ಹಾಸನ

'ವಿಶ್ವ ಮಾನವರಾಗಲು ಪ್ರಯತ್ನಿಸಬೇಕು'

Published On :

ಸಕಲೇಶಪುರ: ಪ್ರತಿಯೊಬ್ಬ ವಿದ್ಯಾರ್ಥಿಯೂ ವಿಶ್ವಮಾನವರಾಗಲು ಪ್ರಯತ್ನ ನಡೆಸಬೇಕಾಗಿದೆ ಎಂದು ಎಸ್ಎಫ್ಐ ರಾಜ್ಯಾಧ್ಯಕ್ಷ ಅನಂತನಾಯಕ್ ಹೇಳಿದರು.
ಪಟ್ಟಣದ ಪದವಿ ಪೂರ್ವ ಕಾಲೇಜು ಅವರಣದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ  ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾದ ಪ್ರಥಮ ವಿದ್ಯಾರ್ಥಿ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಒಂದಾಗಬೇಕು: ಜಾತಿ, ಮತ, ಪಂಥ, ಪ್ರದೇಶಗಳನ್ನು ವಿದ್ಯಾರ್ಥಿಗಳು ಮೀರಿ ಬೆಳೆಯವ ಪ್ರಯತ್ನ ಮಾಡವ ಮೂಲಕ ವಿಶ್ವಮಾನವರಾಗುವ ಹಾಗೂ ದೇಶದಲ್ಲಿ ಜಾತಿರಹಿತ ಸಮಾಜ ನಿರ್ಮಾಣ ಮಾಡಲು ಪ್ರಯತ್ನ ನಡೆಸಬೇಕಾದ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು. ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಹೋಗುವ ಸಂದರ್ಭದಲ್ಲಿ ಜಾತಿ- ಮತದ ಅರಿವಿರುವುದಿಲ್ಲ. ಆದರೆ, ಶಾಲಾ ಕಾಲೇಜು ಮಟ್ಟದಲ್ಲೂ ಜಾತಿ, ಮತ ಬಿತ್ತುವ ಕೆಲಸವನ್ನು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಇವುಗಳನ್ನು ವಿದ್ಯಾರ್ಥಿಗಳು ತಡೆಯುವ ನಿಟ್ಟಿನಲ್ಲಿ ಹೋರಾಟ ಮಾಡಲು ಒಂದಾಗಬೇಕಿದೆ. ವಿದ್ಯಾರ್ಥಿಗಳು ಒಂದಾಗದಿದ್ದರೆ ಉನ್ನತ ಶಿಕ್ಷಣ, ಉದ್ಯೋಗ ದೂರವಾಗಲಿದೆ ಎಂದರು.
ಹೋರಾಟ: ಎಸ್ಎಫ್ಐ ಜಿಲ್ಲಾ ಮುಖಂಡ ಅನುಷಾದ್ ಮಾತನಾಡಿ, ಮಾಧ್ಯಮಗಳು ಹೆಣ್ಣನ್ನು  ವೈಭವೀಕರಣ ಮಾಡುತ್ತಿರುವುದರಿಂದಾಗಿ ಇಂದು ಅತ್ಯಾಚಾರದಂತಹ ಪ್ರಕರಣಗಳು ದೇಶದಲ್ಲಿ ಹೆಚ್ಚಾಗಲು ಕಾರಣವಾಗಿದೆ.
ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಒಟ್ಟಾಗಿ ಪ್ರತಿಭಟನೆ  ನಡೆಸದಿದ್ದರೆ ಕಾಲೇಜು ವಿದ್ಯಾರ್ಥಿನಿಯರು ಹೆಚ್ಚಿನ ಆತಂಕ ಎದುರಿಸಬೇಕಾಗುತ್ತದೆ. ಆದ್ದರಿಂದ ಎಸ್ಎಫ್ಐ ಸಂಘಟನೆ ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗ ಎಂಬ ಗುರಿಯನ್ನಿಟ್ಟು ಹೋರಾಟ ನಡೆಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಮಂಜುನಾಥ, ಜಿಲ್ಲಾ ಮುಖಂಡ ಮಹೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.