ಹಾಸನ

ಆದರ್ಶದ ದಾರಿಯಲ್ಲಿ ನಡೆಯಲು ಕರೆ

Published On :

ಹಾಸನ: ವಿದ್ಯಾರ್ಥಿಗಳು ಕೇವಲ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸುವ ದೃಷ್ಟಿಯಲ್ಲಿ   ಕಲಿಯುವಂತಾಗದೇ ನಮ್ಮ ದೇಶ, ಸಂಸ್ಕೃತಿ, ಹುಟ್ಟಿದ ಊರು, ಕಲಿತಶಾಲೆ ಬಗ್ಗೆ ಅಭಿಮಾನ  ಬೆಳೆಸಿಕೊಳ್ಳುವ ಮೂಲಕ ಆದರ್ಶ ವ್ಯಕ್ತಿಗಳ ದಾರಿಯಲ್ಲಿ ನಡೆಯಬೇಕು ಎಂದು ಜಿಲ್ಲಾ  ಪೊಲೀಸ್ ಮುಖ್ಯಾಧಿಕಾರಿ ರವಿ.ಡಿ. ಚನ್ನಣ್ಣನವರ್ ಕಿವಿಮಾತು ಹೇಳಿದರು.
ತಾಲೂಕಿನ ದುದ್ದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಆಪ್ತ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿದರು.
ಸತ್ಪ್ರಜೆಗಳಾಗಿ: ವಿದ್ಯಾರ್ಥಿಗಳಿಗಾಗಿ ಏರ್ಪಡಿಸುವಂತಹ ಯಾವುದೇ ಕಾರ್ಯಕ್ರಮದ ಉದ್ದೇಶ  ಸಫಲವಾಗಬೇಕು ಎನ್ನುತ್ತಾ ತಮ್ಮ ಬಾಲ್ಯ ಶಿಕ್ಷಣ ಕುರಿತು ಅವರು ವಿವರಿಸಿದರು.
ವಿದ್ಯಾರ್ಥಿ ದೆಸೆಯಲ್ಲಿಯೇ ಶಿಸ್ತ  ಸಂಯಮ ರೂಢಿಸಿಕೊಳ್ಳಕೊಂಡು ದೇಶದ ಮಹಾತ್ಮರ  ಆದರ್ಶ, ತತ್ವ- ಸಿದ್ಧಾಂತ ಅವಳವಡಿಕೊಂಡು, ಮುನ್ನಡೆಯಬೇಕು ಎಂದು ಹೇಳಿದರು.
ಕಾರ್ಯಾಗಾರದ ಲಾಭ ಪಡೆದುಕೊಳ್ಳಿ: ಹಾಸನ  ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ವೀರೇಂದ್ರ ಪ್ರಸಾದ್ ಮಾತನಾಡಿ, ಎಸ್ಸೆಸ್ಸೆಲ್ಸಿ, ಪಿಯುಸಿ ನಂತರ ಮುಂದೇನು ಎಂಬ  ಬಗ್ಗೆ ವಿದ್ಯಾರ್ಥಿಗಳಲ್ಲಿ ಚಿಂತನೆ ಮೂಡುತ್ತದೆ.
ಈ ಹಂತ ಬಹುಮುಖ್ಯವಾದ ಹಂತ. ಒಂದು ಕಟ್ಟಡ ನಿರ್ಮಾಣಕ್ಕೆ  ಅಡಿಪಾಯ ಹೇಗೆ ಮುಖ್ಯವೋ, ಹಾಗೆಯೇ ವಿದ್ಯಾರ್ಥಿಗಳು ಭವ್ಯವಾದ ಕನಸನ್ನು ನನಸು ಮಾಡಿಕೊಳ್ಳಲು ತಮ್ಮ ಬದುಕನ್ನು ರೂಪಿಸಿಕೊಳ್ಳಲಿರುವ ನಿಟ್ಟಿನಲ್ಲಿ ಇಂತಹ  ಕಾರ್ಯಾಗಾರದ ಲಾಭ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಲು ಬೌದ್ಧಿಕ ವಿಕಾಸದ  ಅಗತ್ಯತೆಯನ್ನು ಮನಗಾಣಬೇಕಾಗಿದೆ ಎಂದು ಹೇಳಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷ ಡಿ. ಪ್ರಶಾಂತ್ ಕುಮಾರ್ ಮಾತನಾಡಿದರು. ವನಜಾಕ್ಷಿ  ಕಾರ್ಯಕ್ರಮ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.