ಹಾಸನ

ಮರಳು ದಂಧೆಕೋರರಿಂದ ಹೆಸರು ದುರ್ಬಳಕೆ: ಪ್ರಜ್ವಲ್

Published On :

ಹಾಸನ: ಸಕಲೇಶಪುರ ತಾಲೂಕಿನ ನಾನಾ ಕಡೆಗಳಲ್ಲಿ  ಮರಳು ಮತ್ತು ಮರದ ದಂಧೆಯಲ್ಲಿ ತೊಡಗಿರುವ ಕೆಲವರು ನನ್ನ ಹೆಸರನ್ನು ಅನಗತ್ಯವಾಗಿ ದುಣ್ಗಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಜೆಡಿಎಸ್ ಯುವ ಮುಖಂಡ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ.   ಇಂತಹವರ ವಿರುದ್ಧ ಕಿಡಿ ಕಾರಿರುವ ಪ್ರಜ್ವಲ್, ಯಾರು ಮರಳು ಮತ್ತು ಮರವನ್ನು ಕಳ್ಳಸಾಗಣೆ ದಂಧೆಯಲ್ಲಿ ತೊಡಗಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ. ಜನಪರವಾದ ಕೆಲಸ ಕಾರ್ಯಗಳಿಗೆ ಯಾವಾಗಲೂ ನನ್ನ ಬೆಂಬಲ ಇದೆ. ಆದರೆ ಅಕ್ರಮ ನಡೆಸುತ್ತಿರುವವರು ನನ್ನ ಹೆಸರನ್ನು ಬಳಸಿಕೊಂಡು ತಮ್ಮ ದಂಧೆ ಹೆಚ್ಚಿಸಿಕೊಳ್ಳುತ್ತಿದ್ದಾರೆ ಅನ್ನೋ ಮಾಹಿತಿ ನನ್ನ ಗಮನಕ್ಕೆ ಬಂದಿದೆ. ಈ ಮೂಲಕ ನನ್ನ ಹಾಗೂ ನಮ್ಮ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಕುಕೃತ್ಯದಲ್ಲಿ ತೊಡಗಿದ್ದಾರೆ ಎಂದರು. ನನ್ನ ಹೆಸರನ್ನು ಕೆಟ್ಟ ಕೆಲಸಕ್ಕೆ ಬಳಸಿಕೊಳ್ಳಬಾರದು ಎಂದು ಈ ಮೂಲಕ ಎಚ್ಚರಿಸುತ್ತೇನೆ. ಪೊಲೀಸ್ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಈ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಿ ಅಕ್ರಮ ದಂಧೆ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರಜ್ವಲ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.