ಚರಂಡಿ, ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ
ಕ.ಪ್ರ.ವಾರ್ತೆ ಹಾಸನ ಡಿ. 30
ನಗರಸಭೆ ವ್ಯಾಪ್ತಿಯ ನಾನಾ ವಾರ್ಡ್ಗಳಲ್ಲಿ ಸಿಎಂಎಸ್ಎಂಟಿಡಿ ಯೋಜನೆಯಡಿ ರು. 30 ಕೋಟಿ ವೆಚ್ಚದಲ್ಲಿ ಚರಂಡಿ ಮತ್ತು ರಸ್ತೆ ನಿರ್ಮಾಣ ಕಾಮಗಾರಿಗೆ ಸೋಮವಾರ ಚಾಲನೆ ನೀಡಲಾಯಿತು.
ನಗರದ ಹಾಸನಾಂಬ ದೇವಸ್ಥಾನದ ಆವರಣದಲ್ಲಿ ಶಾಸಕ ಎಚ್.ಎಸ್. ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ಹಾಗೂ ಇತರರು ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಸೇರ್ಪಡೆ: ನಂತರ ಮಾಡನಾಡಿದ ಶಾಸಕ ಎಚ್.ಎಸ್. ಪ್ರಕಾಶ್, ಗುತ್ತಿಗೆದಾರರು ಮಾಡುವ ಕೆಲಸದ ಗುಣಮಟ್ಟದ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್ ಹಾಗೂ ಆಯುಕ್ತರು ಗಮನ ಹರಿಸುವಂತೆ ತಿಳಿಸಿದ ಅವರು, ಯಾವುದಾದರೂ ಕೆಲಸ ಕೈಬಿಟ್ಟು ಹೋಗಿದ್ದಲ್ಲಿ ಅಂತಹವುಗಳನ್ನು ಗಮನಕ್ಕೆ ತಂದರೆ ಅವುಗಳನ್ನು ಸೇರ್ಪಡೆ ಮಾಡಲಾಗುವುದು ಎಂದರು.
ನಗರದಲ್ಲಿ ನೈರ್ಮಲ್ಯ ಸ್ವಲ್ಪ ಮಟ್ಟಿಗೆ ಬದಲಾವಣೆ ಕಾಣುತ್ತಿದೆ. ಕಸ ವಿಲೇವಾರಿಗೆ ಡಂಪಿಂಗ್ ಯಾರ್ಡ್ ಮಾಡಲು ಮೂರು, ನಾಲ್ಕು ಸ್ಥಳಗಳನ್ನು ಪರಿಶೀಲಿಸಲಾಗಿದೆ. ದಿನನಿತ್ಯ ಸಂಗ್ರಹವಾದ ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಿ, ಗೊಬ್ಬರ ತಯಾರಿಸಿ ರೈತರಿಗೆ ಬಳಕೆಗೆ ನೀಡಲಾಗುವುದು ಎಂದರು.
ಮಲ್ಟಿ ವಿಲೇಜ್ ಸ್ಕೀಂ: ಕುಡಿಯುವ ನೀರಿಗೆ ತೊಂದರೆಯಾಗದಂತೆ ವಿಶೇಷ ಕಾಳಜಿ ವಹಿಸಬೇಕಾಗಿದ್ದು, ಹೇಮಾವತಿ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟರೆ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗುತ್ತದೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಬೇಕಾಗಿದೆ ಎಂದ ಅವರು, ವಿದ್ಯಾ ನಗರಕ್ಕೆ ಮಲ್ಟಿ ವಿಲೇಜ್ ಸ್ಕೀಂನಲ್ಲಿ ಕುಡಿಯುವ ನೀರು ಒದಗಿಸಲು ಉದ್ದೇಶಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶ್ರೀವಿದ್ಯಾ, ಉಪಾಧ್ಯಕ್ಷ ಇರ್ಷಾದ್ ಪಾಷ, ಸದಸ್ಯ ಎಚ್.ಎಸ್. ಅನಿಲ್ ಕುಮಾರ್, ಆಯುಕ್ತ ಕೃಷ್ಣಮೂರ್ತಿ ಹಾಗೂ ನಗರಸಭೆಯ ಸದಸ್ಯರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

