ಕೊಳಗುಂದ ಆಸ್ಪತ್ರೆಗೆ ಬೀಗ ಜಡಿದು ಪ್ರತಿಭಟನೆ
ಜಾವಗಲ್: ಸಮೀಪದ ಕೋಳಗುಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಗ್ರಾಮಸ್ಥರು ಬೀಗಹಾಕಿ ಮೂಲಭೂತ ಸೌಕರ್ಯಗಳಿಗಾಗಿ ಪ್ರತಿಭಟನೆ ನೆಡೆಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 15 ಗ್ರಾಮಗಳು ಸೇರಿದ್ದು, ಗ್ರಾಮದಲ್ಲಿ 10 ಸಾವಿರ ಜನಸಂಖ್ಯೆ ಇದೆ. ಸುಮಾರು 5 ತಿಂಗಳಿಂದ ಕಾಯಂ ವೈದ್ಯರಿಲ್ಲದೆ, ನರ್ಸ್ಗಳು ಹಾಗೂ ಅಗತ್ಯ ಔಷಧಿ ಸಾಮಗ್ರಿಗಳಿಲ್ಲದೆ ತುಂಬಾ ತೊಂದರೆಯಾಗುತ್ತಿದೆ. ಜೊತೆಗೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಪ್ರಭಾವತಿ ತಾಯಿ ಕಾರ್ಡ್ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಕಾರ್ಡ್ ನೀಡಲು ರು.500 ವರೆಗೆ ಲಂಚ ಕೇಳುತ್ತಿದ್ದು, ಕೂಡಲೆ ಅಮಾನತು ಪಡಿಸುವಂತೆ ಒತ್ತಾಯಿಸಿ ಮಹಿಳೆಯರೂ ಸೇರಿದಂತೆ ಗ್ರಾಮಸ್ಥರು ಆಸ್ಪತ್ರೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.
ಈ ವೇಳೆ ಜಾವಗಲ್ ಹೋಬಳಿ ಬಿಜೆಪಿ ಅಧ್ಯಕ್ಷ ರೇಣುಕಾಪ್ರಸಾದ್, ಗ್ರಾಮಸ್ಥರಾದ ನಾಗಭೂಷಣಸ್ವಾಮಿ, ವಕೀಲ ಶರತ್, ಸಂತೋಷ್, ಸೋಮಶೇಖರ್, ಬಸವರಾಜಪ್ಪ, ಭಾಗ್ಯಾಬಾಯಿ ರಾಣಿ, ಲಕ್ಕಮ್ಮ, ರವಿ ಸೇರಿದಂತೆ ಹಲವಾರು ಗ್ರಾಮಸ್ಥರು ಮೂಲಭೂತ ಸೌಕರ್ಯ ಹಾಗೂ ನರ್ಸ್ ಪ್ರಭಾವತಿಯ ಲಂಚಗೂಳಿತನ ಹಾಗೂ ನರ್ಸ್ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ಮುಂದೆ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ರಾಜ್ಯ ಕೆಜೆಪಿ ಉಪಾಧ್ಯಕ್ಷ ಎಚ್.ಎಂ.ವಿಶ್ವನಾಥ್ ಮಾತನಾಡಿ, ಬಡಜನರ ಶೋಷಣೆ ಮಾಡುತ್ತಿರುವ ನರ್ಸ್ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಡಿಎಚ್ಓ ಅವರಿಗೆ ತಿಳಿಸಿದ ಅವರು, ತಾಯಿಕಾರ್ಡ್ ಕೂಡಲೆ ವಿತರಿಸುವಂತೆ ಮೂಲಭೂತ ಸೌಕರ್ಯ ಒದಗಿಸಿ ಕೊಡುವಂತೆ ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶ್ಯಾಮಲಾ ದೇವಿ ಮಾತನಾಡಿ ನರ್ಸ್ ಮಸರಿ ಪ್ರಭಾವತಿ ಅವರನ್ನು ಇಂದಿನಿಂದಲೇ ಅಮಾನತ್ತುಗೊಳಿಸಿ ಶಿಸ್ತುಕ್ರಮ ಕೈಗೊಳ್ಳಲು ಆಯುಕ್ತರಿಗೆ ತಿಳಿಸಲಾಗುವುದೆಂದರು. ಜಿಲ್ಲೆಯಲ್ಲಿ 110 ವೈದ್ಯರ ಕೊರತೆ ಇದ್ದು ಗುತ್ತಿಗೆ ಆಧಾರದ ಮೇಲೆ ಕ್ರಮ ಕೈಗೊಂಡಿದ್ದು ಕೂಡಲೆ ವೈದ್ಯರನ್ನು ನೇಮಿಸಲಾಗುವುದು ಎಂದರು.
ಡಾ.ಜನಾರ್ದನ್ ಮಾತನಾಡಿ, ನರ್ಸ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವುದಾಗಿ ತಿಳಿಸಿ ತಾಯಿ ಕಾರ್ಡ್ಗಳನ್ನು ಎಲ್ಲಾ ಆಸ್ಪತ್ರೆಗಳಲ್ಲೂ ಉಚಿತವಾಗಿ ವಿತರಿಸಬೇಕು. ಯಾರಾದರೂ ಲಂಚ ಕೇಳಿದರೆ ಅಮಾನತು ಗೊಳಿಸಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಡಾ.ವಿಜಯೇಂದ್ರ, ಡಾ.ಗೀತಾ, ಡಾ.ಶರಣಪ್ಪ, ಲೋಹಿತ, ರವಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

