ಹಾಸನ

ಕೆಲ ಗ್ರಾಮ ಪಂಚಾಯ್ತಿ ಸದಸ್ಯರಿಂದ ತೊಂದರೆ: ಮಹದೇವಮ್ಮ

Published On :

ಹಾಸನ: ದಲಿತರ ಖರಾಬ್ ಭೂಮಿ ಲಪಟಾಯಿಸುವ ದೃಷ್ಟಿಯಿಂದ ನುಗ್ಗೇಹಳ್ಳಿಯ ಕೆಲ ಗ್ರಾಪಂ ಸದಸ್ಯರು ತೊಂದರೆ ನೀಡುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷೆ ಮಹದೇವಮ್ಮ ಆರೋಪಿಸಿದ್ದಾರೆ.
ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿ ಗ್ರಾಮದ ಸರ್ವೇ ನಂ.274 ರ 1.17 ಎಕರೆ ಭೂಮಿಯು 13 ಮಂದಿ ದಲಿತರಿಗೆ ಮಂಜೂರಾಗಿದ್ದು, ಹಲವು ವರ್ಷಗಳಿಂದ ಸ್ವದೀನದಲ್ಲಿ ಇದ್ದರ ಸಹ ಗ್ರಾಪಂ ಸದಸ್ಯರಾದ ಮಂಜೇಗೌಡ ಗೌಡಾಕಿ, ಬಿ.ಸಿ. ದೊರೆಸ್ವಾಮಿ, ಮಹೇಶ್, ಜಾವಿದ್ ಈ ಜಾಗವನ್ನು ಲಪಟಾಯಿಸುವ ದೃಷ್ಟಿಯಿಂದ ಗ್ರಾಪಂಗೆ ಸೇರಿದ ಜಾಗ ಅಂತ ಸುಳ್ಳು ಹೇಳಿಕೊಂಡು ದೌರ್ಜನ್ಯ ಎಸಗುತ್ತಿದ್ದಾರೆ ಎಂದರು.
ಬೆದರಿಕೆಯ ಆರೋಪ: ಗ್ರಾಮದಲ್ಲಿ ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರನ್ನು ನಮ್ಮ ವಿರುದ್ಧ ಎತ್ತಿಕಟ್ಟಿದ್ದಾರೆ. ಅಷ್ಟೇ ಅಲ್ಲದೆ ಭೂಮಿ ಲಪಟಾಯಿಸಿದ್ದಾರೆ ಅಂತ ನಮ್ಮ ವಿರುದ್ಧ ಅಪಪ್ರಚಾರ ಮಾಡಿ ಗ್ರಾಮದಲ್ಲಿ ತಿರುಗಾಡದಂತೆ ಅವಮಾನಗೊಳಿಸಿದ್ದಾರೆ. ಜೊತೆಗೆ ನಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದರು. ಆದ್ದರಿಂದ ಈ ಬಗ್ಗೆ ನಮ್ಮಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದರು.
ತಾಪಂ ಸದಸ್ಯೆ ಕಮಲಮ್ಮ, ತಾಪಂ ಮಾಜಿ ಉಪಾಧ್ಯಕ್ಷ ರಂಗಸ್ವಾಮಿ, ಎಂ.ಬಿ. ಶಂಕರ್, ಭಾರತಿ  ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.