ಹಾಸನ

ಸಾಹಿತಿ ಆಶಿಶ್‌ನಂದಿ ಹೇಳಿಕೆಗೆ ಪಟೇಲ್ ಶಿವಪ್ಪ ಖಂಡನೆ

Published On :

ಅರಸೀಕೆರೆ: ಜೈಪುರದಲ್ಲಿ ಇತ್ತೀಚಿಗೆ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಪ.ಜಾತಿ, ಪಂಗಡ ಹಿಂದುಳಿದ ವರ್ಗಗಳಿಂದಲೇ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಸಾಹಿತಿ ಆಶಿಶ್ ನಂದಿ ನೀಡಿರುವ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ ಪಟೇಲ್ ಶಿವಪ್ಪ ತೀವ್ರವಾಗಿ ಖಂಡಿಸಿದ್ದಾರೆ.
  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಇಂತಹ ಹೇಳಿಕೆ ನೀಡುವ ಮೂಲಕ ಇನ್ನಷ್ಟು ಶೋಷಿತರನ್ನಾಗಿ ಮಾಡುವ ಹುನ್ನಾರ ನಡೆಸಿದ್ದಾರೆಂದು ದೂರಿದರು.
  ಸಮಾಜ-ಸಮಾಜಗಳ ನಡುವೆ ಸಂಘರ್ಷ ಉಂಟು ಮಾಡಿರುವ ಇಂತಹವರ ವಿರುದ್ಧ ಮೊಕದ್ದಮೆ ದಾಖಲಿಸಿದರೆ ಸಾಲದು. ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ದೇಶದಿಂದ ಹೊರಹಾಕಬೇಕೆಂದು ಒತ್ತಾಯಿಸಿದ್ದರು.
 ಭ್ರಷ್ಟಾಚಾರಕ್ಕೆ ಯಾವುದೇ ಜಾತಿಯಿಲ್ಲ. ಯಾರೇ ಭ್ರಷ್ಟಾಚಾರವೆಸಗಿದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಅನೇಕ ಇಲಾಖೆಗಳು ಹಾಗೂ ನ್ಯಾಯಾಲಯವಿದೆ. ಆದರೆ ಕೇವಲ ಶೋಚಿತರು, ಹಿಂದುಳಿದವರು ಭ್ರಷ್ಟರು ಎಂದು ಹೇಳಿಕೆ ನೀಡಿರುವ ಇಂತಹವರಿಗೆ  ಸಾಹಿತ್ಯೋತ್ಸವದಲ್ಲಿ ಭಾಷಣ ಮಾಡಲು ಅವಕಾಶ ನೀಡಿರುವುದು ವಿಷಾದಕರ ಸಂಗತಿ ಎಂದರು. ಜಿಲ್ಲಾ ಕಾಂಗ್ರೆಸ್ ಎಸ್‌ಟಿ ಘಟಕದ ಅಧ್ಯಕ್ಷ ಶೇಖರನಾಯ್ಕ್ ದಲಿತ ಮುಖಂಡ ಎ.ಎಚ್.ಶಂಕರಯ್ಯ, ಭೋವಿ ಸಮಾಜದ ಅಧ್ಯಕ್ಷ ಉಮಾಶಂಕರ್, ತಾಪಂ ಮಾಜಿ ಅಧ್ಯಕ್ಷ ಗುರುಮೂರ್ತಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.