'ವಿಕಲಚೇತನ ಗಿರೀಶ್ ಸಾಧನೆ ಸ್ಫೂರ್ತಿ'
ಬೇಲೂರು, ಡಿ. 22
ವಿಕಲಚೇತನರು ಯಾವುದೇ ಕ್ಷೇತ್ರದಲ್ಲೂ ಕಡಿಮೆ ಇಲ್ಲದಂತೆ ಉತ್ತಮ ಸಾದನೆ ಮಾಡಿರುವುದಕ್ಕೆ ನಮ್ಮ ಜಿಲ್ಲೆಯವರೆ ಆದ ಗಿರೀಶ್ ಅವರು ಪ್ಯಾರಾಲಿಂಪಿಕ್ಸ್‌ನಲ್ಲಿ ಉತ್ತಮ ಸಾಧನೆ ಮಾಡಿದ್ದು ಸಾಕ್ಷಿ. ಅಲ್ಲದೇ ದೇಶಕ್ಕೆ ಕೀರ್ತಿ ತಂದು ವಿಕಲಚೇತನರು ಯಾವುದರಲ್ಲೂ ಕಡಿಮೆ ಇಲ್ಲ ಎನ್ನುವುದನ್ನು ಅವರು ತೋರಿಸಿಕೊಟ್ಟಿದ್ದಾರೆ ಎಂದು ಹೊಯ್ಸಳ ಪ್ರೌಡಶಾಲೆಯ ದೈಹಿಕ ಶಿಕ್ಷಕ ನಂದೀಶ್ ತಿಳಿಸಿದರು.
ಬೇಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವೇಲಾಪುರಿ ಸಾಹಿತ್ಯ ಮತ್ತು ಸಾಂಸ್ಕತಿಕ ವೇದಿಕೆ ಮತ್ತು ಅಂಗವಿಕಲರ ಅಭ್ಯುದಯ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಅಂಗವಿಕಲರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ದಿನ ಅಂಗವಿಕಲರಿಗಾಗಿ ಕ್ರೀಡಾಕೂಟ ಏರ್ಪಡಿಸಿ, ಈ ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸುವುದಕ್ಕೆ ಮತ್ತು ತಮ್ಮಲ್ಲಿರುವ ಪ್ರತಿಭೆಯನ್ನು ತೋರ್ಪಡಿಸಿ, ನಾವು ಯಾರಿಗಿಂತ ಕಡಿಮೆ ಇಲ್ಲ ಎಂಬುವುದನ್ನು ತೋರಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.
ಸಾಧನೆ ಮಾಡಲು ಸಾಧ್ಯ: ಕಾರ್ಯಕ್ರಮದಲ್ಲಿ ಮಾತನಾಡಿದ ವೇಲಾಪುರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸಾಧನೆ ಕಾರ್ಯದರ್ಶಿ ಮಾ. ಶಿವಮೂರ್ತಿ, ನಮ್ಮ ವೇದಿಕೆಯಿಂದ ಉತ್ತಮವಾದ ಕಾರ್ಯಕ್ರಮಗಳನ್ನು ಈವರೆಗೆ ಹಮ್ಮಿಕೊಂಡು ಬರುತ್ತಿದ್ದು, ಅಂಗವಿಕಲರ ಅಭ್ಯುದಯ ಸಂಘದ ವತಿಯಿಂದ ಅಂಗವಿಕಲರಿಗಾಗಿ ಕ್ರೀಡಾಕೂಟ ಏರ್ಪಡಿಸಿ, ಸಾಮಾನ್ಯ ಜನರಂತೆ ಅಂಗವಿಕಲರು ಯಾರಿಗೂ ಕಡಿಮೆ ಇಲ್ಲ. ಇವರಿಗೆ ಅವಕಾಶಗಳನ್ನು ಕೊಟ್ಟಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ತಾಲ್ಲೂಕು ಅಂಗವಿಕಲರ ಅಭ್ಯುದಯ ಸಂಘದ ಅಧ್ಯಕ್ಷ ಉಮೇಶ್ ವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಕುಮಾರಸ್ವಾಮಿ, ಚಂದ್ರಶೇಖರ್ ಆರಾಧ್ಯ ಹಾಗೂ ಅಂಗವಿಕಲರ ಅಭ್ಯುದಯ ಸಂಘದ ಪದಾದಿಕಾರಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಅಂಗವಿಕಲ ಕ್ರೀಡಾಪಟುಗಳಿಗಾಗಿ ನಾನಾ ಕ್ರೀಡೆಗಳನ್ನು ಏರ್ಪಡಿಸಲಾತ್ತು. ಕ್ರೀಡಾಕೂಟದಲ್ಲಿ ತಾಲ್ಲೂಕಿನ ಅಂಗವಿಕಲ ಕ್ರೀಡಾಪಟುಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

