ಹಾಸನ

'ಮಹಿಳೆಯರು ಸಮಾಜಮುಖಿಯಾಗಬೇಕು'

Published On :

ಅರಕಲಗೂಡು: ಮಹಿಳೆಯರು ಕಾನೂನಿನ ಅರಿವು ಹೊಂದುವ ಸಲುವಾಗಿ ಸಮಾಜಮುಖಿಯಾಗಿ ಚಿಂತನೆಗಳನ್ನು ಮಾಡುವುದರ ಜೊತೆಗೆ ವಿವಿಧ ಸಂಘ ಸಂಸ್ಥೆಗಳಲ್ಲ ತೊಡಗಿಸಿಕೊಳ್ಳುವಂತಾಗಬೇಕು ಎಂದು ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಬಿ.ಕೆ. ಗಿರೀಶ್ ತಿಳಿಸಿದ್ದಾರೆ.
ಅವರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಮಹಿಳಾ ಜ್ಞಾನ ವಿಕಾಸ ಯೋಜನೆಯಡಿ ಕಾನೂನು ಮಾಹಿತಿ ಕಾರ್ಯಕ್ರಮ ಮತ್ತು ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ಮಹಿಳೆಯರು ಸಂಘ ಸಂಸ್ಥೆಗಳು ಮತ್ತು ಸಭೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಮೂಲಕ ಕಾನೂನಿನ ಅರಿವು ಹೊಂದಲು ಸಾಧ್ಯವಾಗುತ್ತದೆ. ಮಹಿಳೆಯರು ಕಾನೂನು ಸಾಕ್ಷರರಾದಾಗ ಮಾತ್ರ ಶೋಷಣೆಗಳಿಂದ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ವಹಿಸಿದ್ದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಆರಕ್ಷಕ ಠಾಣಾ ಉಪ ನಿರೀಕ್ಷಕ ರೇವಣ್ಣ ಮಾತನಾಡಿ ಸಂಘಗಳಲ್ಲಿ ಸರಿಯಾದ ರೀತಿಯಲ್ಲಿ ಲೆಕ್ಕಪತ್ರಗಳನ್ನು ಇಟ್ಟು ಪಾರದರ್ಶಕತೆಯನ್ನು ಕಾಪಾಡಬೇಕು. ಇದರಿಂದ ಸಂಘಗಳಲ್ಲಿ ಬಿನ್ನಾಭಿಪ್ರಾಯಗಳಿಗೆ ಅವಕಾಶವಿಲ್ಲದೇ ಸಂಘಗಳನ್ನು ಬೆಳೆಸಲು ಸಾಧ್ಯವಾಗುತ್ತದೆ ಎಂದರು.
ವಕೀಲರ ಸಂಘದ ಕಾರ್ಯದರ್ಶಿ ಬಿ.ಟಿ.ಚಂದ್ರಶೇಖರ್ ಅವರು ಮಾತನಾಡಿ ಮಹಿಳೆಯರು ಉತ್ತಮ ಸಂಸ್ಕಾರಯುತರಾಗಿ ಕುಟುಂಬವನ್ನು ಸುಸಂಸ್ಕೃತವಾಗಿ ರೂಪಿಸುತ್ತಾರೋ ಆಗ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಮಹಿಳೆಯರು ಸಂಸ್ಕಾರಯುತ ಸಮಾಜವನ್ನು ಸಮಾಜಕ್ಕೆ ಕೊಡುಗೆಯಾಗಿ ಕೊಡುವಂತಾಗಬೇಕು ಎಂದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಚಂದ್ರಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.