ಶಾಸಕರ ಬೆಂಬಲಿಗರಿಂದ ಅಧಿಕಾರಿಗಳಿಗೆ ಬೆದರಿಕೆ: ಆರೋಪ
ಹಾಸನ: ಅರಸೀಕೆರೆ ಶಾಸಕರ ವಿರುದ್ಧ ಆರೋಪ ಮಾಡಿದ್ದಕ್ಕೆ, ಶಾಸಕರು ತಮ್ಮ ಬೆಂಬಲಿಗರಿಂದ ಅಧಿಕಾರಿಗಳನ್ನು ಹೆದರಿಸುತ್ತಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ವಿಜಯ್ ಕುಮಾರ್ ಆರೋಪಿಸಿದ್ದಾರೆ.
ಪ್ರತಿಭಟನೆ: ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರಸೀಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶಾಸಕರ ಅಧಿಕಾರಿಗಳನ್ನು ಬೆದರಿಸಿ 13 ಸಮುದಾಯ ಭವನ ನಿರ್ಮಾಣವಾಗಿದೆ ಅಂತ ಬಿಲ್ ಮಾಡಿಸಿಕೊಂಡಿದ್ದಾರೆ. ಆದರೆ ಇಲ್ಲಿಕೇವಲ ಒಂದು ಸಮುದಾಯ ಮಾತ್ರ ನಿರ್ಮಾಣವಾಗಿದೆ ಎಂದ ಅವರು, ಶಾಸಕರ ವಿರುದ್ಧ ಆರೋಪ ಮಾಡಿದ್ದಕ್ಕೆ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಶಾಸಕರು ತಮ್ಮ ಬೆಂಬಲಿಕರಿಂದ ಪ್ರತಿಭಟನೆ ಮಾಡಿಸಿದ್ದಾರೆ ಎಂದು ದೂರಿದರು. ಆದ್ದರಿಂದ, ಶಾಸಕರು ತಮ್ಮ ಬೆಂಬಲಿಗರಿಂದ ಯಾರ ಮೇಲಾದರು ಆರೋಪ ಮಾಡುವ ಮುನ್ನ ಸೂಕ್ತ ದಾಖಲೆಗಳನ್ನು ಇಟ್ಟುಕೊಂಡು ಆರೋಪ ಮಾಡಬೇಕು ಎಂದ ಅವರು, ಕ್ಷೇತ್ರದಲ್ಲಿ ನಡೆಯುತ್ತಿರುವ ಆಕ್ರಮಗಳನ್ನು ಸಂಬಂಧಪಟ್ಟವರು ಕ್ರಮಕೈಗೊಳ್ಳದಿದ್ದರೆ ಈ ವಿರುದ್ಧ ಲೋಕಾಯುಕ್ತರ ಮೊರೆ ಹೋಗುವುದಾಗಿ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವೀರಭದ್ರಪ್ಪ, ನೀಲಕಂಠಪ್ಪ, ಮಾಳಿಗೇನಹಳ್ಳಿ ಶ್ರೀನಿವಾಸ್, ಚರಣಪೊನ್ನಸಮುದ್ರ, ರಘು ಹಾಗೂಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

