ಹಾಸನ

ಮದ್ಯ ಸೇವಿಸಿ ವಾಹನ ಚಾಲನೆ ಅಪಾಯ

Published On :

ಕನ್ನಡಪ್ರಭ ವಾರ್ತೆ  ಅರಸೀಕೆರೆ  ಡಿ. 25
ಮದ್ಯಪಾನ ಆರೋಗ್ಯಕ್ಕೆ ಹಾನಿಕರ. ಅಲ್ಲದೇ ಕುಡಿದು ವಾಹನ ಚಾಲನೆ ಮಾಡುವುದರಿಂದ ಅಪಘಾತ ಉಂಟಾಗುವ ಸಾಧ್ಯತೆ ಇದ್ದು ಇದರಿಂದ ಸಾವು-ನೋವುಗಳು ಸಂಭವಿಸುವುದರಿಂದ ಚಾಲಕರು ವಾಹನ ಚಾಲನೆ ಮಾಡುವಾಗ ಮದ್ಯಪಾನ ಮಾಡಬಾರದು ಎಂದು ಗ್ರಾಮಾಂತರ ಠಾಣೆ ವೃತ್ತ ನಿರೀಕ್ಷಕ ಸುನಿಲ್ ತಿಳಿಸಿದರು.
  ಗ್ರಾಮಾಂತರ ಠಾಣೆ ಹಾಗೂ ರೋಟರಿಯಿಂದ ಸಂಯುಕ್ತವಾಗಿ ಹಾರನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರಸ್ತೆ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುವುದು ಕೂಡಾ ಕಾನೂನು ರೀತಿಯಲ್ಲಿ ಅಪರಾಧವಾಗಿದೆ ಎಂದರು.
 ಕೆಲ ವಾಹನ ಸವಾರರು ಅಗತ್ಯ ದಾಖಲಾತಿಗಳನ್ನು ಹೊಂದಿಲ್ಲದ ಕಾರಣ ಮರಣ ನಂತರ ಯಾವುದೇ ರೀತಿಯ ಪರಿಹಾರ ಪಡೆದುಕೊಳ್ಳು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಿಯಮ ತಪ್ಪದೇ ಪಾಲಿಸಬೇಕೆಂದು ಹೇಳಿದರು.
 ರೋಟರಿ ಅಧ್ಯಕ್ಷ ಪ್ರವೀಣಕುಮಾರ್ ಮಾತನಾಡಿ, ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಗಳು ಸಂಭವಿಸಿದಾಗ ತಮ್ಮ ಪ್ರಾಣವನ್ನು ಕಳೆದುಕೊಂಡು ಸಹ ಪ್ರಯಾಣಿಕರ ಸಾವು ನೋವುಗಳಿಗೆ ಕಾರಣವಾದ ಅದೆಷ್ಟೋ ನಿದರ್ಶನಗಳಿವೆ. ಚಾಲಕನೊಬ್ಬನ ದುರ್ವ್ಯಸನದಿಂದ ಇಡೀ ಕುಟುಂಬವೇ ಪಶ್ಚಾತಾಪ ಪಡಬೇಕಾಗುತ್ತದೆ. ಇದರಿಂದಾಗುವ ಅನಾಹುತಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕೆಂದು ಹೇಳಿದರು.
 ಇದಕ್ಕೂ ಮುನ್ನ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಹಾರನಹಳ್ಳಿ ಗ್ರಾಮದವರೆಗೂ ನೂರಾರು ಆಟೋಗಳಲ್ಲಿ ಜಾಥಾ ನಡೆಸಲಾಯಿತು. ರೋಟರಿ ನಿಕಟಪೂರ್ವ ಅಧ್ಯಕ್ಷ ಯೋಗೀಶಾಚಾರ್, ಪೊಲೀಸ್ ಸಿಬ್ಬಂದಿ ಹಾರನಹಳ್ಳಿ ಗ್ರಾಮಸ್ಥರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.