ಎನ್ನೆಸ್ಸೆಸ್ ಶಿಬಿರದಲ್ಲಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ
ಹಾಸನ: ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ತಾಲೂಕಿನ ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿಯಲ್ಲಿ ಏರ್ಪಡಿಸಿರುವ ಎನ್ಎಸ್ಎಸ್ ಶಿಬಿರದಲ್ಲಿ ವ್ಯಕ್ತಿತ್ವ ವಿಕಾಸ ಕೇಂದ್ರದ ಸುರೇಶ ಗುರೂಜಿ ಅವರಿಂದ ಯೋಗ ಮತ್ತು ಪ್ರಾಣಾಯಾಮ ಎಂಬ ವಿಷಯ ಕುರಿತು ಮಾಹಿತಿ ನೀಡಲಾಯಿತು.
ಮನುಷ್ಯನ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಲು ಅಗತ್ಯವಾದ ಅಷ್ಟಾಂಗ ಯೋಗದ ಪರಿಚಯವನ್ನು ಗುರೂಜಿ ಮಾಡಿಕೊಟ್ಟರು. ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಮುಖ್ಯ ಪಾತ್ರವಹಿಸುವ ಪಂಚಕೋಶಗಳ ಪರಿಚಯವನ್ನು ಉದಾಹರಣೆ ಸಹಿತ ಮಾಡಿಕೊಟ್ಟರು.
ಸುಜಲಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕುಮಾರ್, ಶಿಬಿರಗಳು ಗ್ರಾಮಸ್ಥರಿಗೂ ಹಾಗೂ ಕಾಲೇಜಿಗೂ ಸಂಬಂಧವನ್ನು ಕಲ್ಪಿಸುವ ಸೇತುವೆಯಂತಿದ್ದು ಕಾಲೇಜಿನವರು ಈ ಏಳು ದಿನ ಮಾತ್ರವಲ್ಲದೆ ಮುಂದೆಯೂ ಗ್ರಾಮದವರ ಜೊತೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಗ್ರಾಮಸ್ಥರ ಅಭಿವೃದ್ಧಿಗೆ ಕಾರಣವಾಗ ಬೇಕೆಂದು ತಿಳಿಸಿದರು. ಮೋಹನ್ ಸ್ವಾಗತಿಸಿದರು. ಹರ್ಷಿತಾ ವಂದಿಸಿದರು. ನಳಿನಾ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

