ಸಿಇಟಿ ಕಾಯ್ದೆ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಹಾಸನ: ರಾಜ್ಯ ಸರ್ಕಾರ ವೃತ್ತಿ ಶಿಕ್ಷಣದಲ್ಲಿ ಹೊಸ ಕಾಯ್ದೆ ಜಾರಿಗೆ ತರುವುದನ್ನು ಖಂಡಿಸಿ ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ಪ್ರಾರಂಭಿಸಿ ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದು ಕೆಲ ಸಮಯ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ವಿದ್ಯಾರ್ಥಿಗಳಿಗೆ ತೊಂದರೆ: ಸರ್ಕಾರ 2006ರ ಕಾಯ್ದೆಯನ್ನು ಜಾರಿಗೊಳಿಸಲು ಮುಂದಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ. ಸಿಇಟಿ ಆರಂಭದ ಮೂಲ ಆಶಯಕ್ಕೆ ಈ ಕಾಯ್ದೆ ಕೊಡಲಿ ಪೆಟ್ಟು ನೀಡಿದೆ. ಸಾಮಾಜಿಕ ನ್ಯಾಯವನ್ನು ವೃತ್ತಿ ಶಿಕ್ಷಣದಲ್ಲೂ ಒದಗಿಸುವ ನಿಟ್ಟಿನಲ್ಲಿ ಸಿಇಟಿ ಆರಂಭಿಸಿದ್ದು, ಹೊಸ ಕಾಯ್ದೆ ಜಾರಿಗೆ ಬಂದರೆ ಇವೆಲ್ಲವನ್ನು ಕಸಿದುಕೊಳ್ಳಲಿದೆ. ಇದರಿಂದ ಬಡ, ಮದ್ಯಮ ವರ್ಗದ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ ಎಂದು ಆರೋಪಿಸಿದರು.
ಖಾಸಗೀಕರಣಕ್ಕೆ ಕಡಿವಾಣ ಹಾಕಿ: ಪ್ರಸ್ತುತ ಖಾಸಗಿ ಕಾಲೇಜುಗಳಲ್ಲಿ ಸಿಗುತ್ತಿರುವ ಸರ್ಕಾರ ಕೋಟಾ ಸೀಟುಗಳು ಹೊಸ ಕಾಯ್ದೆಯಲ್ಲಿ ಸಂಪೂರ್ಣವಾಗಿ ಲಭ್ಯವಾಗುವುದಿಲ್ಲ. ಈ ಕಾಯ್ದೆ ಅನುಷ್ಠಾನದಿಂದ ಖಾಸಗಿ ಕಾಲೇಜುಗಳಿಗೆ ಅನುಕೂಲ ಆಗಲಿದ್ದು, ಮುಂದಿನ ವರ್ಷದಿಂಧ ವಿದ್ಯಾರ್ಥಿಗಳು ಹೆಚ್ಚಿನ ಶುಲ್ಕ ಭರಿಸಬೇಕಾಗುತ್ತದೆ. ಇದು ಬಡವರ್ಗದವರಿಗೆ ಕಷ್ಟಸಾಧ್ಯವಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಈ ಕಾಯ್ದೆ ಜಾರಿಯ ನಿರ್ಧಾರ ಹಿಂಪಡೆದು ವೃತ್ತಿ ಶಿಕ್ಷಣ ಖಾಸಗೀಕರಣಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ಪಟ್ಟು: ಸರ್ಕಾರ ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿಯದೇ ವಿದ್ಯಾರ್ಥಿಗಳ ಹಿತ ಕಾಪಾಡಲು ಮುಂದಾಗಬೇಕು. ಜನಪರ ಮೊದಲಿನ ಸಿಇಟಿ ವ್ಯವಸ್ಥೆಯನ್ನು ಮುಂದುವರೆಸಬೇಕು. ವೃತ್ತಿ ಶಿಕ್ಷಣ ಪ್ರವೇಶ 2006ರ ಕಾಯ್ದೆಯನ್ನು ಜಾರಿಗೆತರಬಾರದು ಎಂದು ಪಟ್ಟು ಹಿಡಿದರು.
ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಜಯರಾಮ್ ನಾಯಕರಹಳ್ಳಿ, ಚೆಲುವರಾಜ್ ಹೊನ್ನೇನಹಳ್ಳಿ, ಮಲ್ಲೇಶ್ ಅಂಬುಗ ಹಾಗೂ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

