ಕಾಂಗ್ರೆಸ್ ಅಲ್ಪಸಂಖ್ಯಾತರ ವಿರೋಧಿ
ಕ.ಪ್ರ.ವಾರ್ತೆ ಹಾಸನ ಡಿ. 27
ಕಾಂಗ್ರೆಸ್ ಅಲ್ಪಸಂಖ್ಯಾತರ ವಿರೋಧಿಯಾಗಿದ್ದು, ಇದನ್ನು ಮರೆತು ಕಾಂಗ್ರೆಸ್ ಮಂದಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಮಾಡಿರುವ ಇಲ್ಲಸಲ್ಲದ ಆರೋಪಗಳನ್ನು ಜೆಡಿಎಸ್ ಸಹಿಸುವುದಿಲ್ಲ ಎಂದು ನಗರಸಭೆ ಉಪಾಧ್ಯಕ್ಷ ಇರ್ಷಾದ್ ಪಾಷ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರು ಅಲ್ಪಸಂಖ್ಯಾತರ ವಿರೋಧಿಯಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮುಸ್ಲಿಂ ಜನಾಂಗಕ್ಕೆ ರಾಜಕೀಯ ಮೀಸಲಾತಿ ನೀಡಿದವರೇ ಗೌಡರು. ಬಹಳ ಹಿಂದಿನಿಂದಲು ಅಲ್ಪಸಂಖ್ಯಾತರ ಏಳಿಗೆಗೆ ಶ್ರಮಿಸಿಕೊಂಡು ಬಂದ ಮಹಾನ್ ನಾಯಕರು. ಮುಸ್ಲಿಂರ ಅಭಿವೃದ್ಧಿದಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಪ್ರತಿಪಾದನೆ ಮಾಡಿದರು.
ದೇವೇಗೌಡರಿಂದ ಸಮಾನತೆ: ದೇವೇಗೌಡರು ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ನಾನಾ ಸ್ಥಾನಮಾನಗಳನ್ನು ನೀಡುವ ಮೂಲಕ ಸಮಾನತೆಯನ್ನು ತೋರಿದ್ದಾರೆ. ಆದರೆ ಕಾಂಗ್ರೆಸ್ನವರು ಕೇವಲ ಅಲ್ಪಸಂಖ್ಯಾತರನ್ನು ಮತ ಬ್ಯಾಂಕ್ ಆಗಿ ಮಾಡಿಕೊಂಡು ವಂಚನೆ ಮಾಡಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನು ಚುನಾವಣೆ ದೃಷ್ಟಿಯಿಂದ ಮಾತ್ರ ಬಳಸಿಕೊಂಡು ಮತ್ತೆ ಅವರನ್ನು ವಂಚಿಸಿದ್ದಾರೆ ಎಂದು ಆರೋಪಿಸಿದರು.
ಈಗ ಲೋಕಸಭೆ ಚುನಾವಣೆ ಹತ್ತಿರ ಬಂದಿರುವುದಿರಂದ ಅಲ್ಪಸಂಖ್ಯಾತರ ಬಗ್ಗೆ ಗೌಡರು ಒಲವು ತೋರುತ್ತಿದ್ದಾರೆ ಅಂತ ಆರೋಪ ಮಾಡುವುದು ಸತ್ಯಕ್ಕೆ ದೂರವಾದುದು. ಈ ರೀತಿ ಸಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಸಮಾಜದಲ್ಲಿ ಅಲ್ಪಸಂಖ್ಯಾತರಿಗೆ ನಾನಾ ಕ್ಷೇತ್ರಗಳಲ್ಲಿ ಸ್ಥಾನಮಾನ ನೀಡುವ ಮೂಲಕ ಅಭಿವೃದ್ಧಿಗೆ ದೇವೇಗೌಡರು ಶ್ರಮಿಸಿದ್ದಾರೆ. ಅದನ್ನು ಎಲ್ಲರು ಮನಗಾಣಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಕೊಡುಗೆ ಕಡಿಮೆಯೇ: ನಗರಸಭಾ ಸದಸ್ಯ ಸಮೀರ್ ಮಾತನಾಡಿ, ಕಾಂಗ್ರೆಸ್ನವರು ರಾಜ್ಯ ಹಾಗೂ ಕೇಂದ್ರದಲ್ಲಿ ಹೆಚ್ಚಿನ ಅವಧಿ ಅಧಿಕಾರ ನಡೆಸಿದ್ದರು ಸಹ ಅವರು ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡಿರುವ ಕೊಡುಗೆ ಕಡಿಮೆಯೇ. ಅಲ್ಪಸಂಖ್ಯಾತರು ಇನ್ನೂ ಬಡವರಾಗಿಯೇ ಉಳಿದಿದ್ದಾರೆ. ಕಾಂಗ್ರೆಸ್ನವರು ಅಲ್ಪಸಂಖ್ಯಾತರನ್ನು ವಂಚಿಸಿರುವುದನ್ನು ಮರೆತು ದೇವೇಗೌಡರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದರು.
ದೇವೇಗೌಡರು ಅಲ್ಪಸಂಖ್ಯಾತರಿಗೆ ರಾಜಕೀಯದಲ್ಲಿ ಸ್ಥಾನ ಮಾನಗಳನ್ನು ನೀಡಿ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸುವಂತೆ ಮಾಡಿದ್ದಾರೆ. ದೇವೇಗೌಡರ ಅಧಿಕಾರ ಕಾಲದಲ್ಲಿ ಮೊರಾರ್ಜಿ ದೇಸಾಯಿ ಶಾಲೆಗಳನ್ನು ತೆರೆದಿದ್ದು, ಅಲ್ಲಿ ಅಲ್ಪಸಂಖ್ಯಾತ ಮಕ್ಕಳೆ ಹೆಚ್ಚಾಗಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳನ್ನು ನೀಡಿದ್ದಾರೆ ಎಂದ ಅವರು, ಕೆಲವರು ಜೆಡಿಎಸ್ನಲ್ಲಿದ್ದು, ಎಲ್ಲಾ ರೀತಿಯ ಅಧಿಕಾರ ಅನುಭವಿಸಿ ಈಗ ಪಕ್ಷ ತ್ಯಜಿಸಿ ಇಲ್ಲಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಕಟುವಾಗಿ ಹೇಳಿದರು.
ಸಕಲೇಶಪುರ ಪುರಸಭೆ ಮಾಜಿ ಅಧ್ಯಕ್ಷ ಯಾದ್ಗಾರ್ ಇಬ್ರಾಹಿಂ ಮಾತನಾಡಿ, ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ನೀಡಿರುವ ಕೊಡುಗೆಗಳು ಏನು ಎಂಬುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದ ಅವರು, ದೇವೇಗೌಡರು ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಿರುವ ಕೊಡುಗೆ ಅಪಾರವಾದುದು. ಕೊಳಗೇರಿಗಳಲ್ಲಿ ವಾಸಿಸುವ ಕಡುಬಡವ ಅಲ್ಪಸಂಖ್ಯಾತ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಉರ್ದು ಶಾಲೆ ಕಾಲೇಜುಗಳನ್ನು ತೆರೆದು ಮಕ್ಕಳು ಉತ್ತಮ ಶಿಕ್ಷಣ ಪಡೆಯಲು ಸಹಕರಿಸಿದ್ದಾರೆ ಎಂದು ತಿಳಿಸಿದರು. ಸಕಲೇಶಪುರ ಪುರಸಭಾ ಮಾಜಿ ಅಧ್ಯಕ್ಷ ತಜ್ಮುಲ್ಪಾಷಾ, ಜಕ್ರಿಯ, ಅಲೀಂ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

