ಹಾಸನ

ಉಡುಪಿ ಕೃಷ್ಣನನ್ನು ಸುಬ್ರಹ್ಮಣ್ಯ ಎಂದು ನಂಬಲಾಗದು: ಪೇಜಾವರ ಶ್ರೀ

Published On :

ಅರಸೀಕೆರೆ: ಮಧ್ವಾಚಾರ್ಯರು ಪ್ರತಿಷ್ಠಾಪಿತ ಉಡುಪಿ ಶ್ರೀಕೃಷ್ಣನನ್ನು ಯಾರೋ ಕೆಲವರು ಸುಬ್ರಹ್ಮಣ್ಯ ಎಂದು ಯಾವುದೇ ಪುರಾವೆಗಳಿಲ್ಲದೆ ಹೇಳಿದರೆ ನಂಬಲು ಸಾಧ್ಯವಾಗದು. ಶ್ರೀಕೃಷ್ಣನ ಕುರಿತು ಕನಕದಾಸರು ರಚಿಸಿದ ಕೀರ್ತನೆಗಳೇ ಕೃಷ್ಣನ ಇರುವಿಕೆಗೆ ಸಾಕ್ಷಿಯಾಗಿವೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.
ಪಟ್ಟಣದ ರಾಘವೆಂದ್ರ ಸ್ವಾಮಿಗಳ ಮಠಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿ, ಉಡುಪಿ ಶ್ರೀಕೃಷ್ಣನನ್ನು ಮಧ್ವಾಚಾರ್ಯರು ಪ್ರತಿಷ್ಠಾಪಿಸಿ ಪೂಜಿಸುತ್ತಿದ್ದರು ಎಂಬುದಕ್ಕೆ ಸುಮಾರು 700 ವರ್ಷಗಳ ಹಿಂದೆಯೇ ರಚಿಸಲಾಗಿರುವ ಸಂಸ್ಕೃತ ಕಾವ್ಯದಲ್ಲಿ ಸ್ಪಷ್ಟ ಉಲ್ಲೇಖವಿದೆ. ಆದರೆ ಕೃಷ್ಣನ ಕೈಯಲ್ಲಿ ಕೊಳಲು ಇಲ್ಲದೆ ಕಡಗೋಲು ಏಕೆ ಎಂಬ ಪ್ರಶ್ನೆ ಸರಿಯಲ್ಲ. ಅವರವರ ಭಾವಕ್ಕೆ, ಅವರವರ ಭಕ್ತಿಗೆ ಅಂದು ದೇವರ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಅಂದ ಮಾತ್ರಕ್ಕೆ ಅದು ಸುಬ್ರಹ್ಮಣ್ಯ ದೇವರ ಮೂರ್ತಿ ಎಂದು ಹೇಳುವುದು ಸಮಂಜಸವಲ್ಲ ಎಂದರು.
ಕೊಲ್ಲೂರು ಮೂಕಾಂಬಿಕೆ, ಕಟೀಲು ದುರ್ಗಾ ಪರಮೇಶ್ವರಿ ವಿಗ್ರಹಗಳು ಲಿಂಗದ ಸ್ವರೂಪದಲ್ಲಿದ್ದು, ನಾವು ಅವುಗಳನ್ನು ಪ್ರಶ್ನಿಸುವುದು ಸರಿಯಲ್ಲ. ಇತ್ತೀಚಿನ ದಿನಗಳಲ್ಲಿ ಇತಿಹಾಸ ತಜ್ಞರು ಎಂದು ತಮ್ಮನ್ನು ತಾವು ಗುರುತಿಸಿಕೊಳ್ಳುವ ಕೆಲವು ಮಂದಿ ಇಂಥ ಧಾರ್ಮಿಕ ಸೂಕ್ಷ್ಮ ವಿಚಾರಗಳ ಬಗ್ಗೆ ವಿವಾದ ಹುಟ್ಟು ಹಾಕುವ ವಿಫಲ ಪ್ರಯತ್ನವನ್ನು ದೃಶ್ಯ ಮಾಧ್ಯಮಗಳ ಮೂಲಕ ಮಾಡುತ್ತಿದ್ದಾರೆ. ತಿರುಪತಿಯ ಶ್ರೀನಿವಾಸ ದೇವರ ಮೂರ್ತಿಯನ್ನೇ ವೀರಭದ್ರ ದೇವರ ಮೂರ್ತಿ ಎಂದು ಹೇಳುವ ಮೂಲಕ ಭಕ್ತ ಸಮೂಹವನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದರು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.