ಹಾಸನ

ಸುದ್ದಿ ಸಂಕ್ಷೇಪ

Published On :

ಇಂದು ಮನೆ ಮನೆ ಸಾಹಿತ್ಯ ಗೋಷ್ಠಿ
ಬೇಲೂರು: ಶ್ರೀ ರಾಮಕೃಪಾ ಭಜನಾ ಮಂಡಳಿ ಪ್ರಾಯೋಜಕತ್ವದಲ್ಲಿ ವೇಲಾಪುರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯಿಂದ 15 ನೇ ತಿಂಗಳ ಮನೆ ಮನೆ ಸಾಹಿತ್ಯ ಗೋಷ್ಠಿಯನ್ನು ಡಿ. 28 ರಂದು ಆಯೋಜಿಸಲಾಗಿದೆ. ಪಟ್ಟಣದ ಜೆ.ಪಿ ನಗರದಲ್ಲಿರುವ ಊದುಬತ್ತಿ ತಯಾರಕರಾದ ಭಾಗೀರಥಮ್ಮನವರ ನಿವಾಸದಲ್ಲಿ ವೇಲಾಪುರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಎಚ್.ಎಂ. ದಯಾನಂದ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.  ಇತ್ತೀಚೆಗೆ ನಿಧನರಾದ ರಾಷ್ಟ್ರಕವಿ ಜಿಎಸ್‌ಎಸ್‌ಗೆ ಶ್ರದ್ಧಾಂಜಲಿ ಹಾಗೂ ಅವರು ರಚಿಸಿರುವ ಭಾವಗೀತೆ ಗಾಯನ ಮತ್ತು ಪ್ರೊ. ಜಯಣ್ಣಗೌಡರು ಉಪನ್ಯಾಸ ನೀಡಲಿದ್ದು ಸಾಹಿತ್ಯಾಸಕ್ತರು, ಅಭಿಮಾನಿಗಳು ಭಾಗವಹಿಸುವಂತೆ ಕಾರ್ಯದರ್ಶಿ ಮ.ಶಿವಮೂರ್ತಿ ಕೋರಿದ್ದಾರೆ.
ಪ.ಪೂರ್ವ ಕಾಲೇಜು ವಾರ್ಷಿಕೋತ್ಸವ
ಬೇಲೂರು:  ಹೊಯ್ಸಳ ಸಂಯುಕ್ತ ಪದವಿ ಪೂರ್ವ ಶಾಲಾ  ಕಾಲೇಜು  ವಾರ್ಷಿಕೋತ್ಸವ ಸಮಾರಂಭವನ್ನು ಡಿ. 28 ರಂದು  ವೀರಶೈವ ಸಮುದಾಯ ಭವನದಲ್ಲಿ ಬೆಳಗ್ಗೆ 10ಕ್ಕೆ  ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಮೂಡಿಗೆರೆ ರಸ್ತೆಯಲ್ಲಿರುವ ವೀರಶೈವ ಸಮುದಾಯ ಭವನದಲ್ಲಿ ಬೆಳಗ್ಗೆ 10ಕ್ಕೆ  ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಕಾರ್ಯಕ್ರಮವಿದ್ದು ಮಾಜಿ ಶಾಸಕ, ಹೊಯ್ಸಳ ವಿದ್ಯಾಸಂಸ್ಥೆಯ ಅಧ್ಯಕ್ಷ ಡಿ.ಮಲ್ಲೇಶ್, ಪ.ಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ರಾಜಮ್ಮ, ತಾಪಂ ಸದಸ್ಯ ಬಿ.ಎಂ ರವಿಕುಮಾರ್, ದೈಹಿಕ ಶಿಕ್ಷಕ ರಂಗಸ್ವಾಮಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಹೇಮಂತ್‌ಕುಮಾರ್ ಭಾಗವಹಿಸಲಿದ್ದಾರೆ. ಸಂಜೆ 4 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶಾಸಕ ರುದ್ರೇಶ್‌ಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಸವರಾಜ್, ಬಿಇಓ ಸುಂದರೇಶ್ ತಾಪಂ ಸದಸ್ಯ ಪರ್ವತಯ್ಯ, ಪುರಸಭೆ ಸದಸ್ಯ ಗಿರೀಶ್  ಇತರರು ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲ ಧರ್ಮೇಗೌಡ ತಿಳಿಸಿದ್ದಾರೆ.
ಪೂರ್ಣೇಶ್ ನೇಮಕ
ಬೇಲೂರು: ತಾಲೂಕಿನ ಬ್ಲಾಕ್ ಸಮಿತಿ ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆ ಅಧ್ಯಕ್ಷರಾಗಿ ಪೂರ್ಣೇಶ್ ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಸಿ.ವಿ ರಾಜಪ್ಪ ತಿಳಿಸಿದ್ದಾರೆ.
ಅಖಿಲ ಭಾರತ ರಾಜೀವ್‌ಗಾಂಧಿ ಪಂಚಾಯತ್ ಸಂಘಟನೆಯ ಅಧ್ಯಕ್ಷ ಮಣಿಶಂಕರ್ ಅಯ್ಯರ್, ರಾಜ್ಯಾಧ್ಯಕ್ಷ ಶರಣ ಪ್ರಕಾಶ್ ಪಾಟೀಲ್ ಆದೇಶದಂತೆ ಪೂರ್ಣೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.