ನಾಮಪತ್ರ ಪರಿಶೀಲನೆಗೆ ಸೂಕ್ತ ಕ್ರಮ: ಜಿಲ್ಲಾಧಿಕಾರಿ ಸೂಚನೆ
ಹಾಸನ: ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಫೆ.25ರಂದು ನಡೆಯುವ ನಾಮಪತ್ರಗಳ ಪರಿಶೀಲನೆಗೆ ಸೂಕ್ತ ಕ್ರಮಗಳನ್ನು ಅನುಸರಿಸುವಂತೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಪಿ.ಮೋಹನರಾಜ್ ಸೂಚನೆ ನೀಡಿದರು.
ನಗರ, ಸ್ಥಳೀಯ ಸಂಸ್ಥೆ ಚುನಾವಣೆಯ ಮುಂದಿನ ಪ್ರಕ್ರಿಯೆ ಹಾಗೂ ಮಾದರಿ ನೀತಿ ಸಂಹಿತೆ ಜಾರಿ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ನಡೆಯಿತು. ನಾಮಪತ್ರಗಳ ಪರಿಶೀಲನೆ ವೇಳೆ ಯಾವುದೇ ಗೊದಲಗಳು ಉಂಟಾಗದಂತೆ ಎಚ್ಚರಿಕೆ ವಹಿಸಿ, ಸಂಶಯಗಳಿದಲ್ಲಿ ಕೂಡಲೇ ಬಗೆ ಹರಿಸಿಕೊಳ್ಳಿ ಎಂದು ಚುನಾವಣಾಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಜಾತಿ ದೃಢೀಕರಣ ಪತ್ರಗಳಿಗೆ ಸಂಬಂಧಿಸಿದಂತೆ ಅನುಮಾನಗಳಿದ್ದಲ್ಲಿ ಕೂಡಲೇ ಅದನ್ನು ಪರಿಶೀಲಿಸಿ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ತಹಸೀಲ್ದಾರರುಗಳಿಗೆ ತಿಳಿಸಿದರು.
ನಾಮಪತ್ರ ಪರಿಶೀಲನೆ ವೇಳೆ ಬಿ ಫಾರಂಗಳನ್ನು ಹೇಗೆ ಪರಿಶೀಲಿಸಬೇಕು. ಅಂತಿಮವಾಗಿ ಕಣದಲ್ಲಿ ಇರುವವರ ಪಟ್ಟಿ ತಯಾರಿಕೆ, ಅಭ್ಯರ್ಥಿಗಳಿಗೆ ಚಿಹ್ನೆ ನೀಡಿಕೆ ಸಂದರ್ಭ ಅನುಸರಿಸಬೇಕಾದ ನಿಯಮಗಳ ಬಗ್ಗೆಯೂ ಸಭೆಯಲ್ಲಿ ವಿವರಿಸಿದ ಅವರು, ಚುನಾವಣಾ ವೀಕ್ಷಕರು ತಾವು ಈವರೆಗೆ ಜಿಲ್ಲೆಯಲ್ಲಿ ಗಮನಿಸಿರುವ ಅಂಶಗಳು, ಮುಂದೆ ಚುನಾವಣಾಧಿಕಾರಿಗಳು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಗಮನಕ್ಕೆ ತಂದರು.
ಜಿಲ್ಲಾ ಎಸ್ಪಿ ಅಮಿತ್ಸಿಂಗ್ ಅವರು ಶಾಂತಿಯುತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಪೊಲೀಸ್ ಇಲಾಖೆಯಿಂದ ಮಾಡಿರುವ ವ್ಯವಸ್ಥೆಗಳು, ಸೂಕ್ಷ್ಮ ಮತ್ತು ಅತೀ ಸೂಕ್ಮ ಮತಗಟ್ಟೆಗಳೂ ಸೇರಿದಂತೆ ಒಟ್ಟಾರೆ ನಿಯೋಜಿಸಲಾಗುವ ಪೊಲೀಸರು, ಭದ್ರತಾ ವ್ಯವಸ್ಥೆಯ ಬಗ್ಗೆ ವಿವರಿಸಿದರು. ಹಾಸನ ನಗರಸಭೆ ವ್ಯಾಪ್ತಿಯ 8 ರಿಂದ 15ನೇ ವಾರ್ಡ್ವರೆಗಿನ ಚುನಾವಣಾಧಿಕಾರಿಯಾಗಿರುವ ನೂರುಲ್ಲಾ ಷರೀಫ್ ಅವರು ಚುನಾವಣಾಧಿಕಾರಿಗಳ ಜವಾಬ್ದಾರಿ, ಎದುರಾಗುವ ಸಮಸ್ಯೆ, ಗೊಂದಲಗಳು ಮತ್ತಿತರ ವಿಷಯಗಳ ಬಗ್ಗೆ ವಿವರಿಸಿದರು.
ಅಪರ ಜಿಲಾಧಿಕಾರಿ ಡಾ.ಗೋಪಾಲಕೃಷ್ಣ ಅವರು, ಚುನಾವಣಾ ಆಯೋಗದ ಸುತ್ತೋಲೆಗಳ ಬಗ್ಗೆ ವಿವರಿಸಿದರು. ಚುನಾವಣಾ ತಹಶೀಲ್ದಾರ್ ಬಾಬುರಾವ್ ಅನೇಕ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.
ಹಾಸನ ಉಪ ವಿಭಾಗ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಚುನಾವಣಾ ವೀಕ್ಷಕರಾದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಜಾಗೃತ ಅಧಿಕಾರಿ ಡಾ.ಕೆ.ಎಚ್. ನರಸಿಂಹಮೂರ್ತಿ ಹಾಗೂ ಸಕಲೇಶಪುರ ಉಪ ವಿಭಾಗ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳ ಚುನಾವಣೆ ವೀಕ್ಷಕ ಚಿಕ್ಕಮಗಳೂರು ಜಿಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ.ಸುಬ್ರಾಯ ಕಾಮತ್, ಜಿಲ್ಲಾ ಎಸ್ಪಿ ಅಮಿತ್ಸಿಂಗ್, ಅಪರ ಜಿಲ್ಲಾಧಿಕಾರಿ ಡಾ.ಗೋಪಾಲಕೃಷ್ಣ ಉಪ ವಿಭಾಗಾಧಿಕಾರಿಗಳಾದ ಶ್ರೀವಿದ್ಯಾ ಮತ್ತು ಜಗದೀಶ್ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

