ಹಾಸನ

ಪೊಲೀಸರಿಂದ ಅತ್ಯಾಚಾರಕ್ಕೆ ಒಳಗಾದ ಮಹಿಳೆಗೆ ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ

Published On :

ಹಾಸನ: ಚಿಕ್ಕಮಗಳೂರು ಪೊಲೀಸರಿಂದ ಅತ್ಯಾಚಾರಕ್ಕೆ ಒಳಗಾಗಿರುವ ಮಹಿಳೆ ಹಾಸನ ಜಿಲ್ಲಾಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದಾರೆ.
  ಚಿಕ್ಕಮಗಳೂರು ಜಿಲ್ಲೆಯ ಮಾವನೂರು ಗ್ರಾಮದ ಮಹಿಳೆಯೊಬ್ಬಳು ಚಿನ್ನದ ಸರ ಕದ್ದ ಆರೋಪ ಹಿನ್ನೆಲೆಯಲ್ಲಿ ಮಹಿಳೆಯನ್ನು ಕಳ್ಳಿ ಎಂದು ಬಂಧಿಸಿದ್ದ ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಪೊಲೀಸರು, ಆಕೆಯನ್ನು ಕಳವು ವಸ್ತು ವಾಪಸ್ ಪಡೆಯುವ ಉದ್ದೇಶದಿಂದ ಬೆಂಗಳೂರಿಗೆ ಕರೆದೊಯ್ದು ಲಾಡ್ಜ್‌ನಲ್ಲಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
  ಈ ಘಟನೆಯಿಂದ ಅಸ್ವಸ್ಥಗೊಂಡಿರುವ ಮಹಿಳೆಗೆ ಶನಿವಾರದಿಂದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕೆಲ್ಲಾ ತಾವಿರುವ ಊರಿನ ವ್ಯಕ್ತಿಯೂಬ್ಬನ ಕಿರುಕುಳವೇ ಕಾರಣ ಎಂದು ಆರೋಪಿಸಿರುವ ಮಹಿಳೆ ಕಡೆಯವರು, ಈ ಸಂಬಂಧ ಆಲ್ದೂರು ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.
  ಬದಲಾಗಿ ನನ್ನ ಸೋದರಿ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಅತ್ಯಾಚಾರಕ್ಕೆ ಒಳಗಾಗಿರುವ ಮಹಿಳೆಯ ಅಕ್ಕ ದೂರಿದ್ದಾರೆ.
  ಬಲ್ಲ ಮೂಲಗಳ ಪ್ರಕಾರ ಅತ್ಯಾಚಾರಕ್ಕೆ ಒಳಗಾದ ಮಹಿಳೆಯನ್ನು ಜಿಲ್ಲಾಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ವರ್ಗಾಹಿಸಲಾಗಿದೆ ಎಂತಲೂ ಹೇಳಲಾಗಿದೆ.

ಪುರಂದರದಾಸರ ಆರಾಧನಾ ಮಹೋತ್ಸವ
ಹಾಸನ: ಸುಸ್ವರ ಸುಧಾ ಸಂಗೀತ ನಿಲಯ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ತ್ಯಾಗರಾಜರು ಹಾಗೂ ಪುರಂದರದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಸೌರಭ ಕರ್ನಾಟಕ ಸಂಗೀತ ಕಾರ್ಯಕ್ರಮ ನೆರವೇರಿತು. ನಗರಸಭಾ ಸದಸ್ಯ ಪ್ರಸನ್ನ ಕೃಷ್ಣಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು. ಸದಸ್ಯ ಎಂ.ಡಿ.ಮಂಜುನಾಥ್  ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಅತಿಥಿಗಳಾಗಿ ವಿದ್ವಾನ್ ಅರ್.ವೆಂಕಟೇಶ್ ಆಗಮಿಸಿದ್ದರು.  ವಿದುಷಿ ಸುಧಾ ನಟರಾಜ್ ತಂಡದವರು ನೆರವೇರಿಸಿಕೊಟ್ಟರು. ಪಕ್ಕವಾದ್ಯದಲ್ಲಿ ಮಂಜುನಾಥ್, ಆನಂದ್, ಶ್ರೀನಿವಾಸಮೂರ್ತಿ  ಹಾಗೂ ಗಾಯತ್ರಿ  ಸಹಕರಿಸಿದರು. ಇಲಾಖೆಯ ಸಹಾಯಕ ನಿರ್ದೇಶಕ  ಟಿ.ಮೂರ್ತಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.