ಹಾಸನ

ವಿದ್ಯಾರ್ಥಿಗಳಿಗೆ ಯುವ ಸಂಸತ್ ಸಹಕಾರಿ

Published On :

ಕ.ಪ್ರ.ವಾರ್ತೆ     ಹಾಸನ     ಡಿ.29
ಎಳೆಯ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ರಾಜಕೀಯ ಇಚ್ಛಾಶಕ್ತಿ ಬೆಳೆಸಿಕೊಳ್ಳಲು ಯುವ ಸಂಸತ್ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮಣ್ ಗೌಡ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಸನ, ಸಂಸದೀಯ ವ್ಯವಹಾರಗಳ ಕಾರ್ಯಾಲಯದ ಸಹಯೋಗದೊಂದಿಗೆ ಜಿಲ್ಲಾ ಪಂಚಾಯ್ತಿ  ಹೊಯ್ಸಳ ಸಭಾಂಗಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯುವ ಸಂಸತ್ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದರು.
ಶುಭ ಹಾರೈಕೆ: ವಿರೋಧ ಪಕ್ಷದ ಕರ್ತವ್ಯಗಳೇನು, ಮಂತ್ರಿಗಳು ಯಾವ ರೀತಿ ಕಾರ್ಯ ನಿರ್ವಹಿಸಬೇಕು. ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಹೇಗೆ ಕಾರ್ಯಕ್ರಮ ರೂಪಿಸಬೇಕು ಎಂಬುದನ್ನು ಅರಿಯಬಹುದಾಗಿದೆ.
 ಮಕ್ಕಳು ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳುವಂತೆ ತಿಳಿಸಿದರಲ್ಲದೇ, ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಇವುಗಳು ಸ್ಥಳೀಯ ಸರ್ಕಾರವಿದ್ದಂತೆ. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆದ್ಯತೆ ಮೇಲೆ ಪರಿಹರಿಸಿಕೊಳ್ಳಬೇಕು.
ಯುವ ಸಂಸತ್ ಕಾರ್ಯಕ್ರಮದಲ್ಲಿ ಉತ್ತಮವಾಗಿ ಸ್ಪರ್ಧೆ ನೀಡಿದಂತಹವರನ್ನು ಆಯ್ಕೆ ಮಾಡಲಾಗುವುದು. ಜ. 10 ಮತ್ತು 11ರಂದು ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಇವರಿಗೆ ಅವಕಾಶ ಕಲ್ಪಿಸಲಾಗುವುದು. ಕಾಡಾನೆ ಹಾವಳಿ, ನಗರ ಸ್ವಚ್ಛತೆಗಾಗಿ ಕಸ ವಿಲೇವಾರಿ, ವಸತಿ ನಿಲಯಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡುವ ಬಗೆ, ತಾಲ್ಲೂಕು ಮಟ್ಟದಲ್ಲಿ ಅಗ್ನಿ ಶಾಮಕ ಶಾಖೆ ತೆರೆಯುವ ಕುರಿತಂತೆ ವಿರೋಧಪಕ್ಷದವರು ಪ್ರಶ್ನೆ ಮಾಡಿದರು. ಆಡಳಿತ ಪಕ್ಷದವರು ಕ್ರಮ ಕೈಗೊಂಡಿರುವ ಬಗ್ಗೆ ಸಮಂಜಸ ಉತ್ತರ ನೀಡಿದರು.
ಭಾಗ್ಯಮ್ಮ ಸ್ವಾಗತಿಸಿದರು. ಭಾನುಮತಿ ವಂದಿಸಿದರು. ಪ್ರಭಾಮಣಿ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.