ಕಳಪೆ ಕಾಮಗಾರಿಗೆ ಅಧಿಕಾರಿಗಳೇ ಹೊಣೆ: ಶಾಸಕ
ಕ.ಪ್ರ.ವಾರ್ತೆ ಸಕಲೇಶಪುರ ಡಿ. 30
ಕಾಮಗಾರಿಯ ಗುಣಮಟ್ಟದಲ್ಲಿ ಲೋಪದೋಷ ಕಂಡು ಬಂದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗವುದು ಎಂದು ಶಾಸಕ ಎಚ್.ಕೆ. ಕುಮಾರಸ್ವಾಮಿ ಎಚ್ಚರಿಸಿದರು.
ಪಟ್ಟಣದ ಹಳೆಸಂತವೇರಿ ಬಡಾವಣೆಯಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನದ ಅನುದಾನದ ಆಡಿಯಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಮುಂದಿನ ದಿನಗಳಲ್ಲಿ ಶಾಸಕರ ಮತ್ತು ಸರ್ಕಾರದ ಅನುದಾನದಿಂದ ಪಟ್ಟಣವನ್ನು ಅಭಿವೃದ್ಧಿಗೊಳಿಸಿ ರಾಜ್ಯಕ್ಕೆ ಮಾದರಿ ಪಟ್ಟಣವನ್ನಾಗಿ ಮಾಡಲು ಪ್ರಯತ್ನಿಸಲಾಗುವುದು ಎಂದರು.
ಈ ನಿಟ್ಟಿನಲ್ಲಿ, 13,14ರ ಸಾಲಿನ ಸುಮಾರು ರು. 5 ಕೋಟಿ ಅನುದಾನದಲ್ಲಿ ಪುರಸಭೆ ವ್ಯಾಪ್ತಿಯಲ್ಲಿ 5.500 ಕಿ.ಮೀ. ರಸ್ತೆಗೆ ರು. 3.60 ಲಕ್ಷ, 1.5 ಕಿ.ಮೀ. ಡಾಂಬರೀಕರಣಕ್ಕೆ ರು. 50 ಲಕ್ಷ ಮತ್ತು 1050 ಮೀಟರ್ ಚರಂಡಿಗೆ ರು. 90 ಲಕ್ಷ ವೆಚ್ಚದಲ್ಲಿ ನಾನಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಪಟ್ಟಣದ ಮೂಲಭೂತ ಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಿ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿದೆ. ಶೇ.75ರಷ್ಟು ಕಾಮಗಾರಿಯು ಪೂರ್ಣಗೊಂಡಿದ್ದು, ಉಳಿಕೆ ಶೇ. 25ರಷ್ಟನ್ನು ಈ ಸಾಲಿನ ಶಾಸಕರ ಮತ್ತು ಸರ್ಕಾರದ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುವುದು ಎಂದರು.
ಪುರಸಭೆ ಅಧ್ಯಕ್ಷ ಸತೀಶ್ ಮಾತನಾಡಿ, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕಾದರೆ, ಪುರಸಭೆಯೊಂದಿಗೆ ಸಾರ್ವಜನಿಕರು ಕೈ ಜೋಡಿಸಬೇಕೆಂದರು. ಕಾಮಗಾರಿ ನಡೆಯುತ್ತಿರುವ ಸಂದರ್ಭದಲ್ಲಿ ಗುಣಮಟ್ಟದಲ್ಲಿ ಲೋಪಗಳು ಕಂಡು ಬಂದರೆ ಕೂಡಲೆ ಪುರಸಭೆಯ ಗಮನಕ್ಕೆ ತರುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ, ಮುಖ್ಯಾಧಿಕಾರಿ ವೀರಭದ್ರಯ್ಯ, ಪುರಸಭೆ ಉಪಾಧ್ಯಕ್ಷ ಮುಕೇಶ್, ಸದಸ್ಯರಾದ ಉಮೇಶ್, ನಿರ್ವಾಣ್ಯ, ಸಂತೋಷ್, ರುದ್ರಕುಮಾರ್, ಸಮೀರ್, ಸೂರ್ಯ, ಸುಶ್ಮ, ರೇಖಾ, ತಾಜುನ್ನೀಸಾ, ಲಲಿತಮ್ಮ, ಭಾಗ್ಯಮ್ಮ, ಪುರಸಭೆ ಮಾಜಿ ಅಧ್ಯಕ್ಷರಾದ ಯಾದ್ಗಾರ್ ಇಬ್ರಾಹಿಂ, ಆದ, ಜೆಡಿಎಸ್ ಖಂಡರಾದ ಪ್ರಕಾಶ್, ರಾಮಕೃಷ್ಣ, ಗುತ್ತಿಗೆದಾರರಾದ ಅಜೀಜಜ್ಮತ್ತು ಅಬೂಬಕ್ಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

