ಹಾಸನ

ಜ.17ರಂದು ಕಾಂಗ್ರೆಸ್ ಬೈಕ್ ರ್ಯಾಲಿ

Published On :

ಕ.ಪ್ರ.ವಾರ್ತೆ    ಹಾಸನ    ಡಿ. 30
ಜ.17ರಂದು ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಬೈಕ್ ರ್ಯಾಲಿ ಹಮ್ಮಿಕೊಂಡಿರುವುದಾಗಿ ಈ ಘಟಕದ ಪ್ರಧಾನ ಕಾರ್ಯದರ್ಶಿ ಲಕ್ಕೂರು ಬಸವರಾಜು ತಿಳಿಸಿದರು.
ರ್ಯಾಲಿ: ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1 ಸಾವಿರ ಬೈಕ್ಗಳಲ್ಲಿ ರ್ಯಾಲಿ ನಡೆಸಲಾಗುತ್ತದೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆಲೂರು ಮಾರ್ಗವಾಗಿ ಸಕಲೇಶಪುರ ತಲುಪಲಿದೆ. ನಂತರ ಪ್ರತೀ ತಾಲೂಕುಗಳು, ಹೋಬಳಿ ಮಟ್ಟದಲ್ಲಿ ದೇಶದ ಆಶಾಕಿರಣ ರಾಹುಲ್ ಗಾಂಧಿ ಅವರು ಪ್ರಧಾನಿ ಆಗುತ್ತಿರುವ ಬಗ್ಗೆ ಅರಿವು ಮೂಡಸಲಾಗತ್ತದೆ. ಈ ಮೂಲಕ ಪಕ್ಷವನ್ನು ಸಂಘಟಿಸಲಾಗುತ್ತದೆ ಎಂದು ಹೇಳಿದರು.
ರಾಹುಲ್ಗೆ ಒತ್ತಾಯ: ಜಿಲ್ಲೆಯಿಂದ ನಿಯೋಗವೊಂದು ತೆರಳಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಅಭಿನಂದಿಸುತ್ತದೆ ಎಂದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ವಿರುದ್ಧ ಪಕ್ಷದ ಸೈದ್ಧಾಂತಿಕ ನೆಲೆಗಟ್ಟನ್ನು ಹಾಗೂ ಎಲ್ಲಾ ವರ್ಗದ ಜನ ಒಪ್ಪುವಂಥ ಅಭ್ಯರ್ಥಿಗಳನ್ನು ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷದಿಂದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಬೇಕು ಎಂದು ರಾಹುಲ್ ಗಾಂಧಿಯವರನ್ನು ಒತ್ತಾಯಿಸಲಾಗುತ್ತದೆ ಎಂದರು.
ಶಾಸಕ ಎ. ಮಂಜು, ಮಾಜಿಶಾಸಕ ಎಸ್.ಎಂ.ಆನಂದ್, ಎಸ್.ಜಿ.ಅನುಪಮ, ಸಿ.ವಿ.ರಾಜಪ್ಪ, ಡಿ.ಸಿ.ಸಣ್ಣಸ್ವಾಮಿ, ಎಂ.ಕೆ.ಶೇಷೇಗೌಡ, ಸಕಲೇಶಪುರದ ಇ.ಎಸ್.ಚಂದ್ರಶೇಖರ್, ಜಾವಗಲ್ ಮಂಜುನಾಥ್ ಹಾಗೂ ರಾಧ ವಿಜಯಕುಮಾರ್ ಇವರ ಪೈಕಿ ಯಾರಿಗಾದರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಬೇಕು ಎಂದು ಒತ್ತಾಯಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಅರಸೀಕೆರೆ ಘಟದ ಅಧ್ಯಕ್ಷ ಮಲ್ಲಿಕಾರ್ಜುನ್, ಹೊಳೆನರಸೀಪುರ ಘಟಕದ ಅಧ್ಯಕ್ಷ ಬಿ.ಎಂ.ಬಸವರಾಜು, ರಮೇಶ್, ಶಂಕರಣ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.