ಮನೋಬಲ, ದೇಹಬಲ ಸುಸ್ಥಿತಿಗೆ ಕ್ರೀಡೆ ಸಹಕಾರಿ
ಕ.ಪ್ರ.ವಾರ್ತೆ ಹಾಸನ ಡಿ. 27
ಪೊಲೀಸರು, ವೈದ್ಯರು ಸೇರಿದಂತೆ ಹಲವು ಇಲಾಖೆಗಳಲ್ಲಿ ನಿರಂತರವಾಗಿ ಒತ್ತಡಗಳಲ್ಲಿ ಕೆಲಸ ಮಾಡುವ ಪರಿಸ್ಥಿತಿ ಇದೆ. ದಿನದ 24 ಗಂಟೆಗಳೂ ಜಾಗೃತವಾಗಿದ್ದು ಸೇವೆ ಸಲ್ಲಿಸಬೇಕಾಗಿದ್ದು ಅವರ ಮನೋಬಲ ಹಾಗೂ ದೇಹವನ್ನು ಸುಸ್ಥಿತಿಯಲ್ಲಿಡಲು ಕ್ರೀಡೆ ಸಹಕಾರಿ ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಜೆ.ಎಸ್. ಸೋಮಶೇಖರ್ ಹೇಳಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಮೂರು ದಿನಗಳ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕ್ರೀಡೆ ಆತ್ಮ ವಿಶ್ವಾಸವನ್ನು ಹೆಚ್ಚಿಸುತ್ತದೆ. ಅಲ್ಲದೆ ಇಂತಹ ಕ್ರೀಡಾಕೂಟಗಳು ಸ್ಫೂರ್ತಿ ತುಂಬುತ್ತವೆ. ಸ್ಪರ್ಧಾ ಮನೋಭಾವ ಹೆಚ್ಚಬೇಕು. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಎಂದು ಶುಭ ಹಾರೈಸಿದರು.
ದೇಶದಲ್ಲಿ ಕ್ರೀಡೆಗೆ ಹಿಂದೆಂದಿಗಿಂತ ಈಗ ಹೆಚ್ಚಿನ ಮನ್ನಣೆ, ಪ್ರೋತ್ಸಾಹ, ಗೌರವಗಳು ದೊರೆಯುತ್ತಿರುವುದು ಈ ಕ್ಷೇತ್ರದ ಬೆಳವಣಿಗೆಗಿರುವ ಆಶಾದಾಯಕ ಲಕ್ಷಣಗಳಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಎಸ್ಪಿ ರವಿ ಚನ್ನಣ್ಣನವರ ಮಾತನಾಡಿ, ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟ ಆಯೋಜನೆ ಮಹತ್ವ ವಿವರಿಸಿದರು. ಅಪರ ಪೊಲೀಸ್ ಅಧೀಕ್ಷಕರಾದ ಜೆ.ಕೆ. ರಶ್ಮಿ ವಂದಿಸಿದರು.
ಇದಕ್ಕೂ ಮುನ್ನ ಪಾರಿವಾಳ ಹಾಗೂ ಬಲೂನು ಹಾರಿ ಬಿಡುವ ಮೂಲಕ ಕ್ರೀಡಾಕೂಟದ ಚಾಲನೆಯನ್ನು ಘೋಷಿಸಲಾಯಿತು. ಪಟಾಕಿಗಳ ಸದ್ದು ಕ್ರೀಡಾ ಸಂಭ್ರಮಕ್ಕೆ ಮೆರುಗಿನ ಆರಂಭ ಒದಗಿಸಿತು. ಏಕಲವ್ಯ ಪ್ರಶಸ್ತಿ ವಿಜೇತ ಪೊಲೀಸ್ ಕ್ರೀಡಾಪಟು ಸಂತೋಷ್ ಕ್ರೀಡಾ ಜ್ಯೋತಿಯೊಂದಿಗೆ ಓಟ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

