ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಅರಸೀಕೆರೆ: ಕನಿಷ್ಠ ವೇತನ 10 ಸಾವಿರ ರು. ಹಾಗೂ ಅಂಗನವಾಡಿ ನೌಕರರನ್ನು ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸರ್ಕಾರದ ಎಲ್ಲಾ ಸೌಲಭ್ಯವನ್ನು ನೀಡಬೇಕೆಂದು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಹಾಯಕ ಅಧಿಕಾರಿ ಅಂಬಿಕಾ ಹಾಗೂ ತಹಸೀಲ್ದಾರ್ ಜಗದೀಶ್ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ರಾಷ್ಟ್ರೀಯ ಹೆದ್ದಾರಿಯ ಮೂಲಕ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕೆಂದು ಆಗ್ರಹಿಸಿ ಸಿಡಿಪಿಓ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಘಟಕದ ಅಧ್ಯಕ್ಷೆ ನೇತ್ರಾವತಿ ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು 60 ವರ್ಷಕ್ಕೆ ನಿವೃತ್ತಿಯಾಗುವವರೆಗೆ ವಿಶೇಷ ಯೋಜನೆ ರೂಪಿಸಿ ಸಚಿಧ್ಯಾಸುರಕ್ಷಾ ಯೋಜನೆ ಜಾರಿಗೊಳಿಸಬೇಕು. 20 ವರ್ಷ ಸೇವೆ ಸಲ್ಲಿಸಿ ಅನಾರೋಗ್ಯ ಮತ್ತಿತರ ಕ್ಫರಣಗಳಿಂದ ನಿವೃತ್ತಿಯಾಗುವವರಿಗೆ ಇಡಿಗಂಟು ಮತ್ತು ಪಿಂಚಣಿ ಸೌಲಭ್ಯ ಕಲ್ಪಿಸಬೇಕು. ನಿವೃತ್ತ ಕಾರ್ಯಕರ್ತೆಯರಿಗೆ ಸಂಬಳದ ಶೇ.50ರಷ್ಟು ನಿವೃತ್ತಿ ವೇತನ ನೀಡಬೇಕೆಂದು ಆಗ್ರಹಿಸಿದರು.
ಸಿ ಮತ್ತು ಡಿ ದರ್ಜೆಯ ನೌಕರರೆಂದು ಪರಿಗಣಿಸಬೇಕು. ನೌಕರರಿಗೆ ಇ.ಎಸ್.ಐ.ಮತ್ತು ಪಿ.ಎಫ್.ಸೌಲಭ್ಯ ಒದಗಿಸಬೇಕು. ವೇತನ ವಿಷಯದಲ್ಲಿ ತಾರತಮ್ಯ ಮಾಡಬಾರದು. ಪ್ರತಿ ತಿಂಗಳು 10ಸಾವಿರ ರೂ. ವೇತನ, ಅಂಗನವಾಡಿ ಕಾರ್ಯವಲ್ಲದೇ ಇನ್ನಿತರ ಕಾರ್ಯಗಳಿಗೆ ಸಿಬ್ಬಂದಿ ಬಳಸಿಕೊಳ್ಳಬಾರದು. ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಆಹಾರ ಪೂರೈಸಬೇಕು. ಸರ್ಕಾರಿ ಆದೇಶಗಳ ಬಗ್ಗೆ ಕಾಲಕಾಲಕ್ಕೆ ಪೂರ್ಣ ಪ್ರಮಾಣದ ಮಾಹಿತಿ ಒದಗಿಸಬೇಕೆಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ಮಹಿಳಾ ಮತ್ತು ಮಕ್ಕಳ ಅಭಿವಣದ್ಧಿ ಸಹಾಯಕ ಅಧಿಕಾರಿ ಅಂಬಿಕಾ ಮಾತನಾಡಿ ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಆಶ್ವಾಸನೆ ನೀಡಿದ ನಂತರ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಯ ಮೂಲಕ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.ಸಂಘದ ಪದಾಧಿಕಾರಿಗಳಾದ ಶಾಂತಮ್ಮ, ರತ್ನಮ್ಮ, ಜಯಮ್ಮ, ಗಾಯಿತ್ರಿ, ರಾಜಮ್ಮ, ಮಂಗಳ, ಪ್ರೇಮ ಇದ್ದರು.
ಬಿಸಿಯೂಟ ತಯಾರಕರ ಪ್ರತಿಭಟನೆ
ಅರಸೀಕೆರೆ: ತಾಲೂಕು ಬಿಸಿಯೂಟ ತಯಾರಕರ ಸಂಘ ಗುರುವಾರವೂ ಭಾರಿ ಪ್ರತಿಭಟನಾ ಮೆರವಣಿಗೆ ನಡೆಸಿ ತಮ್ಮ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಜಗದೀಶ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ರಾಷ್ಟ್ರೀಯ ಹೆದ್ದಾರಿಯ ಮೂಲಕ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಬಿಸಿಯೂಟ ಖಾಸಗಿಕರಣ ಕೂಡಲೇ ನಿಲ್ಲಬೇಕು. ಕನಿಷ್ಠ ವೇತನ 10ಸಾವಿರಕ್ಕೆ ಏರಿಸಬೇಕು ಹಾಗೂ ಸರ್ಕಾರಿ ಸೌಲಭ್ಯ ನೀಡಬೇಕೆಂದು ಘೋಷಣೆಗಳನ್ನು ಕೂಗುತ್ತಾ ತಾಲೂಕು ಕಚೇರಿಗೆ ತೆರಳಿ ಧರಣಿ ನಡೆಸಿದರು.
ಸಂಘದ ಕಾರ್ಯದರ್ಶಿ ಜ್ಯೋತಿ ಮಾತನಾಡಿ, ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ಅತ್ಯಂತ ಕನಿಷ್ಠ ವೇತನಕ್ಕೆ ಕಾರ್ಯನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರ ಸಂಕಷ್ಟಕ್ಕೆ ಸ್ಪಂದಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಮ್ಮ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕೆಂದು ಒತ್ತಾಯಿಸಿದ ಅವರು ಇಲ್ಲದಿದ್ದಲ್ಲಿ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.ಪ್ರತಿಭಟನಾ ಮೆರವಣಿಗೆಯಲ್ಲಿ ಸಂಘದ ಜಿಲ್ಲಾಧ್ಯಕ್ಷೆ ಪುಷ್ಪ, ತಾಲೂಕು ಬಿಸಿಯೂಟ ಸಂಘದ ಅಧ್ಯಕ್ಷೆ ತಾರಾಮಣಿ, ಕಲಾವತಿ, ಯಶೋಧ, ಮಹಾಲಕ್ಷ್ಮೀ, ಶಿವಗಂಗಮ್ಮ, ಕಮಲಾ ಇತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

