ದಲಿತರ ಬಹಿಷ್ಕಾರ ವಿರೋಧಿಸಿ ಪ್ರತಿಭಟನೆ
ಕ.ಪ್ರ.ವಾರ್ತ್ಣೆ ಹಾಸನ ಡಿ 31
ದಲಿತರ ಸಾಮೂಹಿಕ ಬಹಿಷ್ಕಾರ ಪ್ರಕರಣ ವಿರೋಧಿಸಿ ಹಾಗೂ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಎಂ) ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲ ಸಮಯ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ನೀಡಿದರು.
ಆಗ್ರಹ: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಗದ್ಯಾಳ ಗ್ರಾಮದಲ್ಲಿ ದಲಿತರ ಸಾಮೂಹಿಕ ಬಹಿಷ್ಕಾರ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಬಳಿದು ಅಪಮಾನ ಮಾಡಿರುವ ಘಟನೆ ಖಂಡನೀಯ. ಈ ಘಟನೆಗೆ ಕಾರಣರಾದವರನ್ನು ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಆಗ್ರಹಿಸಿದರು.
ಒತ್ತಾಯ: ಗದ್ಯಾಳ ಗ್ರಾಮದಲ್ಲಿ ಬಹಿಷ್ಕಾರವನ್ನು ವಿರೋಧಿಸಿ ಪರವಾಗಿ ನಿಂತ ಇಬ್ಬರ ಮೇಲೆ ತಲಾ ರು. 5 ಸಾವಿರ ದಂಡವನ್ನು ಊರಿನ ಮುಖಂಡರು ವಿಧಿಸಿದ್ದಾರೆ. ಇದರಿಂದಾಗಿ ಕಳೆದ ನಾಲ್ಕು ತಿಂಗಳಿಂದ ಅಲ್ಲಿನ ದಲಿತರು ಯಾವುದೇ ಕೂಲಿಯಿಲ್ಲದೆ, ದಿನಸಿಗಾಗಿ, ಹಿಟ್ಟಿನ ಗಿರಿಣಿಗಾಗಿ, ಕ್ಷೌರಕ್ಕಾಗಿ ಮತ್ತು ದಿನ ನಿತ್ಯದ ಬದುಕಿಗಾಗಿ ಮತ್ತು ವಸ್ತುಗಳಿಗಾಗಿ ಸುಮಾರು 10ರಿಂದ 12 ಕಿ.ಮೀ. ದೂರ ಹೋಗಬೇಕಾಗಿದೆ. ಹಾಗಾಗಿ ಸರ್ಕಾರ ಈ ಕೂಡಲೇ ಈ ಎಲ್ಲಾ ದಲಿತ ಕುಟುಂಬಗಳಿಗೂ ಸೂಕ್ತ ಅವಶ್ಯಕ ವಸ್ತುಗಳು ಜೊತೆಗೆ ಉದ್ಯೋಗ ನೀಡುವ ಮೂಲಕ ನೆರವು ನೀಡಬೇಕು ಎಂದು ಒತ್ತಾಯಿಸಿದರು.
ನಿರುದ್ಯೋಗ ಭತ್ಯೆ ನೀಡಿ: ಕಳೆದ ನಾಲ್ಕು ತಿಂಗಳಿಂದ ಉಗ್ಯೋಗವಿಲ್ಲದೆ ತೊಂದರೆಗೊಳಗಾದ ಗದ್ಯಾಳ ಗ್ರಾಮದ ಪ್ರತಿ ದಲಿತ ಕುಟುಂಬಕ್ಕೆ ಕನಿಷ್ಟ ರು. 25 ಸಾವಿರ ನಿರುದ್ಯೋಗ ಪರಿಹಾರವಾಗಿ ರಾಜ್ಯ ಸರ್ಕಾರ ಒದಗಿಸಬೇಕು. ಕೂಡಲೇ ಉದ್ಯೋಗ ಖಾತ್ರಿಯಲ್ಲಿ ಅವರಿಗೆ ಕೂಲಿ ಕೆಲಸ, ನಿರುದ್ಯೋಗಿ ವಿದ್ಯಾವಂತ ಯುವಕರಿಗೆ ಕೂಡಲೇ ಉದ್ಯೋಗ ತರಬೇತಿಯನ್ನು ಸಹಾಯಧನದೊಂದಿಗೆ ನೀಡಬೇಕು. ಅಲ್ಲದೇ, ದಲಿತರ ಪ್ರದೇಶದಲ್ಲಿ ಎಲ್ಲಾ ಕುಟುಂಬಗಳಿಗೆ ಪುನರ್ವಸತಿ ಮತ್ತು ಧೈರ್ಯದಿಂದ ಬದುಕುವ ಪರಿಸ್ಥಿತಿ ನಿರ್ಮಿಸಬೇಕು ಎಂದು ಪಟ್ಟು ಹಿಡಿದರು.
ಪ್ರತಿಭಟನೆಯಲ್ಲಿ ಸಿಪಿಎಂ ನ ಜಿಲ್ಲಾ ಮುಖಂಡ ಧರ್ಮೇಶ್, ಎಸ್ಎಫ್ಐ ನ ಜಿಲ್ಲಾಧ್ಯಕ್ಷ ಎಂ.ಜಿ.ಪೃಥ್ವಿ, ದಂಡೋರ ಜಿಲ್ಲಾಧ್ಯಕ್ಷ ಟಿ.ಆರ್. ವಿಜಯ್ ಕುಮಾರ್, ತಾಲೂಕು ಅಧ್ಯಕ್ಷ ರವಿಕುಮಾರ್, ದಲಿತ ಹಕ್ಕುಗಳ ಸಮಿತಿ ಸದಸ್ಯ ಕೆ.ಎಸ್.ಮಂಜುನಾಥ್, ಅರವಿಂದ್ ಹಾಗೂ ಇತರರು ಇದ್ದರು.
ಬೇಡಿಕೆಗಳು
ಟಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಬೇಕು. ದಲಿತರ ಸಾಮೂಹಿಕ ಬಹಿಷ್ಕಾರ ಪ್ರಕರಣಗಳನ್ನು ತಡೆಗಟ್ಟಬೇಕು.
ಟಿ ದಲಿತರ ಮೇಲೆ ದೌರ್ಜನ್ಯಗಳು ನಡೆದಲ್ಲಿ, ದೌರ್ಜನ್ಯ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು.
ಟಿ ಸಾಮೂಹಿಕ ಬಹಿಷ್ಕಾರಕ್ಕೆ ಒಳಗಾದಂತಹ ದಲಿತ ಕುಟುಂಬಗಳಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು ಹಾಗೂ ಸಾಮೂಹಿಕ ಬಹಿಷ್ಕಾರದಂತಹ ಪ್ರಕರಣಗಳನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಲ್ಲಿಸಿಬೇಕು.
ಟಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನ ಸಮುದಾಯಕ್ಕೆ ಶೇ.7ರಷ್ಟು ಉದ್ಯೋಗ ಮತ್ತು ಶೈಕ್ಷಣಿಕ ಮೀಸಲಾತಿಯನ್ನು ನೀಡಬೇಕು.
'ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಿ'
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಶೇ.7ರಷ್ಟು ಉದ್ಯೋಗ ಮತ್ತು ಶೈಕ್ಷಣಿಕ ವಲಯದಲ್ಲಿ ಮೀಸಲಾತಿಯನ್ನು ರಾಜ್ಯದಲ್ಲಿ ಜಾರಿಗೆ ತರುವಂತೆ ಸೂಕ್ತ ಕ್ರಮವಹಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ ಪ್ರತಿಭಟನಕಾರರು, ಹಾಲಿ ಶೇ. 3ರಷ್ಟು ಮಾತ್ರವೇ ಮೀಸಲಾತಿ ಇದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಸಿಗುವಂತಾಗಲು ಶೇ.7ಕ್ಕೆ ಹೆಚ್ಚಿಸಬೇಕು ಎಂದು ಪಟ್ಟು ಹಿಡಿದರು.
'ಕಾನೂನು ರಕ್ಷಣೆ ನೀಡುತ್ತಿಲ್ಲ'
ರಾಜ್ಯದಲ್ಲಿ ಇತ್ತೀಚೆಗೆ ಇಂತಹ ದಲಿತರ ಸಾಮಾಜಿಕ ಬಹಿಷ್ಕಾರ ಪ್ರಕರಣಗಳು ಹೆಚ್ಚುತ್ತಿವೆ. ದಲಿತರಿಗೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ ಮತ್ತು ಪ್ರಕರಣಗಳ ಆರೋಪಿಗಳಿಗೆ ಸರಿಯಾದ ಕಠಿಣ ಕಾನೂನು ಕ್ರಮ ಜಾರಿಯಾಗುತ್ತಿಲ್ಲ. ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳಿಗೆ ಸೂಕ್ತ ಕಾನೂನು ರಕ್ಷಣೆ ನೀಡದೇ ದಲಿತ ಸಮುದಾಯವನ್ನು ಕಡೆಗಣಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
'ದೌರ್ಜನ್ಯ ತಡೆ ಸಾಧ್ಯವಾಗುತ್ತಿಲ್ಲ'
ದಲಿತರ ಮೇಲೆ ನಡೆಯುತ್ತಿರುವಂತಹ ದೌರ್ಜನ್ಯದ ಪ್ರಕರಣಗಳು ಇತ್ತೀಚೆಗೆ ಕಡಿಮೆಯಾಗುವ ಬದಲಾಗಿ ದಿನೇ ದಿನೇ ಎಚ್ಚಾಗುತ್ತಲೇ ಇದೆ. ಈ ಬಗ್ಗೆ ಸಂಬಂಧಪಟ್ಟವರು ಯಾವುದೇ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯದೋರಣೆ ತಾಳಿದ್ದಾರೆ. ಇದರಿಂದ ದಲಿತರು ಕೆಲವು ಸ್ಥಳಗಳಲ್ಲಿ ನಿರ್ಭೀತಿಯಿಂದ ಜೀವನ ನಡೆಸಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನುಗಳು ಎಷ್ಟೇ ಇದ್ದರು ಸಹ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

