ಹಾಸನ

ಆರೋಗ್ಯದ ವಿಚಾರದಲ್ಲಿ ಮುನ್ನೆಚ್ಚರಿಕೆ ಮುಖ್ಯ

Published On :

ಪಿರಿಯಾಪಟ್ಟಣ: ಆರೋಗ್ಯದ ವಿಚಾರದಲ್ಲಿ ಮುನ್ನೆಚ್ಚರಿಕೆ ಬಹಳ ಮುಖ್ಯ ಎಂದು ತಾಲೂಕು ಆಡಳಿತಾಧಿಕಾರಿ ಡಾ.ಆರ್. ಶಶಿಕಲಾ ಹೇಳಿದರು.
ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬ ಪೋಷಕರೂ ಸಹ ತಮ್ಮ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವುದನ್ನು ತಪ್ಪಿಸಬಾರದು. ಆರೋಗ್ಯದ ವಿಚಾರದಲ್ಲಿ ತತ್ಸಾರ ಮಾಡಿದ್ದಲ್ಲಿ ಅದರ ಪರಿಣಾಮವನ್ನು ಸ್ವತಃ ತಾವೆ ಅನುಭವಿಸಬೇಕಾಗುತ್ತದೆ ಎಂಬ ಎಚ್ಚರಿಕೆ ಪ್ರತಿಯೊಬ್ಬರಲ್ಲಿರಬೇಕು ಎಂದು ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಎಂ.ಜಿ. ತ್ರಿವೇಣಿ, ಹಿರಿಯ ಆರೋಗ್ಯ ನಿರೀಕ್ಷಕ ಹೆಗಡೆ, ಮಹಿಳಾ ಹಿರಿಯ ಆರೋಗ್ಯ ನಿರೀಕ್ಷಕಿ ಭವಾನಿ, ಡಿಪಿಎಂಒ ಪ್ರವೀಣ್, ಬಿಎಚ್‌ಇಒ ರಮೇಶ್ ಡಾ. ಅನೀಲ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.