ಹಾಸನ

ಕೆರೆ ಒತ್ತುವರಿ ಮಾಡಿದ್ದ ಕಟ್ಟಡ ತೆರವು

Published On :

ಕ.ಪ್ರ.ವಾರ್ತೆ ಅರಸೀಕೆರೆ ಡಿ. 19
ಅಕ್ರಮವಾಗಿ ಕೆರೆ ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿದ್ದನ್ನು ತೆರವುಗೊಳಿಸಲು ತೆರಳಿದ್ದ ತಹಸೀಲ್ದಾರ್ ಹಾಗೂ ಇತರೆ ಅಧಿಕಾರಿಗಳನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಕಾಮಸಮುದ್ರ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ದಯಾನಂದ್ ಎಂಬವರು ಕೆರೆಯನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿಕೊಂಡಿದ್ದರು. ಅಲ್ಲದೇ ಈ ಕಟ್ಟಡವನ್ನು ಕಾವೇರಿ ಗ್ರಾಮೀಣ ಬ್ಯಾಂಕಿಗೆ ಬಾಡಿಗೆ ನೀಡಿದ್ದು ಈ ಸಂಬಂಧ ತಾಲೂಕು ಆಡಳಿತ ಕಟ್ಟಡ ತೆರವುಗೊಳಿಸುವಂತೆ ನೋಟಿಸ್ ನೀಡಿದ್ದರು.
ಹೀಗಿದ್ದರೂ ವಾರಸುದಾರರು ಕಟ್ಟಡ ತೆರವುಗೊಳಿಸುವ ಸಂಬಂಧ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಆದ್ದರಿಂದ ತಹಸೀಲ್ದಾರ್ ಕೇಶವಮೂರ್ತಿ, ಭೂದಾಖಲೆಗಳ ಸಹಾಯಕ ನಿರ್ದೇಶಕ ವೇಣುಗೋಪಾಲ್, ಉಪನಿರ್ದೇಶಕ ಮೂರ್ತಿ ಸೇರಿದಂತೆ ಕಂದಾಯ ಅಧಿಕಾರಿಗಳು ಜೆಸಿಬಿ ಮೂಲಕ ಕಟ್ಟಡ ತೆರವುಗೊಳಿಸಿದರು.
ಕಟ್ಟಡ ತೆರವುಗೊಳಿಸುವ ವೇಳೆ ಮಾಲೀಕರು ಅಧಿಕಾರಿಗಳೊಂದಿಗೆ ದುರ್ವರ್ತನೆ ತೋರಿ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.