ಹಾಸನ

ಕಟ್ಟಡ ತೆರವು ಕಾರ್ಯಾಚರಣೆ ಪ್ರಾರಂಭ

Published On :

ಕ.ಪ್ರ.ವಾರ್ತೆ ,  ಸಕಲೇಶಪುರ್ಣ ಡಿ. 22
ಪುರಸಭೆ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಈಗಿನಿಂದಲೇ ಪ್ರಾರಂಭಿಸಲಾಗುವುದು ಎಂದು ಪುರಸಭೆ ಅಧ್ಯಕ್ಷ ಎಸ್.ಎನ್. ಸತೀಶ್ ತಿಳಿದ್ದಾರೆ.
ಭಾನುವಾರ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದ ರಸ್ತೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗುತ್ತಿರುವ ಕಟ್ಟಡದ ಕಾಮಗಾರಿ ಕೆಲಸ ಸ್ಥಗಿತಗೊಳಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಸ್ತೆಯನ್ನು ಅಕ್ರಮಿಸಿಕೊಂಡಿರುವ ಈ ಕಟ್ಟಡವನ್ನು ತೆರವುಗೊಳಿಸುವಂತೆ ಈ ಹಿಂದೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಅದರಂತೆ ಕಟ್ಟಡದ ಮಾಲೀಕರಿಗೆ ನೋಟಿಸ್ಸ್‌ಹ ಜಾರಿಗೊಳಿಸಲಾಗಿದೆ.  ಆದರೂ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದೆ. ಆದ್ದರಿಂದ ಪುರಸಭೆ ಅಧಿಕಾರಿಗಳು ಕಟ್ಟಡ ಕಾಮಗಾರಿ ಕೆಲಸ ನಿಲುಗಡೆ ಮಾಡಲು ಮುಂದಾದ ಸಂದರ್ಭದಲ್ಲಿ ಪುರಸಭೆ ನೌಕರರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ.  ಈ ಸಂದರ್ಭದಲ್ಲಿ ದಸಂಸ ಮುಖಂಡರು ಸ್ಥಳಕ್ಕೆ ಬರುವ ಮೂಲಕ ಕಾಮಗಾರಿ ಸ್ಥಗಿತಗೊಳಿಸಲು ಸಹಾಯ ಮಾಡಿದ್ದಾರೆ ಎಂದರು.  
ರಸ್ತೆ ಒತ್ತುವರಿ ಮಾಡಿ ಕಟ್ಟಲಾಗಿರುವ ಈ ಕಟ್ಟಡ ಸೇರಿದಂತೆ ಪಟ್ಟಣದ ಪಾದಚಾರಿ ರಸ್ತೆಯಲ್ಲಿ ಇರುವ ಅಂಗಡಿಗಳು, ರಸ್ತೆಗಳನ್ನು ಒತ್ತುವರಿಮಾಡಿ ನಿರ್ಮಿಸಿರುವ ಕಟ್ಟಡಗಳನ್ನು ತೆರವುಗೊಳಿಸುವ ತಿರ್ಮಾನಕ್ಕೆ ಬರಲಾಗಿದೆ ಎಂದರು.
ಈ ಸಂದರ್ಭದಲ್ಲಿ ಪುರಸಭ ಅಧಿಕಾರಿ ಮಂಜುನಾಥ್, ದಸಂಸ ಮುಖಂಡ ಮಲ್ಲಪ್ಪ ಹಾಗೂ ಇತರರು ಇದ್ದರು.
ಹೇಳಿಕೆ: ಪುರಸಭೆ ಕಟ್ಟಡ ನಿರ್ಮಿಸಲು ಕೊಟ್ಟಿರುವ ಪರವಾನಗಿಯಂತೆ ಕಟ್ಟಡ ನಿರ್ಮಿಸಲಾಗುತ್ತಿದೆ. ಆದರೆ ಇದುವರೆಗೆ ಸುಮ್ಮನಿದ್ದ ಪುರಸಭೆ ಅಧಿಕಾರಿಗಳು ಕಟ್ಟಡ ಪೂರ್ಣಹಂತ ತಲುಪಿದ ನಂತರ ಕಟ್ಟಡ ಕೆಡುವ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದು ಕಟ್ಟಡ ಮಾಲೀಕ ಬಾನುಧಾಸ್ ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.