ಹೊಳೆನರಸೀಪುರ: 92 ನಾಮಪತ್ರ ಸಲ್ಲಿಕೆ
ಹೊಳೆನರಸೀಪುರ: ಪುರಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಶನಿವಾರ ನಾನಾ ರಾಜಕೀಯ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳಲ್ಲದೇ, ಸ್ವತಂತ್ರ ಅಭ್ಯರ್ಥಿಗಳೂ ಸೇರಿ ಒಟ್ಟು 92 ನಾಮಪತ್ರಗಳು ಸಲ್ಲಿಕೆ ಆಗಿವೆ.
ಶುಕ್ರವಾರದವರೆಗೂ ಕೇವಲ 33 ಅಭ್ಯರ್ಥಿಗಳು ಪುರಸಭೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರೆ, ಕಡೆಯ ದಿನವಾದ ಶನಿವಾರ 92 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಮೂಲಕ ಪುರಸಭೆಯಲ್ಲಿನ 23 ವಾರ್ಡ್ಗಳಿಂದ ನಾಮಪತ್ರಗಳನ್ನು ಸ್ವೀಕರಿಸಲು ನಿಗದಿಗೊಳಿಸಲಾಗಿದ್ದ ತಾಲೂಕು, ಪುರಸಭಾ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಒಟ್ಟು 125 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದಂತಾಗಿದೆ.
ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಶನಿವಾರ ನಾನಾ ರಾಜಕೀಯ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳು ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ, ಪಠಾಕಿ ಸಿಡಿಸಿ ಸಂಭ್ರಮದಿಂದ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು. ಈ ಬಾರಿಯ ವಿಶೇಷವೆಂದರೆ ಇದೇ ಮೊದಲ ಬಾರಿಗೆ ಇಲ್ಲಿನ ಪುರಸಭೆಯ ಸದಸ್ಯತ್ವಕ್ಕೆ ಜೆಡಿಯು, ಕೆಜೆಪಿ ಹಾಗೂ ಬಿಎಸ್ಆರ್ ಕಾಂಗ್ರೆಸ್ನಿಂದಲೂ ಕೆಲವರು ನಾಮಪತ್ರ ಸಲ್ಲಿಸಿದ್ದಾರೆ.
ಜೆಡಿಯು ಕಾರ್ಯಕರ್ತರೂ ಕೂಡ ಗಾಂಧಿ ವೃತ್ತದಲ್ಲಿ ಪಠಾಕಿ ಸಿಡಿಸಿ ನಂತರ ಬೆಂಬಲಿಗರೊಂದಿಗೆ ತೆರಳಿ ತಮ್ಮ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದರು. ಕಡೆಯ ದಿನವಾದ ಶನಿವಾರ ಇದೇ ಪ್ರಥಮ ಬಾರಿಗೆ ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಬಯಸಿ ಹೆಚ್ಚಿನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುವುದೂ ಕೂಡ ವಿಶೇಷವಾಗಿದೆ.
ಕಳೆದ ಅವಧಿಯಲ್ಲಿ ಇಲ್ಲಿನ ಪುರಸಭೆಗೆ ಅಧ್ಯಕ್ಷರಾಗಿದ್ದ ಜಿಕ್ರಿಯಾ ಅಹಮದ್ಶರೀಫ್, ಎಚ್.ಎಸ್.ಸುದರ್ಶನ, ವಿನೋದ ಹಾಗೂ ಉಪಾಧ್ಯಕ್ಷರಾಗಿದ್ದ ಹೇಮಶ್ರೀ ಮತ್ತು ಪ್ರಭಾವಿ ಸದಸ್ಯ ಎನಿಸಿದ್ದ ಎಚ್.ವಿ.ಪುಟ್ಟರಾಜು ಈ ಬಾರಿ ಕೂಡ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಪುರಸಭೆಯಲ್ಲಿ ಪ್ರಭಾವಿ ನಾಯಕರೆನಿಸಿಕೊಂಡಿದ್ದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಅವರ ಪರಮಾಪ್ತರಾಗಿದ್ದ ಟಿ.ಮಲ್ಲೇಶ್ ಸ್ಪರ್ಧೆಯಿಂದ ಹಿಂದೆ ಸರಿದು ನಾಮಪತ್ರ ಸಲ್ಲಿಸದಿರುವುದು ಅಚ್ಚರಿ ಮೂಡಿಸಿದ್ದರೆ, ಹಾಲಿ ಉಪಾಧ್ಯಕ್ಷರಾಗಿದ್ದ ಮಿರ್ಜಾ ಹುಸೇನ್ ಆಘ ಅವರೂ ಕೂಡ ಸ್ಪರ್ಧಿಸಿಲ್ಲದಿರುವುದು ಕೂಡ ವಿಶೇಷ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

