ಕೊರೆಗಾಂವ್ ವಿಜಯೋತ್ಸವ ಇಂದು ಪಂಜಿನ ಮೆರವಣಿಗೆ
ಕ.ಪ್ರ.ವಾರ್ತೆ ಹಾಸನ ಡಿ. 30
ದಲಿತ ಸಾಹಿತ್ಯ ಪರಿಷತ್, ಸಮತಾ ಸೈನಿಕ ದಳ, ಆಡುವಳ್ಳಿ ಹಾಗೂ ನಿಟ್ಟೂರು ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಡಿ. 31ರಂದು ಕೊರೆಗಾಂವ್ ವಿಜಯೋತ್ಸವದ ಅಂಗವಾಗಿ ಸಂಜೆ 7ಕ್ಕೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಅಂಬೇಡ್ಕರ್ ಪ್ರತಿಮೆವರೆಗೆ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಅಸ್ಪೃಶ್ಯರ ವಿದ್ಯೆಗಾಗಿ ಮರಣ ಹೊಂದಿದ 21 ವೀರ ಯೋಧರ ಸಮಾಧಿ ಸ್ಥಳಕ್ಕೆ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿ ಜ. 1ರಂದು ಆಗಮಿಸಿ ಸಮಾಧಿಗೆ ನಮಿಸುತ್ತಿದ್ದರು. ಅಂಬೇಡ್ಕರ್ಸೇರಿದಂತೆ ಈ ದೇಶದ ಶೋಷಿತರಿಗೆ ಸಿಕ್ಕಿರುವ ವಿದ್ಯೆಗೆ ಕಾರಣರಾದವರು ಸಿದ್ದನಾಕ. ಕೊರೆಗಾಂವ್ನಲ್ಲಿ ವೀರಯೋಧರಿಗೆ ವಿಜಯಸ್ತಂಭ ಸ್ಥಾಪಿಸಲಾಗಿದ್ದು ಶೋಷಿತರು ಪ್ರತಿ ವರ್ಷ ಇಲ್ಲಿಗೆ ಬಂದು ನಮಿಸುತ್ತಾರೆ.
ಇದರ ನೆನಪಿಗೆ ಹಾಸನದಲ್ಲೂ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ದಲಿತ ಸಂಘಟನೆಯ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ದಸಾಪ ಜಿಲ್ಲಾಧ್ಯಕ್ಷ ಹೆತ್ತೂರು ನಾಗರಾಜ್, ಸಮತಾ ಸೈನಿಕ ದಳದ ಜಿಲ್ಲಾಧ್ಯಕ್ಷ ಆರ್ಪಿಐ ಸತೀಶ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

