ವಿದ್ಯುತ್ ಕಡಿತ: ಸಮಸ್ಯೆ ನಿವಾರಿಸಲು ಆಗ್ರಹ
ಆಲೂರು: ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಅನಿಯಮಿತ ವಿದ್ಯುತ್ ಕಡಿತ ಮಾಡುತ್ತಿರುವುದರಿಂದಾಗಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯುಂಟಾಗುತ್ತಿದೆ ಎಂದು ಕಾರಗೋಡು ಗ್ರಾಪಂ ಸದಸ್ಯ ಎನ್.ಡಿ. ಗುರುದೇವ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಹಾಗೂ ಮಲೆನಾಡು ಭಾಗದಲ್ಲಿ ಕುಡಿಯುವ ನೀರಿಗೆ ಈಗಾಗಲೇ ಎಲ್ಲಾ ಹಳ್ಳಿಗಳು ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯ್ತಿಯ ಕುಡಿಯುವ ನೀರಿನ ಸ್ಥಾವರಗಳಿಗೆ ಹೊಂದಿಕೊಂಡಿದ್ದು, ಅಲ್ಲದೇ ಗ್ರಾಮೀಣ ಭಾಗದಲ್ಲಿ ಎಲ್ಲರೂ ಹೊಲಗದ್ದೆಗಳಲ್ಲಿ ಹಾಗೂ ತೋಟಗಳಲ್ಲಿ ಕೆಲಸ ಮಾಡುವುದರಿಂದ ಕೂಲಿ ಕೆಲಸಕ್ಕೆ ಹೋಗುವುದರಿಂದ ಗ್ರಾಮ ಪಂಚಾಯ್ತಿಗಳಲ್ಲಿ ನೀರು ನಿರ್ವಹಣೆ ಮಾಡುವುದು ಬಾರಿ ಕಷ್ಟವಾಗಿದೆ ಎಂದರು.
ಭಯದ ವಾತಾವರಣ: ವಿದ್ಯುತ್ ಸಮಸ್ಯೆಯಿಂದಾಗಿ, ಮೂಲಭೂತ ಸೌಕರ್ಯಗಳಲ್ಲೇ ಅತ್ಯಂತ ಅವಶ್ಯಕವಾದ ಕುಡಿಯುವ ನೀರಿಗೆ ತೊಂದರೆಯಾಗುತ್ತದೆ. ಅಲ್ಲದೇ ಮಲೆನಾಡು ಭಾಗಗಳಲ್ಲಿ ಕಾಡಾನೆಗಳ ಹಾವಳಿ ವಿಪರೀತವಿದ್ದು, ಇಲ್ಲಿ ಶೌಚಕ್ಕೆ ಹೊರಗಡೆಯೇ ಹೋಗಬೇಕಿರುವುದರಿಂದ, ಕತ್ತಲಲ್ಲಿ ಶೌಚಾಲಯಗಳಿಗೆ ಹೋಗಲು ಗ್ರಾಮಸ್ಥರು ಹೆದರುವಂಥ ಪರಿಸ್ಥಿತಿ ಉದ್ಭವವಾಗಿದೆ ಎಂದು ಅವರು ವಿವರಿಸಿದರು.
ವಿದ್ಯಾರ್ಥಿಗಳಿಗೂ ಕಾಟ: ಇನ್ನು, ವಿದ್ಯಾರ್ಥಿಗಳಿಗೆ ಮಾರ್ಚ್ನಲ್ಲಿ ವಾರ್ಷಿಕ ಪರೀಕ್ಷೆ ಇರುವುದರಿಂದ ವಿದ್ಯುತ್ ಅಭಾವ ಅವರನ್ನೂ ಕಾಡುತ್ತಿದೆ. ರಾತ್ರಿ ವೇಳೆ ಸರಿಯಾದ ಸಮಯದಲ್ಲಿ ವಿದ್ಯುತ್ ಇರುವುದಿಲ್ಲ. ಇದರಿಂದ ವಿದ್ಯಾರ್ಥಿಗಳು ಸೀಮೆಎಣ್ಣೆ ದೀಪಗಳಿಗೆ ಮೊರಹೋಗಲೇ ಬೇಕಾದ ಅನಿವಾರ್ಯತೆಯಿದೆ ಎಂದು ಅವರು ವಿವರಿಸಿದರು.
ಆರೋಪ: ಸರ್ಕಾರ, ಒಂದು ಕಣ್ಣಿಗೆ ಬೆಣ್ಣೆ, ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತೆ ಮಾಡುತ್ತಿದೆ. ದೊಡ್ಡ ದೊಡ್ಡ ಪಟ್ಟಣ ಪ್ರದೇಶಕ್ಕೆ (ಕೈಗಾರಿಕೆಗಳಿಗೆ) ನಿರಂತರ ವಿದ್ಯುತ್ಕ್ ಕೊಟ್ಟು, ಗ್ರಾಮೀಣ ಪ್ರದೇಶಗಳಿಗೆ ಡಿಸೆಂಬರ್ನಿಂದ ವಿದ್ಯುತ್ ಕಡಿತ ಮಾಡಿರುವುದು ಹಾಗೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾದ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮತ್ತು ಪಂಚತಂತ್ರ ಕೆಲಸಗಳನ್ನು ಅತೀ ತುರ್ತಾಗಿ ಅಂದರೆ ಜನವರಿಯಿಂದ ಮಾರ್ಚ್ನೊಳಗಾಗಿ ಮಾಡಿ ಮುಗಿಸಬೇಕಾಗಿರುವುದರಿಂದ ಗಣಕಯಂತ್ರ (ಕಂಪ್ಯೂಟರ್)ಕ್ಕೆ ವಿದ್ಯುತ್ ಅತಿಮುಖ್ಯ. ಇದು ಸಾರ್ವಜನಿಕ ವಲಯದಲ್ಲಿ ಭಾರೀ ಅಸಮಾಧಾನಕ್ಕೆ ಕಾರಣವಾಗಿದೆ ಎಂದರು.
ಎಚ್ಚರಿಕೆ: ಆದ್ದರಿಂದ ಸಂಬಂಧಪಟ್ಟ ಇಲಾಖೆಯ ಮಂತ್ರಿಗಳು ಹಾಗೂ ಅಧಿಕಾರಿಗಳು ತಕ್ಷಣ ಈ ಸಮಸ್ಯೆಯನ್ನು ಸರಿಪಡಿಸದಿದ್ದರೆ ಹಾಸನ ಜಿಲ್ಲೆಯ ಎಲ್ಲಾ ಸಾರ್ವಜನಿಕ ಬಂಧುಗಳ ಸಹಕಾರದಿಂದ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಗ್ರಾಮ ಪಂಚಾಯ್ತಿಯ ಜನವಿಕಾಸ ಸಮಿತಿಯ ಘಟಕದಿಂದ ಚಳುವಳಿ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

