ಹಾಸನ ಮೂಲದ ಮೊಬೈಲ್ ಕಳ್ಳನ ಬಂಧನ
ಮೈಸೂರು: ರೋಲಿಂಗ್ ಶೆಟರ್ ಮುರಿದು ಕಳವು ಮಾಡುತ್ತಿದ್ದವನನ್ನು ವಿಜಯನಗರ ಪೊಲೀಸರು ಬಂಧಿಸಿ, 40 ಸಾವಿರ ಮೌಲ್ಯದ ವಿವಿಧ ಕಂಪನಿಯ 6 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಹಾಸನ ಜಿಲ್ಲೆ ಕತ್ರಿಗಟ್ಟ ಗ್ರಾಮದ ಪಳನಿಗೌಡ ಎಂಬವರ ಪುತ್ರ ವಿಜಯ್ಕುಮಾರ್ ಅ. ವಿಜಿ ಬಂಧಿತ.
ಎರಡು ತಿಂಗಳ ಹಿಂದೆ ವಿಜಯನಗರ ಠಾಣೆ ವ್ಯಾಪ್ತಿಯ ಜನನಿ ಮೊಬೈಲ್ ಅಂಗಡಿಯ ರೋಲಿಂಗ್ ಶಟರ್ ಮುರಿದು 1.36 ಲಕ್ಷ ಮೌಲ್ಯದ ಒಟ್ಟು 42 ಮೊಬೈಲ್ ಪೋನ್ಗಳನ್ನು ಕಳವು ಮಾಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಪೆರುಮಾಳ್ ಎಂಬಾತನನ್ನು ಪೊಲೀಸರು ಬಂಧಿಸಿ, ಆತನಿಂದ 20 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಬ್ಬ ಆರೋಪಿ ವಿಜಯಕ್ಕುಮಾರ್ನನ್ನು ಬೆಂಗಳೂರಿನ ಕೆ.ಆರ್. ಮಾರ್ಕೆಟ್ ಜೋಳದ ಮಂಡಿ ಬಳಿ ಹಿಡಿದು, ವಿವಿಧ ಕಂಪನಿಯ ಒಟ್ಟು 6 ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

