನೆಲೆಯಲ್ಲಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಮೀಮ, ಜ್ಯೋತಿ, ತನುಜಾ, ಐಶ್ವರ್ಯ, ಪಲ್ಲವಿ, ಶರಾವತಿ, ದರ್ಶನ್, ಪವನ್, ಸುಹಾನ, ಕೋಮಲ, ಜಿಕ್ರಿಯಾ, ತಸ್ಮಿಯಾ, ಸಾದಿಕ್ ಎಂದಿನಂತೆ ಮಧ್ಯಾಹ್ನ ಶಾಲೆಯಲ್ಲಿ ಆಹಾರ ಸೇವಿಸಿದ್ದಾರೆ. ಕೆಲ ಹೊತ್ತಿನ ಬಳಿಕ ಈ ವಿದ್ಯಾರ್ಥಿಗಳು ವಾಂತಿ ಮಾಡಿಕೊಳ್ಳಲಾರಂಭಿಸಿದ್ದಾರೆ. ಇದರಿಂದ ಗಾಬರಿಗೊಂಡ ಶಿಕ್ಷಕರು ತಕ್ಷಣವೇ ಮಕ್ಕಳನ್ನು ಪಟ್ಟಣದ ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಅವರನ್ನು ಮನೆಗೆ ವಾಪಸ್ ಕಳುಹಿಸಲಾಗಿದೆ.
ಕಾರಣ ತಿಳಿದುಬಂದಿಲ್ಲ: ಈ ಶಾಲೆಯಲ್ಲಿ 116 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಗುರುವಾರ 110 ಮಕ್ಕಳು ಹಾಜರಾಗಿದ್ದು, ಎಲ್ಲರೂ ಬಿಸಿಯೂಟ ಸೇವಿಸಿದ್ದರಾದರೂ ಈ 13 ಮಕ್ಕಳಲ್ಲಿ ಮಾತ್ರ ವಾಂತಿ ಕಾಣಿಸಿಕೊಂಡಿದ್ದು ಸರಿಯಾದ ಕಾರಣ ತಿಳಿದುಬಂದಿಲ್ಲ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ತಾಪಂ ಅಧ್ಯಕ್ಷ ಎಚ್.ಟಿ. ಶಿವಮೂರ್ತಿ, ಕಸಾಪ ತಾಲ್ಲೂಕು ಅಧ್ಯಕ್ಷ ಮೇಲೇಗೌಡ ಮತ್ತಿತರ ಮುಖಂಡರು ಸೇರಿದಂತೆ ಅಕ್ಷರ ದಾಸೋಹ ಅಧಿಕಾರಿ ಪ್ರಕಾಶ್ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.
ಮಕ್ಕಳ ತಪಾಸಣೆ ನಡೆಸಿದ ವೈದ್ಯಾಧಿಕಾರಿ ಡಾ. ಸರ್ವಮಂಗಳ ಸಕಾಲಕ್ಕೆ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದರಿಂದ ಯಾವುದೇ ರೀತಿಯ ತೊಂದರೆ ಎದುರಾಗಿಲ್ಲ. ಅನಗತ್ಯ ಆತಂಕ ಬೇಡ ವೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

