ಪಿಯು ವಿದ್ಯಾರ್ಥಿಗಳಿಗೆ ಸ್ವಾಮೀಜಿ ಪಾಠ
ಅರಸೀಕೆರೆ: ಆ ಸ್ವಾಮೀಜಿ ಶಿವಮೊಗ್ಗಕ್ಕೆ ಹೊರಟಿದ್ದರು. ಮಾರ್ಗ ಮಧ್ಯೆ ಸೋಮವಾರ ಅರಸೀಕೆರೆ ಪಟ್ಟಣಕ್ಕೆ ಬಂದ ಸ್ವಾಮೀಜಿ, ಹಾಗೆಯೇ ಇಲ್ಲಿನ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿಗೂ ಭೇಟಿ ನೀಡಿದ್ದರು. ಆ ಭೇಟಿ ಹಾಗೇ ಸುಮ್ಮನೆ ಎಂಬಂತಾಗಿರಲಿಲ್ಲ. ಸರಿ ಕೆಲ ಹೊತ್ತು ತಾವು ಸ್ವಾಮೀಜಿ ಎಂಬುದನ್ನು ಮರೆತು ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಪಾಠ ಹೇಳಲು ಉದ್ಯುಕ್ತರಾಗಿ ಬಿಟ್ಟರು.
ಹಾಗೇ ವಿಜ್ಞಾನ ಪಾಠ ಮಾಡಿ ವಿದ್ಯಾರ್ಥಿಗಳ ಖುಷಿಗೆ ಕಾರಣರಾದ ಸ್ವಾಮೀಜಿ ಬೇರಾರೂ ಅಲ್ಲ, ಅವರೇ ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಎಂಬುದಿಲ್ಲಿ ಮುಖ್ಯ ಸಂಗತಿ.
ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಿಜ್ಞಾನ ತರಗತಿ ತೆಗೆದುಕೊಂಡ ಸ್ವಾಮೀಜಿ ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿದರು. ಅಲ್ಲದೆ ಕೆಲವು ಪ್ರಶ್ನೆಗಳಿಗೆ ವಿದ್ಯಾರ್ಥಿಗಳಿಂದ ಉತ್ತರ ಬರದಿದ್ದಾಗ ಬೋರ್ಡ್ ಮೇಲೆ ಬರೆಯುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತರ ತಿಳಿಸಿಕೊಟ್ಟು ಈ ವಿಶೇಷ ತರಗತಿಯಿಂದ ವಿದ್ಯಾರ್ಥಿಗಳು ಪುಳಕಿತರಾದರೆ ಶಾಲೆಯ ಅಧ್ಯಾಪಕ ವೃಂದ ಮೂಕವಿಸ್ಮಿತರಾದರು.
ನಂತರ ಶಾಲಾ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದ ಶ್ರೀಗಳು ಶಾಲೆ ಹಾಗೂ ಕಾಲೇಜು ಅಭಿವೃದ್ಧಿಗೆ ಸಂಬಂಧಿಸಿದಂತೆ ಕೆಲವು ಸಲಹೆ ಸೂಚನೆ ನೀಡಿದರು. ಹಾಸನದ ಆದಿಚುಂಚನಗಿರಿ ಶಾಖಾಮಠದ ಶಂಭುನಾಥ ಸ್ವಾಮೀಜಿ ಮಾತನಾಡಿ ಕಾಲೇಜಿಗೆ ಪ್ರತ್ಯೇಕ ಕಟ್ಟಡ ನಿರ್ಮಿಸಿಕೊಡುವಂತೆ ಹಾಗೂ ಹೈಸ್ಕೂಲ್‌ಗೆ ದಾಖಲಾಗುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ಹೆಚ್ಚುವರಿ ಕೊಠಡಿ ನಿರ್ಮಿಸಿಕೊಡುವಂತೆ ಶ್ರೀಗಳಲ್ಲಿ ನಿವೇದನೆ ಮಾಡಿಕೊಂಡರು. ಮನವಿಗೆ ನಿರ್ಮಲಾನಂದನಾಥ ಸ್ವಾಮೀಜಿ ಕಟ್ಟಡ ನಿರ್ಮಿಸಿಕೊಡುವ ಭರವಸೆ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಅಶೋಕ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜ್ಞಾನೇಶ್ವರಿ ದೈಹಿಕ ಶಿಕ್ಷಕ ನಾಗೇಶ್ ಆದರಪೂರ್ವಕವಾಗಿ ಶ್ರೀಗಳನ್ನು ಬರಮಾಡಿಕೊಂಡರು. ಶಾಲೆಗೆ ಆಗಮಿಸಿದ ಪುರಸಭೆ ಅಧ್ಯಕ್ಷ ಮೋಹನ್‌ಕುಮಾರ್,ಒಕ್ಕಲಿಗ ಸಂಘದ ಮುಖಂಡ ನಾಗೇಶ್, ಕುಮಾರ್, ಪ್ರಶಾಂತ್, ಧರ್ಮಶೇಖರ್, ದುಮ್ಮೇನಹಳ್ಳಿ ಗ್ರಾಮಪಂಚಾಯತಿ ಮಾಜಿ ಅಧ್ಯಕ್ಷ ಎನ್.ಗಿರೀಶ್, ತಾಲೂಕು ಕರವೇ ಅಧ್ಯಕ್ಷ ಹೇಮಂತ್‌ಕುಮಾರ್, ನಗರಾಧ್ಯಕ್ಷ ಕಿರಣಕುಮಾರ್, ರಾಜ್ಯ ಕನ್ನಡಪಡೆ ಅಧ್ಯಕ್ಷ ಬೋರೆಹಳ್ಳಿ ವೆಂಕಟೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಜಿ.ನಿರಂಜನ್,ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಿ.ಎನ್.ಮನೋಜ್‌ಕುಮಾರ್ ಇತರರು ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

