ಹಾಸನ

ಸರ್ಕಾರ ಬಡವರ ಒತ್ತುವರಿ ಭೂಮಿ ತೆರವಿಗೆ ಮುಂದಾದರೆ ಉಗ್ರ ಹೋರಾಟ: ರೇವಣ್ಣ

Published On :

ಕ.ಪ್ರ.ವಾರ್ತೆ  ಬೇಲೂರು  ಡಿ. 27
ಸರ್ಕಾರ ಬಡವರ ಒತ್ತುವರಿ ಜಮೀನನ್ನು ತೆರವುಗೊಳಿಸಲು ಮುಂದಾದರೆ ಹೋರಾಟ ಅನಿವಾರ್ಯ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಎಚ್ಚರಿಸಿದ್ದಾರೆ. ತಾಲೂಕಿನ ನಂದಗೋಡನಹಳ್ಳಿ ದೇವೇಗೌಡ ಕ್ರೀಡಾ ಮತ್ತು ಸಾಂಸ್ಕೃತಿಕ ಬಳಗ ಹಾಗೂ ಎಚ್.ಡಿ.ಕುಮಾರಸ್ವಾಮಿ ಕ್ರಿಕೆಟರ್ಸ್ ಆಶ್ರಯದಲ್ಲಿ  ಆಯೋಜಿಸಿದ್ದ   ಕ್ರಿಕೆಟ್ ಪಂದ್ಯಾವಳಿಯಲ್ಲಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿ ಬಡವರು ಒತ್ತುವರಿ ಮಾಡಿದ್ದು ಬಿಟ್ಟರೆ ಬೇರೆ ಜೀವನಕ್ಕೆ ದಾರಿಯೇ ಇಲ್ಲದಾಗಿದ್ದು,  ಇಂತಹವರು  ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಾ ಬಂದಿದ್ದು ಇದನ್ನು ತೆರವುಗೊಳಿಸಲು ಸರ್ಕಾರ ಮುಂದಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಹೇಳಿದರು.
ಮಲೆನಾಡು ಪ್ರದೇಶಗಳ ಕಾಫಿತೋಟಗಳಲ್ಲಿ ಗ್ಯಾಸ್ ಪೈಪ್‌ಲೈನ್ ಹಾದು ಹೋಗುತ್ತಿದ್ದು ಇದರಿಂದ ಬೆಳೆಗಾರರಿಗೆ ತೀವ್ರ ತೊಂದರೆ ಯಾಗುತ್ತಿದೆ ಕಾಫಿ ಗೋಟಗಳಲ್ಲಿ ಬೆಳೆದಿರುವ ಬೆಲೆ ಬಾಳುವ ಮರ ಗಿಡಗಳು ನಾಶವಾಗಲಿದ್ದು ಸರ್ಕಾರ ಎಕರೆಗೆ 20 ಲಕ್ಷ ರು. ಪರಿಹಾರ ನೀಡಲು ಮುಂದಾಗಬೇಕು ಎಂದು ಅಗ್ರಹಿಸಿದರು.
ಗ್ರಾಮೀಣ ಪ್ರದೇಶದ ಯುವಕರು ಕ್ರೀಡೆಯಲ್ಲಿ ಮುಂದೆ ಬರಲು ಸರ್ಕಾರ ಪ್ರೋತ್ಸಹ ನೀಡಲು ಮುಂದಾಗಿ ಕೆಲವು ಕ್ರೀಡೆಗಳಿಗೆ ಅನುದಾನ ಬಿಡುಗಡೆಗೊಳಿಸಿದಾಗ ಮಾತ್ರ ಕೀಡೆಗಳು ಜೀವಾಂತವಾಗಿರಲು ಸಾಧ್ಯ ಎಂದು ತಿಳಿಸಿದರು.
ಜಿ.ಪಂ. ಸದಸ್ಯರಾದ ಬಿ.ಡಿ. ಚಂದ್ರೇಗೌಡ, ಜಿ.ಟಿ.ಇಂದಿರಾ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಾಜಶೇಖರ್, ತಾಲೂಕು ಅಧ್ಯಕ್ಷ ತೊ.ಚ.ಅನಂತಸುಬ್ಬಾರಾಯ, ತಾಪಂ ಸದಸ್ಯೆ ಕಮಲಚನ್ನಪ್ಪ, ತಾಲೂಕು ಪಂಚಾಯ್ತಿ  ಮಾಜಿ ಅಧ್ಯಕ್ಷ ಎಂ.ಎ.ನಾಗರಾಜ್, ಜೆಡಿಎಸ್ ಮುಖಂಡ ಅರೇಹಳ್ಳಿ ನಟರಾಜ್, ಕಾಫಿ ಬೆಳೆಗಾರ  ಲಕ್ಷ್ಮಣಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.