ವಿಭಾಗ ಮಟ್ಟದ ಯುವಜನ ಮೇಳ
ಹಾಸನ: ಕಳೆದ ಸಾಲಿನ ಮೈಸೂರು ವಿಭಾಗ ಮಟ್ಟದ ಯುವಜನ ಮೇಳವನ್ನು, ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ರಂಗಮಂದಿರದಲ್ಲಿ ಡಿ. 21ರಿಂದ ಡಿ. 23 ರವರೆಗೆ ನಡೆಸಲಾಗುತ್ತಿದ್ದು, ಈ ಯುವಜನ ಮೇಳದಲ್ಲಿ ಕಳೆದ ಫೆ. 15ರಂದು ನಡೆದ ಹಾಸನ ಜಿಲ್ಲಾ ಮಟ್ಟದ ಯುವಜನ ಮೇಳದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಮತ್ತು ತಂಡ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಯುವಕ ಯುವತಿಯರು ಭಾಗವಹಿಸಲು ಅರ್ಹರಾಗಿದ್ದಾರೆ.
ಸ್ಪರ್ಧಿಗಳು ಡಿ. 21ರಂದು ಬೆಳಗ್ಗೆ 9ರೊಳಗಾಗಿ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ರಂಗಮಂದಿರದಲ್ಲಿ ತಂಡದ ವ್ಯವಸ್ಥಾಪಕರಿಗೆ ವರದಿ ಮಾಡಲು ಸೂಚಿಸಿದೆ. ಸ್ಪರ್ಧೆಗಳು ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ. ಸ್ಪರ್ಧಿಗಳಿಗೆ ಪ್ರಯಾಣ ಭತ್ಯೆಯನ್ನು ಫೆ. 23ರಂದು ನಂಜನಗೂಡಿನಲ್ಲಿ ವಿತರಿಸಲಾಗುವುದು. ಹೆಚ್ಚಿನ ವಿವರಗಳಿಗೆ ದೂರವಾಣಿ 08172-246056 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶಿವಾನಂದ ತಿಳಿಸಿದ್ದಾರೆ.
ಲಿಖಿತ ಪರೀಕ್ಷಾ ಪೂರ್ವ ತರಬೇತಿ ಶಿಬಿರ
ಹಾಸನ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಅವರು ಕೇಂದ್ರ ಸರ್ಕಾರದ ನಾನಾ ಇಲಾಖೆಗಳಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಂ್ಡಟಡ್ಝಿ ಖಿಛಡ್ಞ್ಝಟ್ಜಿ ಖಡಿಛಜಿಜಿ), ನಾನ್ ಟೆಕ್ನಿಕಲ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗಾಗಿ ಲಿಖಿತ ಪರೀಕ್ಷಾ ಪೂರ್ವಭಾವಿ ತರಬೇತಿ ಶಿಬಿರವನ್ನು ಉಚಿತವಾಗಿ, ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೆರಿಯಲ್ಲಿ ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಸ್ಟಡಿ ಸರ್ಕಲ್ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಪರೀಕ್ಷಾ ಪೂರ್ವ ತರಬೇತಿ ಶಿಬಿರದಲ್ಲಿ ಅನುಭವಿ ನುರಿತ ಸಂಪನ್ಮೂಲ ಉಪನ್ಯಾಸಕರಿಂದ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನವನ್ನು ನೀಡಲಾಗುತ್ತದೆ. ತರಬೇತಿ ಶಿಬಿರದ ಸದುಪಯೋಗವನ್ನು ಪಡೆಯಲು ಇಚ್ಛಿಸುವ ಅಭ್ಯರ್ಥಿಗಳು ಡಿ.19ರಿಂದ ಡಿ. 31ರವರೆಗೆ ನಡೆಯುವ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ಹೆಚ್ಚಿನ ಅನುಭವ ಪಡೆಯುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕ:ಕೇರಿ ಹಾಸನ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ. 08172-268374 ಅನ್ನು ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

