ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ
ಚನ್ನರಾಯಪಟ್ಟಣ: ಮದ್ಯಪಾನ ಮಾಡಿ ಸ್ನೇಹಿತರನ್ನು ತಮ್ಮ ವಾಹನದಲ್ಲಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತದಿಂದ ಆತ ಮೃತಪಟ್ಟರೆ ಆತನನ್ನು ಕೊಲೆ ಮಾಡಿದಂತಾಗುತ್ತದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಶೈಲೇಂದ್ರ ತಿಳಿಸಿದರು.
ಪಟ್ಟಣದ ಶಿವಜ್ಯೋತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮದ್ಯಪಾನ ಮಾಡಿ, ವಾಹನ ಚಾಲನೆ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಮದ್ಯ ವ್ಯಸನಿಗಳು ತಾವು ಮದ್ಯಪಾನ ಮಾಡಿದ್ದರೂ ತಮ್ಮ ಸ್ನೇಹಿತರನ್ನು ಕರೆದು ತಮ್ಮ ವಾಹನದಲ್ಲಿ ಕುಳ್ಳಿರಿಸಿಕೊಂಡು ಅಪಘಾತವಾಗಿ ಮೃತಪಟ್ಟರೆ, ಆ ವಾಹನದ ಚಾಲನೆ ಮಾಡುತ್ತಿದವನು ಕೊಲೆ ಮಾಡಿದಂತಾಗುತ್ತದೆ ಎಂದು ತಿಳಿಸಿದರು.
ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುತ್ತಿರುವ ಸಂದರ್ಭದಲ್ಲಿಯೇ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುತ್ತಿರುವವರಿಗೆ ದಂಡ ವಿಧಿಸಲಾಗುತ್ತಿದೆ. ಮದ್ಯ ಸೇವನೆ ಸಂದರ್ಭದಲ್ಲಿ ವಾಹನ ಚಾಲನೆ ಬೇಡ ಎಂದು ಅವರಲ್ಲಿಯೇ ಮೂಡಬೇಕು ಎಂದು ತಿಳಿಸಿದರು.
ತಾಲೂಕಿನಲ್ಲಿ ಗ್ಯಾಂಗ್ವಾರ್, ಹಾಗೂ ಅಹಿತಕರ ಘಟನೆಗಳನ್ನು ಹತ್ತಿಕ್ಕಲು ಪೋಲಿಸ್ ಇಲಾಖೆ ತಮ್ಮ ನಿಯಂತ್ರಣ ಕಾಯ್ದುಕೊಂಡಿದ್ದು, ಕೆಲವರ ವಿರುದ್ಧ ರೌಡಿ ಶೀಟ್ಗಳನ್ನು ತೆರೆಯಲಾಗಿದೆ. ತಾಲೂಕಿನಲ್ಲಿ ಇಬ್ಬರನ್ನು ಗಡಿಪಾರು ಮಾಡಲು ಕೋರಲಾಗಿದೆ ಎಂದು ತಿಳಿಸಿದರು.
ಆಟೋ ಮಾಲಿಕರಿಗೆ ಎಚ್ಚರ: ಪಟ್ಟಣದಲ್ಲಿ ಆಟೋ ಚಾಲಕರು ತಮ್ಮ ವಾಹನದಲ್ಲಿ ಅವರ ಸ್ವ- ವಿವರ ಹಾಗೂ ಡಿಎಲ್ನ್ನು ಪ್ರದರ್ಶಿಸಬೇಕು. ದಾಖಲಾತಿಯಿಲ್ಲದ ವಾಹನಗಳಿಗೆ ಅವಕಾಶ ನೀಡುವುದಿಲ್ಲ. ಮುಂದಿನ ಜ. 31ರವರೆಗೆ ಅವಕಾಶ ನೀಡಿದ್ದು, ನಂತರದಲ್ಲಿ ವಾಹನದ ಎಪ್.ಸಿ, ವಿಮೆ, ವಾಹನ ಚಾಲನಾ ಪರವಾನಗಿಯಿಲ್ಲದೆ ಚಾಲನೆ ಮಾಡುವ ಆಟೋಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಾರ್ವಜನಿಕವಾಗಿ ಕೆಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿ, ಪಟ್ಟಣದಲ್ಲಿ ಹಿಂದೆ ಲಾಡ್ಜ್ಗಳಲ್ಲಿ ವೇಶ್ಯಾವಾಟಿಕೆ ನಡೆಯುತ್ತಿತ್ತು. ಪೋಲಿಸರ ಮದ್ಯ ಪ್ರವೇಶದಿಂದ ಅದು ನಿಯಂತ್ರಣಕ್ಕೆ ಬಂದಿದ್ದು, ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಹೆಣ್ಣು ಮಕ್ಕಳನ್ನು ಓಲೈಸಿಕೊಂಡು ಮನೆಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ. ಇದನ್ನು ಮೊದಲು ನಿಯಂತ್ರಿಸಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ, ಸಬ್ ಇನ್ಸ್ಪೆಕ್ಟರ್ಗಳಾದ ರಾಜು, ಸುರೇಶ್, ರೇಖಾಭಾಯಿ ಹಾಗೂ ಜಗದೀಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

