ಹಾಸನ

ಹೊಳೆನರಸೀಪುರದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

Published On :

ಹೊಳೆನರಸೀಪುರ: ಬಡ ವಿದ್ಯಾರ್ಥಿಗಳನ್ನು ವೃತ್ತಿ ಶಿಕ್ಷಣದಿಂದ ವಂಚಿರನ್ನಾಗಿಸುವ ಹುನ್ನಾರದೊಂದಿಗೆ ರಾಜ್ಯ ಸರ್ಕಾರವು ಜಾರಿಗೊಳಿಸಲು  ನಿರ್ಧರಿಸಿರುವ 2006ರ ಸಿಇಟಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ರಾಜ್ಯ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯನ್ನು ಖಂಡಿಸಿ ಶುಕ್ರವಾರ ನೂರಾರು ವಿದ್ಯಾರ್ಥಿಗಳು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರಲ್ಲದೇ. ಗಾಂಧೀ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು.
ತಾಲೂಕು ಎಬಿವಿಪಿ ಮುಖಂಡರ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪಟ್ಟಣದ ಹೇಮಾವತಿ ವೃತ್ತದಿಂದ ಮೆರವಣಿಗೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಹೊರಟು ಪೇಟೆ ಬೀದಿ ಮೂಲಕ ಗಾಂಧಿವೃತ್ತಕ್ಕೆ ಆಗಮಿಸಿ ಮಾನವ ಸರಪಳಿಯನ್ನು ನಿರ್ಮಿಸಿ, ಸರ್ಕಾರದ ನೀತಿಯನ್ನು ಖಂಡಿಸಿದರಲ್ಲದೇ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು.
ಸಿಇಟಿ ನೂತನ ನೀತಿಯನ್ನು ಅನುಷ್ಠಾನಕ್ಕೆ ತರುವುದನ್ನು ರಾಜ್ಯ ಸರ್ಕಾರ ಕೈಬಿಟ್ಟು ಈಗ ಇರುವ ನೀತಿಯನ್ನೇ ಮುಂದುವರೆಸಬೇಕೆಂದು ಆಗ್ರಹ ಪಡಿಸಿದರು.
ಪ್ರತಿಭಟನೆ ನಂತರ ವಿದ್ಯಾರ್ಥಿಗಳು ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಶಿವಶಂಕರಪ್ಪ ಅವರಿಗೆ ಮನವಿ ಪತ್ರ ಅರ್ಪಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಎಬಿವಿಪಿ ಸಂಚಾಲಕ ಅಮಿತ್, ತಾಲೂಕು ಪ್ರಮುಖಖ್ಯೋಗಾನರಸಿಂಹ, ನಗರ ಕಾರ್ಯದರ್ಶಿ ಅಭಿಷೇಕ್, ನಗರ ಕಾರ್ಯದರ್ಶಿ ರಮ್ಯ, ಚೈತ್ರ, ವಿದ್ಯಾರ್ಥಿ ಸಹ ಪ್ರಮುಖ್ ಅಶ್ವಿನಿ, ಲಿಖಿತ ಸೇರದಂತೆ ಎಬಿವಿಪಿ ಮುಖಂಡರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.