ಹಾಸನ

'ಸಾಂಸ್ಕೃತಿಕವಾಗಿ ತೊಡಗಿಕೊಂಡಾಗ ಮಾತ್ರ ಬೌದ್ಧಿಕ ವಿಕಾಸ ಸಾಧ್ಯ'

Published On :

ಹಾಸನ: ಕಾಲೇಜು ವಿದ್ಯಾರ್ಥಿನಿಯರು ಸಾಂಸ್ಕೃತಿಕವಾಗಿ ತೊಡಗಿಕೊಂಡಾಗ ತಮ್ಮ ಬೌದ್ಧಿಕ ಬೆಳವಣಿಗೆ ವಿಕಾಸಗೊಳ್ಳುತ್ತದೆ ಎಂದು ಜಿಪಂ ಸದಸ್ಯ ವಿ.ಎ.ನಂಜುಂಡಸ್ವಾಮಿ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಕಾಲೇಜು ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.
ಹಿಂದಿನ ಮತ್ತು ಇಂದಿನ ವಿದ್ಯಾಭ್ಯಾಸವನ್ನು ಅವಲೋಕಿಸಿದರೆ ಸಾಕಷ್ಟು ಸುಧಾರಣೆ ಪ್ರತಿಹಂತದಲ್ಲಿಯೂ  ಕಾಣಬಹುದು.ಈ ನಿಟ್ಟಿನಲ್ಲಿ ಪ್ರತಿ ವಿದ್ಯಾರ್ಥಿ ತನ್ನ ಗುರಿಯನ್ನು ಮುಟ್ಟಬೇಕು ಎಂದು ಸಲಹೆ ಮಾಡಿದರು.
ಕಾಲೇಜಿನ ಪ್ರಾಂಶುಪಾಲ ಕೃಷ್ಣಮೂರ್ತಿ, ಗೊರೂರು ಎಎನ್‌ವಿ ಕಾಲೇಜು ಉಪನ್ಯಾಸಕ ಡಾ.ಪುಟ್ಟರಾಜಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಾಲಾಜಿ, ಸದಸ್ಯ ನಾಗೇಂದ್ರಕುಮಾರ್ ಮಾತನಾಡಿದರು.
ಉಪನ್ಯಾಸಕ ಧನಂಜಯ್ಯ, ಹರೀಶ್, ರಾಘವೇಂದ್ರ, ಪ್ರಭಾ, ನಾಗೇಂದ್ರ, ಮಂಜುನಾಥ್, ಕುಮಾರಸ್ವಾಮಿ ,ಶಿವರಾಮು ಮುಂತಾದವರು ಇದ್ದರು. ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ನಾನಾ ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಎನ್‌ಎಸ್‌ಎಸ್ ವಿಭಾಗದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಜಯಗಳಿಸಿದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸಂಜೆ ವಿದ್ಯಾರ್ಥಿನಿಯರಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.