ಹಾಸನ

ತಾಪಂ ಅಧ್ಯಕ್ಷರಾಗಿ ಶಾಂತಮ್ಮ ಆಯ್ಕೆ

Published On :

ಕ.ಪ್ರ.ವಾರ್ತೆ ,  ಬೇಲೂರು ,  ಡಿ.20
ತಾಲೂಕು ಪಂಚಾಯ್ತಿ ಅಧ್ಯಕ್ಷರಾಗಿ ಬೇಣ್ಣೂರು ಕ್ಷೇತ್ರದ ಬಿಜೆಪಿಯ ಶಾಂತಮ್ಮಮಹದೇವಯ್ಯ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು.
ಬೇಲೂರು ತಾಲೂಕು ಪಂಚಾಯ್ತಿ 2ನೇ  ಅವಧಿಗೆ ಸಾಮಾನ್ಯ ಮಹಿಳೆಗೆ ಮೀಸಲಾದ್ದರಿಂದ ಬಿಜೆಪಿ ಹಾಗೂ ಜೆಡಿಎಸ್ ಅಧಿಕಾರ ಹಂಚಿಕೆ ಮಾಡಿಕೊಂಡಿದ್ದು ಮೊದಲ ಬಾರಿಗೆ ಜೆಡಿಎಸ್‌ನ ಸುಮಿತ್ರರುದ್ರಯ್ಯ ಅಧಿಕಾರದ ನಂತರ ಒಪ್ಪಂದದಂತೆ ಎರಡನೆ ಅವಧಿಗೆ ಬಿಜೆಪಿಯ ಶಾಂತಮ್ಮಮಹದೇವಯ್ಯ ಒಬ್ಬರೇ ನಾಮ ಪತ್ರ ಸಲ್ಲಿಸಿರುವುದರಿಂದ ಇವರನ್ನು ಚುನಾವಣಾಧಿಕಾರಿಯಾಗಿದ್ದ ಸಕಲೇಶಪುರ ಉಪ ವಿಭಾಗಾಧಿಕಾರಿ ಶರತ್ ಅವರು ಬಿಜೆಪಿಯ ಬೆಣ್ಣೂರು ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಂತಮ್ಮಮಹದೇವಯ್ಯ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು. ನೂತನ ತಾಲೂಕು ಪಂಚಾಯ್ತಿ ಅಧ್ಯಕ್ಷೆ ಶಾಂತಮ್ಮ ಮಹದೇವಯ್ಯ ಮಾತನಾಡಿ, ಬೇಲೂರು ತಾಲೂಕಿನಲ್ಲಿರುವ ಸಮಸ್ಯೆಗಳಾದ ಕುಡಿಯುವ ನೀರು, ರಸ್ತೆ, ವಿದ್ಯುತ್ ದೀಪ ಹಾಗೂ ಇನ್ನಿತರೆ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸಕಲೇಶಪುರ ಉಪ ವಿಭಾಗಾಧಿಕಾರಿ ಶರತ್, ಕಾರ್ಯನಿರ್ವಾಹಣಾಧಿಕಾರಿ. ಬಸವರಾಜು ಕಲ್ಲಪ್ಪ ಅಯ್ಯಣನವರ್, ಸಕಲೇಶಪುರ ಉಪ ವಿಭಾಗಾಧಿಕಾರಿ ಕಚೇರಿಯ ಉಪ ತಹಸೀಲ್ದಾರ್ ಬಸವರಾಜು, ತಾಲೂಕು ಪಂಚಾಯ್ತಿ  ಎಲ್ಲಾ ಸದಸ್ಯರು ಮತ್ತು ಅಭಿಮಾನಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.