ಬೆಂಬೆಲೆಗೆ ಮೆಕ್ಕೆಜೋಳ, ರಾಗಿ, ಬತ್ತ ಖರೀದಿ
ಹಾಸನ: 2013-2014 ನೇ ಸಾಲಿನ ರಾಜ್ಯ ಸರ್ಕಾರದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ಮೆಕ್ಕೆಜೋಳ, ಬತ್ತ ಮತ್ತು ರಾಗಿ ಉತ್ಪನ್ನಗಳನ್ನು ರೈತರಿಂದ ನೇರವಾಗಿ ಖರೀದಿಸಲು ಜ. 1ರಿಂದ ಕೇಂದ್ರಗಳನ್ನು ತೆರೆಯಲಾಗಿದೆ.
ನೇರವಾಗಿ ಖಾತೆಗೆ ಜಮೆ: ಮೆಕ್ಕೆಜೋಳವನ್ನು ರೈತರಿಂದ ಪ್ರಮಾಣದ ಪರಿಮಿತಿ ಇಲ್ಲದೆ ಈ ಗುಣಮಟ್ಟದ ಮೆಕ್ಕೆಜೋಳವನ್ನು ಪ್ರತಿ ಕ್ವಿಂಟಾಲ್ಗೆ ರು. 1310ನಂತೆ ಖರೀದಿ ಮಾಡಲಾಗುತ್ತಿದೆ.
ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿದ ರೈತರಿಗೆ ಹಣವನ್ನು ಅವರುಗಳ ಬ್ಯಾಂಕ್ ್ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ಖರೀದಿಸಿದ ನಂತರ 3-4 ದಿನಗಳಲ್ಲಿ ಜಮಾ ಮಾಡಲಾಗುತ್ತಿದೆ. ಇದುವರೆಗೆ 128 ರೈತರಿಗೆ ರು. 84 ಲಕ್ಷ ಪಾವತಿಸಿದ್ದು ಉಳಿದ 124 ರೈತರಿಗೆ ರು. 90 ಲಕ್ಷಗಳನ್ನು 2-3 ದಿನಗಳಲ್ಲಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು.
ಈ ಖರೀದಿ ಕೇಂದ್ರಗಳಲ್ಲದೇ ಹಾಸನದ ಪಶು ಆಹಾರ ಘಟಕವೂ ಕೂಡ ರೈತರಿಂದ ಇದೇ ದರದಲ್ಲಿ ಮೆಕ್ಕೆಜೋಳವನ್ನು ಖರೀದಿ ಮಾಡಲಾಗುತ್ತಿದ್ದು, ಈವರೆಗೆ ಈ ಘಟಕವು ಸುಮಾರು 200 ರೈತರಿಂದ 15650 ಕ್ವಿಂಟಾಲ್ ಮೆಕ್ಕೆಜೋಳವನ್ನು ಖರೀದಿ ಮಾಡಲಾಗಿರುತ್ತದೆ.
ಬತ್ತ: ಮೆಕ್ಕೆಜೋಳದ ಜೊತೆಗೆ ಭತ್ತವನ್ನೂ ಕೂಡ ರೈತರಿಂದ ಪ್ರತಿ ಕ್ವಿಂಟಾಲ್ಗೆ ಬೆಂಬಲ ಬೆಲೆ ರು. 1310 ರಾಜ್ಯ ಸರ್ಕಾರದ ಪ್ರೋತ್ಸಾಹಧನ ರು. 290 ಸೇರಿ, ಪ್ರತಿ ಕ್ವಿಂಟಾಲ್ಗೆ ರು. 1600 ನಂತೆ ಖರೀದಿ ಮಾಡಲು ಜಿಲ್ಲೆಯ ಹಾಸನ, ಹೊಳೆನರಸೀಪುರ, ಸಕಲೇಶಪುರ, ಬೇಲೂರು ಮತ್ತು ಅರಕಲಗೂಡಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಆದರೆ ಈವರೆಗೆ ಕೇವಲ 2 ರೈತರು ಮಾತ್ರ 43.5 ಕ್ವಿಂಟಾಲ್ ಬತ್ತವನ್ನು ಹಾಸನ ಕೇಂದ್ರದಲ್ಲಿ ಮಾರಾಟ ಮಾಡಿದ್ದಾರೆ.
ರಾಗಿ: ರಾಗಿಯನ್ನೂ ಕೂಡ ರೈತರಿಂದ ನೇರವಾಗಿ ಖರೀದಿಸಲು ಜಿಲ್ಲೆಯ ಹಾಸನ, ಚನ್ನರಾಯಪಟ್ಟಣ, ಅರಸೀಕೆರೆ ಮತ್ತು ಹೊಳೆನರಸೀಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಪ್ರತಿ ಕ್ವಿಂಟಾಲ್ಗೆ ಬೆಂಬಲ ಬೆಲೆ ರು. 1500 ಜತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹಧನ ರು. 300 ಸೇರಿಸಿ ಪ್ರತಿ ಕ್ವಿಂಟಾಲ್ಗೆ ರು. 1800ನಂತೆ ದರ ನಿಗದಿಪಡಿಸಲಾಗಿದೆ. ಈವರೆಗೆ ಯಾವುದೇ ರೈತರು ಈ ಕೇಂದ್ರಗಳಲ್ಲಿ ಮಾರಾಟ ಮಾಡಿರುವುದಿಲ್ಲ. ಮುಂದಿನ ದಿನಗಳಲ್ಲಿ ರೈತರು ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳುತ್ತಾರೆಂದು ನಿರೀಕ್ಷಿಸಲಾಗಿದೆ.
ಮಧ್ಯವರ್ತಿಗಳ ಅಗತ್ಯವಿಲ್ಲ
ರೈತರು ಯಾವುದೇ ಮಧ್ಯವರ್ತಿಗಳ ಮೂಲಕ ತಮ್ಮ ಉತ್ಪನ್ನವನ್ನು ಮಾರಾಟ ಮಾಡುವ ಅಗತ್ಯವಿರುವುದಿಲ್ಲ. ನೇರವಾಗಿ ತಮಗೆ ಸಂಬಂಧಿಸಿದ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಅಧಿಕಾರಿ ಸಿಬ್ಬಂದಿಗಳನ್ನು ಸಂಪರ್ಕಿಸಿ, ಹೆಚ್ಚಿನ ಮಾಹಿತಿ ಪಡೆದು ತಮ್ಮ ಉತ್ಪನ್ನವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುವುದರ ಮೂಲಕ ಸರ್ಕಾರದ ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

