'ಇಂಗ್ಲಿಷ್' ಗ್ರಾಮೀಣ ವಿದ್ಯಾರ್ಥಿಗಳ ಸಮಸ್ಯೆ: ರಮ್ಯ
ಹಾಸನ: ಗ್ರಾಮಾಂತರದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಹಾಗೂ ಅವರಿಗೆ ಗೊತ್ತಿರುವ ಜ್ಞಾನ ಮಂಡಿಸುವಿಕೆಯಲ್ಲಿ ಸಮಸ್ಯೆ ಇದ್ದು, ಇಂದು ಅವರು ಹಲವಾರು ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಬೆಂಗಳೂರಿನ ಅಭಿಜ್ಞಾನ ತರಬೇತಿ ಸಂಸ್ಥೆಯ ನಿರ್ದೇಶಕಿ ರಮ್ಯ ಅವರು ತಿಳಿಸಿದರು.
ನಗರದ ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನಲ್ಲಿ ಅಭಿಜ್ಞಾನ ತರಬೇತಿ ಸಂಸ್ಥೆಯಿಂದ ಅಂತಿಮ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸ್ವಲ್ಪ ಇಂಗ್ಲಿಷ್ ಮತ್ತು ತಮಗೆ ಗೊತ್ತಿರುವ ವಿಷಯವನ್ನು ಸಂದರ್ಶನದಲ್ಲಿ ಮಂಡಿಸುವ ರೀತಿ ಬಗ್ಗೆ ತರಬೇತಿ ಪಡೆದರೆ ಸಾಮಾನ್ಯವಾಗಿ ಎಲ್ಲರೂ ಉದ್ಯೋಗ ದೊರಕಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟರು.
ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆಯಲು ಬೇಕಾದ ಸಾಮಾನ್ಯಜ್ಞಾನ, ಸಂದರ್ಶನಗಳಲ್ಲಿ ಕೇಳುವ ಸಾಮಾನ್ಯ ಪ್ರಶ್ನೆಗಳ ರೀತಿ ಮತ್ತು ಅವುಗಳಿಗೆ ಉತ್ತರ ಮಾಡಬೇಕಾದ ವಿಧಾನ, ಇಂದಿನ ಕಂಪನಿಗಳಿಗೆ ಬೇಕಾಗಿರುವ ಕಂಪ್ಯೂಟರ್ ಜ್ಞಾನ, ಶಿಕ್ಷಣ ಹಾಗೂ ತಮ್ಮ ವಿದ್ಯೆಯನ್ನು ಪಿಪಿಟಿ ಮೂಲಕ ಪ್ರಸ್ತುತ ಪಡಿಸುವ ವಿಧಾನ ಮುಂತಾದವುಗಳ ಬಗ್ಗೆ ತರಬೇತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಜೆ.ಶೈಲಜಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಉದ್ಯೋಗ ಮತ್ತು ಮಾಹಿತಿ ಕೇಂದ್ರದ ಅಧಿಕಾರಿ ಡಾ.ಕೆ.ಮೋಹನ ಮತ್ತು ಡಾ.ಕೆ.ಜಿ.ಸುರೇಶ್‌ಕುಮಾರ್, ಉಪನ್ಯಾಸಕರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

