'ಯುವಕರಿಗೆ ಮೋದಿ ಪ್ರಧಾನಿಯಾಗುವ ಹಂಬಲವಿದೆ'
ಬೇಲೂರು: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಈ ದೇಶದ ಪ್ರಧಾನಿಯಾಗಬೇಕು ಎಂಬ ಹಂಬಲವನ್ನು ಯುವಕರು ವ್ಯಕ್ತಪಡಿಸುತ್ತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಗೋ. ಮಧುಸೂದನ್ ಹೇಳಿದರು.
ನಾನಾ ಪ್ರಗತಿಪರ ಸಂಘಟನೆಗಳ ಗೌರವಾಧ್ಯಕ್ಷ ಕೆ. ಸುದರ್ಶನ್ ಅವರ ನಿವಾಸಕ್ಕೆ ಅವರೊಂದಿಗೆ ಶುಕ್ರವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸೂಕ್ತವಾದ ವೇದಿಕೆ: ಈ ದೇಶವನ್ನು ಭ್ರಷ್ಟಾಚಾರದ ಕಪಿಮುಷ್ಟಿಯಿಂದ ಕಾಪಾಡಲು ಇರುವ ಏಕೈಕ ಸಮರ್ಥ ವ್ಯಕ್ತಿ ನರೇಂದ್ರಮೋದಿ ಎಂಬ ಸತ್ಯ ಜನತೆಗೆ ಅರಿವಾಗತೊಡಗಿದೆ. ಅದರಲ್ಲೂ ಯುವ ಸಮೂಹವಂತೂ ನರೇಂದ್ರಮೋದಿ ಪ್ರಧಾನಿಯಾಗಲಿ ಎಂಬ ನಿಟ್ಟಿನಲ್ಲಿ ಅವಿರತವಾಗಿ ಶ್ರಮಿಸುತ್ತಿದೆ. ಬಿಜೆಪಿ ಪಕ್ಷಕ್ಕೆ ಈಗ ಉತ್ತಮ ಸಂಘಟನೆಯನ್ನು ಹೊಂದಿರುವ, ಜನತೆಯ ಬಳಿ ಉತ್ತಮ ಬಾಂಧವ್ಯವಿರುವ ಮುಖಂಡರ ಅವಶ್ಯಕತೆಯಿದೆ. ತಾಲೂಕಿನ ಬಿಜೆಪಿ ಮುಖಂಡರು ಪ್ರಗತಿಪರ ಸಂಘಟನೆ ಅಧ್ಯಕ್ಷ ಸುದರ್ಶನ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದು ಈ ನಿಟ್ಟಿನಲ್ಲಿ ತಾವು ಅವರನ್ನು ಪಕ್ಷಕ್ಕೆ ಆಹ್ವಾನಿಸಲು ಬಂದಿದ್ದು ಸೂಕ್ತವಾದ ವೇದಿಕೆಯಲ್ಲಿ ಅವರನ್ನು ಬರಮಾಡಿಕೊಳ್ಳಲಾಗುವುದು ಎಂದರು.
ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ: ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ಪಕ್ಷ ಉತ್ತಮ ಅಭ್ಯರ್ಥಿಯ ಶೋಧನೆಯಲ್ಲಿದ್ದು ಶೀಘ್ರದಲ್ಲೇ ಘೋಷಣೆಯನ್ನು ಮಾಡಲಿದೆ. ಮುಂದಿನ ತಿಂಗಳಲ್ಲಿ ಬಿಜೋಪಿ ಕೋರ್ಕ್ಮಿಟಿಯ ಸಭೆ ಸೇರಲಿದ್ದು ಅಲ್ಲಿ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲಾಗುವುದು. ಹಾಸನ ಕ್ಷೇತ್ರವನ್ನು ಪ್ರತಿಷ್ಠೆಯ ಕಣವನ್ನಾಗಿ ಬಿಜೆಪಿ ಪರಿಗಣಿಸಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ನೋಡಿ ಅವರಿಗೆ ಸೂಕ್ತ ಪ್ರತಿಸ್ಪರ್ಧಿಯನ್ನು ಹಾಕಲಾಗುವುದು ಎಂದರು.
ಪ್ರಗತಿಪರ ಸಂಘಟನೆ ಗೌರವಾಧ್ಯಕ್ಷ ಕೆ. ಸುದರ್ಶನ್ ಮಾತನಾಡಿ, ತಮಗೆ ಮೊದಲಿಂದಲೂ ಗುಜರಾತ್ ಮುಖ್ಯಮಂತ್ರಿ ಅವರ ಆಡಳಿತದ ಬಗ್ಗೆ ಅತೀವ ಪ್ರೀತಿಯಿತ್ತು. ಈಗ ಅವರು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಹೊರಹೊಮ್ಮಿರುವುದು ಸ್ವಾಗತಾರ್ಹ. ಪ್ರಸ್ತುತ ತಾವು ಜೆಡಿಎಸ್ರಾಜ್ಯ ಯುವ ಘಟಕದ ಅಧ್ಯಕ್ಷರಾಗಿದ್ದು ಈ ಹುದ್ದೆಯನ್ನು ತ್ಯಜಿಸಿದ ಬಳಿಕ ಸೂಕ್ತ ಸಮಯದಲ್ಲಿ ತಾವು ಬಿಜೆಪಿ ಸೇರುವುದಾಗಿ ತಿಳಿಸಿದರು.
ಜಿಲ್ಲಾಧ್ಯಕ್ಷರ ಸ್ವಾಗತ
ಪ್ರಗತಿಪರ ಸಂಘಟನೆಗಳ ಗೌರವಾಧ್ಯಕ್ಷ ಕೆ. ಸುದರ್ಶನ್ ಅವರು ಬಿಜೆಪಿ ಪಕ್ಷಕ್ಕೆ ಬರುವುದಾದರೆ ಮುಕ್ತಕಂಠದಿಂದ ಸ್ವಾಗತಿಸುವುದಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬೆಣ್ಣೂರು ರೇಣುಕುಮಾರ್ ತಿಳಿಸಿದ್ದಾರೆ. ತಾಲೂಕಿನಲ್ಲಿ ಸಮಾಜಸೇವೆ ಹಾಗೂ ಪ್ರಗತಿಪರ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡು ತಮ್ಮದೇ ಆದ ಛಾಪು ಮೂಡಿಸಿರುವ ಕೆ. ಸುದರ್ಶನ್ ಅಂತಹವರು ಮೋದಿ ಮೇಲಿನ ಭರವಸೆಯಿಂದ ಪಕ್ಷಕ್ಕೆ ಬರುವುದಾಗಿ ತಮಗೆ ತಿಳಿಸಿದ್ದು ತುಂಬು ಹೃದಯದಿಂದ ಸ್ವಾಗತಿಸುವುದಾಗಿ ಹೇಳಿದರು. ತಾಲೂಕು ಬಿಜೆಪಿ ಅಧ್ಯಕ್ಷ ಆನಂದ್, ಮಾಜಿ ಅಧ್ಯಕ್ಷ ಅಡಗೂರು ಬಸವರಾಜು, ಜಿ.ಪಂ ಸದಸ್ಯ ಅಮಿತ್ ಶೆಟ್ಟಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

