ಹಾಸನ

ಎರಡು ದಿನಗಳ ಸಮಾರಂಭಕ್ಕೆ ದೇವೇಗೌಡ ಚಾಲನೆ

Published On :

ಹೊಳೆನರಸೀಪುರ: ತಾಲೂಕಿನ ದೊಡ್ಡಕುಂಚೆ ಗ್ರಾಮದಲ್ಲಿನ ನವೋದಯ ವಿದ್ಯಾ ಸಂಘದ ಪ್ರೌಢಶಾಲೆಯು ಸ್ಥಾಪನೆಯಾಗಿ 50 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಡಿ. 21 ಮತ್ತು ಡಿ. 22ರಂದು ಶಾಲಾ ಆವರಣದಲ್ಲಿ ಸುವರ್ಣ ಮಹೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಆಡಳಿತ ಮಂಡಳಿ ತಿಳಿಸಿದೆ.
ಮೊದಲ ದಿನದ ಕಾರ್ಯಕ್ರಮ: ಸುವರ್ಣ ಮಹೋತ್ಸವ ಉದ್ಘಾಟನೆಯನ್ನು ಮಾಜಿ ಪ್ರಧಾನಿ ಹಾಗೂ ಸಂಸದ ಎಚ್.ಡಿ. ದೇವೇಗೌಡ ಅವರು ಡಿ. 21ರಂದು ನೆರವೇರಿಸಲಿದ್ದಾರೆ. ಆನಂತರ, ಸುವರ್ಣ ಮಹೋತ್ಸವದ ಸ್ಮರಣ ಸಂಚಿಕೆಯನ್ನು ರಾಜ್ಯದ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಅವರು ಬಿಡುಗಡೆಗೊಳಿಸುವರು.
ಅಕ್ಷರ ದಾಸೋಹ ಕೊಠಡಿಯನ್ನು ಶಾಸಕ ಎಚ್.ಡಿ. ರೇವಣ್ಣ ಅವರು ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ತುಮಕೂರಿನ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ. ಡಾ. ವೀರೇಶಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡುವರು.
ನಂತರ ನಡೆಯುವ ಸಮಾರಂಭದಲ್ಲಿ ಚನ್ನರಾಯಪಟ್ಟಣ ತಾಲೂಕಿನ ತಹಸೀಲ್ದಾರ್ ಡಾ.ಎಚ್.ಎಲ್. ನಾಗರಾಜ್ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಪರಿಸರ ಪ್ರೇಮಿ ಚ.ನಾ.ಅಶೋಕ್ ಉಪನ್ಯಾಸ ನೀಡುವರು.
2ನೇ ದಿನದ ಕಾರ್ಯಕ್ರಮ: ಡಿ.22 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಮಾಜಿ ಶಾಸಕರಾದ ಡಾ.ಎನ್.ಬಿ. ನಂಜಪ್ಪ, ಸಿ.ಎಸ್.ಪುಟ್ಟೇಗೌಡ, ಶಾಸಕರಾದ ವೈ.ಎನ್. ರುದ್ರೇಶಗೌಡ, ಎ. ಮಂಜು, ವಿಧಾನಪರಿಷತ್ ಸದಸ್ಯರಾದ ಬಿ.ಬಿ. ಶಿವಪ್ಪ, ಗೋ. ಮಧುಸೂದನ್ ಹಾಗೂ ತಾಲೂಕಿನ ಕಾಂಗ್ರೆಸ್ ನಾಯಕಿ ಅನುಪಮ ಅವರು ಭಾಗವಹಿಸುವರು.
 ನಂತರ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಹಾಗೂ ಸಾಹಿತಿ ಡಾ.ಮಳಲಿ ವಸಂತಕುಮಾರ್ ಅವರು ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಬಳ್ಳಾರಿಯ ಪಾದ್ರಿ ಪ್ರಕಾಶ್ ಭಾಗವಹಿಸುವರು. ನಂತರ ಸಾಂಸ್ಕೃತಿಕ ಕಾರ್ಯಕ್ರಮದಡಿಯಲ್ಲಿ ಚಲನಚಿತ್ರ ನಟ ನಾಗರಾಜ್ ಕೋಟೆ ಅವರಿಂದ ಹಾಸ್ಯ ಕಾರ್ಯಕ್ರಮ ನಡೆಯಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.