ಕುಡುರಗಹಳ್ಳಿ: ಶಾಲೆ ಹೆಚ್ಚುವರಿ ಕಟ್ಟಡ ಉದ್ಘಾಟನೆ
ಸಕಲೇಶಪುರ: ಪಟ್ಟಣದ ಕುಡುಗರಹಳ್ಳಿ ಬಡಾವಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ನಿರ್ಮಾಣವಾಗಿರುವ ಹೆಚ್ಚುವರಿ ಕಟ್ಟಡವನ್ನು ಗುರುವಾರ ಶಾಸಕ ಎಚ್.ಕೆ. ಕುಮಾರಸ್ವಾಮಿ ಉದ್ಘಾಟಿಸಿದರು.
ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ್ಲ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರಗಳು ಸಾಕಷ್ಟು ಯೋಜನೆಗಳನ್ನು ಅನುಷ್ಟಾನಗೊಳಿಸಿವೆ. ಆದ್ದರಿಂದ ಪೋಷಕರು ಖಾಸಗಿ ಶಾಲೆಗಳತ್ತ ವಾಲದೆ, ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿಯೇ ಮುಂದುವರೆಸಬೇಕು ಎಂದು ಮನವಿ ಮಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಮಾತನಾಡಿದರು.ಪುರಸಭೆ ಮಾಜಿ ಉಪಾಧ್ಯಕ್ಷ ಉಮೇಶ್, ಯುವ ಜೆಡಿಎಸ್ ಅಧ್ಯಕ್ಷ ಸ.ಬ. ಭಾಸ್ಕರ್, ಶಾಲೆ ಮುಖ್ಯ ಶಿಕ್ಷಕಿ ಜಯಮ್ಮ, ಎಸ್‌ಡಿಎಂಸಿ ಅಧ್ಯಕ್ಷ ರಂಗಸ್ವಾಮಿ, ಬಿಆರ್‌ಸಿ ಅನಿತಾ, ಪುರಸಭೆ ಮಾಜಿ ಸದಸ್ಯ ಕೃಷ್ಣೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

