'ತಾಲೂಕು ದಂಡಾಧಿಕಾರಿಗಳಿಂದ ತಾರತಮ್ಯ'
ಕ.ಪ್ರ.ವಾರ್ತೆ ಚನ್ನರಾಯಪಟ್ಟಣ ಡಿ.21
ಮರಳು ಸಾಗಾಣಿಕೆಯಲ್ಲಿ ತಾಲೂಕು ದಂಡಾಧಿಕಾರಿಗಳು ತಾರತಮ್ಯ ಎಸಗುತ್ತಿದ್ದು, ಇದೇ ಕ್ರಮ ಮುಂದುವರಿದರೆ ತಾಲೂಕು ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಶಾಸಕ ಎಚ್.ಡಿ. ರೇವಣ್ಣ ಎಚ್ಚರಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಕರೆದಿದ್ದ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದ ದಂಡಿಗನಹಳ್ಳಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ ಮರಳು ಸಾಗಾಣಿಕೆಯಲ್ಲಿ ತಹಸೀಲ್ದಾರ್ ಡಾ. ನಾಗರಾಜು ಅವರು ದ್ವೇಷದ ಕಾರ್ಯ ನಡೆಸುತ್ತಿದ್ದು, ಕೆಲವು ಲಾರಿ ಮಾಲಿಕರಿಗೆ, ಮರಳು ಸಾಗಾಣಿಕೆಗೆ ಅವಕಾಶ ನೀಡಿ ಕೆಲವರಿಗೆ ಮಾತ್ರ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಧರಣಿಯ ಎಚ್ಚರಿಕೆ: ಮರಳು ಸಾಗಾಣಿಕೆಯಲ್ಲಿ ತಾರತಮ್ಯ ನೀತಿಯನ್ನು ಅನುಸರಿಸುತ್ತಿರುವ ಬಗ್ಗೆ ಕೆಲ ಗ್ರಾಮಸ್ಥರು ದೂರು ನೀಡಿದ್ದು, ಮುಂದಿನ ದಿನಗಳಲ್ಲಿ ಇಂತಹ ಸನ್ನಿವೇಶ ಮೂಡಿದರೆ ತಾಲೂಕು ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ತಿಳಿಸಿದರು. ಕ್ರಮಕ್ಕಾಗಿ ಪತ್ರ: ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆರೆ ಹಾಗೂ ರಸ್ತೆ ಅಭಿವೃದ್ಧಿಗೆ ಹಣವನ್ನು ಮೀಸಲಿಟ್ಟು ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು. ಇದನ್ನು ನಿರ್ಲಕ್ಷ ಮಾಡಿದರೆ ಅವರ ವಿರುದ್ಧ ಕ್ರಮಕ್ಕೆ ಬರೆಯಲಾಗುವುದು ಎಂದು ಎಚ್ಚರಿಸಿದರು. ಬೇಸಿಗೆ ಸಮಯ ಸಮೀಪಿಸುತ್ತಿದ್ದು, ದಂಡಿಗನಹಳ್ಳಿ ಹೋಬಳಿಯ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ಕಾಣಿಸಬಹುದು ಸಮರ್ಪಕ ಕುಡಿಯುವ ನೀರು ಪೂರೈಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಎಚ್ಚರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

