ಹಾಸನ

ನಗರೀಕರಣದ ಭರದಲ್ಲಿ ಗ್ರಾಮಗಳ ನಿರ್ಲಕ್ಷ್ಯ: ಡಾ. ಮಲ್ಲೇಗೌಡ

Published On :

ಹಾಸನ: ನಗರೀಕರಣದ ಭರದಲ್ಲಿ ಗ್ರಾಮಗಳನ್ನು ನಿರ್ಲಕ್ಷ್ಯಿಸಲಾಗುತ್ತಿದೆ. ಹಾಗಾಗಿ ಗ್ರಾಮಗಳು ಬಹು ಹಿಂದುಳಿದಿವೆ ಎಂದು ಎವಿಕೆ ಕಾಲೇಜಿನ ಕನ್ನಡ ಅಧ್ಯಯನ  ವಿಭಾಗದ ಮುಖ್ಯಸ್ಥ ಡಾ.ಎಚ್.ಎಲ್. ಮಲ್ಲೇಶಗೌಡ ತಿಳಿಸಿದರು.
  ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಘಟಕ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರಿ ಸೇವೆಗಳು ಗ್ರಾಮೀಣರಿಗೆ ಹೆಚ್ಚು ತಲುಪಬೇಕಾದ ಅವಶ್ಯಕತೆ ಇದೆ. ಈ ಕಾರ್ಯದಲ್ಲಿ  ಎನ್‌ಎಸ್‌ಎಸ್ ವಿದ್ಯಾರ್ಥಿಗಳ ಪಾಲೂ ಇದೆ ಎಂದ ಅವರು, ಗ್ರಾಮೀಣ ಜನರಿಂದ ವಿದ್ಯಾವಂತ ಸಮುದಾಯ ಕಲಿಯಬೇಕಾದ್ದು ಸಾಕಷ್ಟಿವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಡಿ.ನಾರಾಯಣ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು ನಾಯಕತ್ವ, ಕಲೆ, ಸಂಗೀತ, ನೃತ್ಯ ಮುಂತಾದ ವಿಶೇಷ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಹಾಗೂ ಗ್ರಾಮೀಣರ ಜೀವನ ಆರ್ಥ ಮಾಡಿಕೊಳ್ಳುವ ಮೂಲಕ ಸರ್ವತೋಮುಖ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬಹುದು ಎಂದರು.
 ಶಿಬಿರಾಧಿಕಾರಿ ಪಾರ್ಥೇಶರನ್ನು ಸನ್ಮಾನಿಸಲಾಯಿತು. ಎಚ್.ಆರ್. ಮುಕುಂದೇಗೌಡ, ಶೆಟ್ಟಿಗೌಡ ಇದ್ದರು. ಗುರುರಾಜ್ ಪ್ರಾರ್ಥಿಸಿದರು. ಉಪನ್ಯಾಸಕ ಮಂಜುನಾಥ ವಂದಿಸಿದರು. ಉಪನ್ಯಾಸಕ ಹರೀಶ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.