ಹಾಸನ

ಕಾರುಗಳ ಡಿಕ್ಕಿ: ಐವರಿಗೆ ಗಂಭೀರ ಗಾಯ

Published On :

ಕ.ಪ್ರ.ವಾರ್ತ್ಣೆ ಬೇಲೂರು    ಡಿ 31
ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ, 5 ಜನರಿಗೆ ಗಂಭೀರ ಗಾಯವಾದ ಘಟನೆ ಸೋಮವಾರ ಸಂಜೆ ನಡೆದಿದೆ. ಗಾಯಾಳುಗಳನ್ನು  ಹೆಚ್ಚಿನ ಚಿಕಿತ್ಸೆಗೆ ಹಾಸನದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಕ್ಕೋಡು ರಸ್ತೆಯ ಕೆರಲೂರು ಗಡಿಯ ಬಳಿ ಮಾರುತಿ ಆಲ್ಟೋ ಕಾರಿನಲ್ಲಿ ಸುಬ್ರಮಣ್ಯದಿಂದ ಪ್ರವಾಸ ಮುಗಿಸಿಕೊಂಡು ವಾಪಸ್ಸು ದಾವಣಗೆರೆ ಬೇಲೂರು ಮಾರ್ಗವಾಗಿ ಹೋಗುವಾಗ ಎದುರಿನಿಂದ ಬಂದ ಮಾರುತಿ 800 ಕಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ.
ಇದರ  ಪರಿಣಾಮ ಎರಡು ಕಾರುಗಳು ಜಖಂಗೊಂಡು ಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಗಂಬೀರ ಗಾಯಗಳಾಗಿವೆ. ಗಾಯಗೊಂಡವರನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕ್ಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೇಟಿ ನೀಡಿದ ಸಬ್ ಇನ್ಸ್ಪೆಕ್ಟರ್ ಅಶ್ವಿನ್ ಕುಮಾರ್ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ಪ್ರಯಾಣಿಕರ ಆಟೋ ಪಲ್ಟಿ: ಮತ್ತೊಂದು ಪ್ರಕರಣದಲ್ಲಿ ಸೋಮವಾರ ಸಂಜೆ ಸುಮಾರು 5-30 ರ ಸಮಯದಲ್ಲಿ ಬೇಲೂರಿನ ಗೆಂಡೇಹಳ್ಳಿ ರಸ್ತೆಯಲ್ಲಿರುವ ಕಳಸಿನ ಕೆರೆ ಏರಿಯ ಬಳಿ ಜನರನ್ನು ತುಂಬಿಸಿಕೊಂಡು ಬರುತ್ತಿದ್ದ ಬಜಾಜ್ ಆಟೋ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸುಮಾರು 10 ಅಡಿ ಆಳದ ಕಂದಕಕ್ಕೆ ಉರುಳಿ ಕೊಂಡಿರುತ್ತದೆ. ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಆಗಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.