ಹಾಸನ

ಮಾತೃಭಾಷೆಯಲ್ಲಿ ಶಿಕ್ಷಣದಿಂದ ಅಭಿವೃದ್ಧಿ: ಡಾ. ಭೈರಪ್ಪ

Published On :

ಚನ್ನರಾಯಪಟ್ಟಣ: ಪ್ರಾಥಮಿಕ ಶಿಕ್ಷಣವನ್ನು ಮಕ್ಕಳು ತಮ್ಮ ಮಾತೃ ಭಾಷೆಯಲ್ಲಿಯೇ ವ್ಯಾಸಂಗ ಮಾಡಿದರೆ ಮಾತ್ರ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ತಿಳಿಸಿದರು.
ಪಟ್ಟಣದ ಜ್ಞಾನಸಾಗರ ವಿದ್ಯಾಶಾಲೆಯಲ್ಲಿ ಏರ್ಪಡಿಸಿದ್ದ ಜ್ಞಾನಸಾಗರ ಪರಂಪರೆ 2013 ಉದ್ಘಾಟಿಸಿ ಮಾತನಾಡಿದ ಅವರು, ಪೋಷಕರು ತಮ್ಮ ಮಕ್ಕಳಿಗೆ ಮಾತೃ ಭಾಷೆಯಲ್ಲಿ ವಿದ್ಯೆ ಕೊಡಲು ಮುಂದಾಗಿಸಬೇಕು. ಮನೆಯಲ್ಲಿ ಹೊರಗೆ ಮಾತನಾಡುವುದು ಕನ್ನಡ ಭಾಷೆ ಆದರೆ ಶಾಲೆಯಲ್ಲಿ ಮಾತ್ರ ಇಂಗ್ಲಿಷ್ ಭಾಷೆಯಾದರೆ ಮಕ್ಕಳ ವಿದ್ಯಾಭ್ಯಾಸದ ಹಿನ್ನಡೆಗೆ ಪೋಷಕರು ಕಾರಣರಾಗುತ್ತೀರಿ. ಮಾತೃ ಭಾಷೆಯಲ್ಲಿಯೇ ವ್ಯಾಸಂಗ ಮಾಡಿದವರು ವಿದ್ವಾಂಸರು, ಸಾಹಿತಿಗಳು ಹಾಗೂ ಇಂಜನಿಯರ್, ವಿಜ್ಞಾನಿಗಳಾಗಿದ್ದಾರೆ. ಮಕ್ಕಳಿಗೆ ಮಾತೃಭಾಷಾ ಶಿಕ್ಷಣ ಬಹುಬೇಗ ಅರ್ಥವಾಗುವುದರಿಂದ ಮನೋವಿಕಾಸಕ್ಕೆ ಬುನಾದಿಯಾಗುತ್ತದೆ ಎಂದು ತಿಳಿಸಿದರು.
ಚಿಕ್ಕ ಚಿಕ್ಕ ರಾಷ್ಟ್ರಗಳಲ್ಲಿನ ವಿಶ್ವ ವಿದ್ಯಾನಿಲಯಗಳು ವಿಶ್ವ ದರ್ಜೆಯ ವಿಶ್ವ ದರ್ಜೆಯ ವಿಶ್ವವಿದ್ಯಾನಿಲಯಗಳಲ್ಲಿ ಗುರುತಿಸಿಕೊಂಡು ಸ್ಪರ್ಧೆಯಲ್ಲಿದ್ದರೆ, ಹೆಚ್ಚು ವಿಶ್ವವಿದ್ಯಾನಿಲಯಗಳನ್ನು ಹೊಂದಿರುವ ತಮ್ಮ ರಾಷ್ಟ್ರದ ಯಾವ ವಿಶ್ವ ವಿದ್ಯಾನಿಲಯಗಳೂ ಕೂಡ ವಿಶ್ವ ದರ್ಜೆಯಲ್ಲಿ ಗುರುತಿಸಿಕೊಳ್ಳದಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಹೇಳಿದರು. ಚಿಂತಕ ಚೇತನ್ರಾಮ್, ಸಂಸ್ಥೆ ಅಧ್ಯಕ್ಷ ಡಾ. ನಾಗೇಶ್, ಕಾರ್ಯದರ್ಶಿ ಭಾರತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.