ಇಂದಿನಿಂದ ಪುರಾಣ ಪ್ರವಚನ ಕಾರ್ಯಕ್ರಮ
ಕ.ಪ್ರ.ವಾರ್ತೆ ಅರಸೀಕೆರೆ ಡಿ. 27
ತಾಲೂಕಿನ ಹಾರನಹಳ್ಳಿ ಕೋಡಿಮಠದ ಮಹಾತಪಸ್ವಿಗಳಾದ ಲಿಂಗೈಕ್ಯ ಶ್ರೀನೀಲಲೋಚನ ಸ್ವಾಮೀಜಿ 21ನೇ ವರ್ಷದ ಪುಣ್ಯಸ್ಮರಣಾರಾಧನೆ ಮತ್ತು ಶಿವಲಿಂಗ ಸ್ವಾಮಿಗಳ ಪುರಾಣ ಪ್ರವಚನ ಕಾರ್ಯಕ್ರಮಗಳನ್ನು ಡಿ.28 ರಿಂದ ಜ.5 ರವರೆಗೆ ಒಂದು ವಾರ ಏರ್ಪಡಿಸಲಾಗಿದೆ ಎಂದು ತಾಲೂಕಿನ ಮಾಡಾಳು ಗುರು ಶಿವಬಸವ ಕುಮಾರಾಶ್ರಮದ ತೋಂಟದಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಕುಮಾರಾಶ್ರಮದಲ್ಲಿ ಡಿ.28 ರಂದುಸಂಜೆ ಆರಂಭವಾಗುವ ಈ ಧಾರ್ಮಿಕ ಸಮಾರಂಭದ ಸಾನಿಧ್ಯವನ್ನು ಹೊಸಪೇಟೆ ವೀರಶೈವ ಶಿವಯೋಗಿ ಮಂದಿರದ ಅಧ್ಯಕ್ಷ ಸಂಗನಬಸವ ಸ್ವಾಮೀಜಿ ವಹಿಸುವರು. ಶನಿವಾರ ಸಂಜೆ ಪ್ರಾರಂಭವಾಗಲಿರುವ ಪುರಾಣ ಪ್ರವಚನ ಕಾರ್ಯಕ್ರಮಕ್ಕೆ ಮಾಡಾಳು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ, ಬೆಲಗೂರು ಕ್ಷೇತ್ರದ ಬಿಂಧು ಮಾಧವ ಶರ್ಮಾ ಸ್ವಾಮೀಜಿ, ತೋಂಟದಾರ್ಯ ಸ್ವಾಮೀಜಿ ಆಗಮಿಸುವರು. ಮಾಜಿ ಸಚಿವ ಎಚ್.ಡಿ.ರೇವಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಕೆ.ಎಂ.ಶಿವಲಿಂಗೇಗೌಡ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಬಸವ ಸಮಿತಿ ಗೌರವ ಕಾರ್ಯದರ್ಶಿ ಪ್ರಭುದೇವ ಚಿಗಟೇರಿ ಮತ್ತು ಮಾಜಿ ಪುರಸಭಾಧ್ಯಕ್ಷ ಎನ್.ಎಸ್.ಸಿದ್ದರಾಮಶೆಟ್ಟಿ, ತಾಲೂಕಿನ ಜಿಪಂ ಮತ್ತು ತಾಪಂ ಸದಸ್ಯರು ಹಾಗೂ ಇನ್ನಿತರ ಜನಪ್ರತಿನಿಧಿಗಳು ಭಾಗವಹಿಸುವರು.
ಪುರಾಣ ಪ್ರವಚನ ಕಾರ್ಯಕ್ರಮ ಕುಮಾರ ವಿರೂಪಾಕ್ಷ ಸ್ವಾಮೀಜಿ ನಡೆಸುತ್ತಿದ್ದು, ಇದರೊಂದಿಗೆ ಪ್ರತಿದಿನ ಸಂಜೆ ಧಾರ್ಮಿಕ ಚಿಂತನಾ ವಿಚಾರ ಗೋಷ್ಠಿಗಳು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಜ.4 ರಂದು ಸಂಜೆ ಕುಮಾರಾಶ್ರಮದ ತೋಂಟದಾರ್ಯ ಸ್ವಾಮೀಜಿಗಳಿಗೆ ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಕರಿವೃಷಭ ಶಿವಯೋಗಿ ಸ್ವಾಮೀಜಿ ಸಾನಿಧ್ಯದಲ್ಲಿ ಹೊಸಪೇಟೆಯ ಬೈಲತ್ತಗಿರಿ ಗ್ರಾಮದ ಅಂಗಡಿ ವೀರಭದ್ರಪ್ಪ ಮತ್ತು ಮಕ್ಕಳಿಂದ ತುಲಾಭಾರ ಕಾರ್ಯಕ್ರಮ ಜರುಗಲಿದೆ. ರಾಜ್ಯದ ಅನೇಕ ಮಠಗಳ ಸಾಧುಸಂತರು, ಸ್ವಾಮೀಜಿ ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

