'ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಿ'
ಅರಸೀಕೆರೆ: ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಬೇಕೆಂದು ತಹಸೀಲ್ದಾರ್ ಜಗದೀಶ್ ಹೇಳಿದರು.
ಪಟ್ಟಣದ ಸರ್ಕಾರಿ ಜೆ.ಸಿ. ಆಸ್ಪತ್ರೆಯಲ್ಲಿ ತಾಲೂಕು ಆರೋಗ್ಯ ಇಲಾಖೆ ಹಾಗೂ ರೋಟರಿ ಸಂಸ್ಥೆಯಿಂದ ಭಾನುವಾರ ಏರ್ಪಡಿಸಲಾಗಿದ್ದ ಎರಡನೇ ಹಂತದ ಪಲ್ಸ್ ಪೋಲೀಯೋ ಕಾರ್ಯಕ್ರಮವನ್ನು ಮಗುವಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಆರೋಗ್ಯವಂತ ಸಮಾಜ ನಿರ್ಮಾಣ ಪ್ರತಿಯೊಬ್ಬ ಭಾರತೀಯರ ಕರ್ತವ್ಯ. ಐದು ವರ್ಷದೊಳಗಿನ ಮಗುವಿಗೆ ಹಾಕಿಸುವ ಎರಡು ಹನಿ ಪೋಲಿಯೋ ಲಸಿಕೆ ಮಕ್ಕಳನ್ನು ಶಾಶ್ವತ ಅಂಗವಿಕಲತೆಯಿಂದ ದೂರವಿರುವಂತೆ ಮಾಡುತ್ತದೆ ಎಂದು ಹೇಳಿದರು.
ತಾಲೂಕು ವೈದ್ಯಾಧಿಕಾರಿ ಡಾ.ದಿನೇಶ್ ಮಾತನಾಡಿ, ತಾಲೂಕಿನಲ್ಲಿ 30615 ಐದು ವರ್ಷ ಒಳಪಟ್ಟ ಮಕ್ಕಳಿದ್ದು, ಬಸ್ ಹಾಗೂ ರೈಲ್ವೆ ನಿಲ್ದಾಣ ಸೇರಿದಂತೆ ತಾಲೂಕಿನಲ್ಲಿ 149 ಪೋಲಿಯೋ ಲಸಿಕೆ ಕೇಂದ್ರಗಳನ್ನ ತೆರೆಯಲಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಸಮೀಪದ ಕೇಂದ್ರಕ್ಕೆ ಕರೆದೊಯ್ದು ಲಸಿಕೆ ಹಾಕಿಸುವ ಮೂಲಕ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಗೆ ಕೈಜೋಡಿಸಬೇಕೆಂದು ಮನವಿ ಮಾಡಿದರು.
ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಶೈಲಜಾ ಪಾಂಡುರಂಗ, ಮಕ್ಕಳ ವೈದ್ಯೆ ಶಾಂತಲ, ರೋಟರಿ ಸಂಸ್ಥೆಯ ಅಧ್ಯಕ್ಷ ಯೋಗೀಶಾಚಾರ್, ಇಓ ಚಂದ್ರಶೇಖರ್ ಇತರರು ಇದ್ದರು.
ಆಲೂರಲ್ಲಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪಲ್ಸ್ ಪೋಲೀಯೋ ಲಸಿಕಾ ಕಾರ್ಯಕ್ರಮವನ್ನು ಉಪ ತಹಸೀಲ್ದಾರ್ ಈರಣ್ಣ ಮಗುವೊಂದಕ್ಕೆ ಲಸಿಕೆ ಹಾಕುವುದರ ಮೂಲಕ ಚಾಲನೆ ನೀಡಿದರು.
ಗ್ರಾಮಾಂತರ ಪ್ರದೇಶದಲ್ಲಿ 42 ಹಾಗೂ ಪಟ್ಟಣದ 2 ಬೂತ್ ಸೇರಿದಂತೆ ಒಟ್ಟು 46 ಬೂತ್ಗಳಲ್ಲಿ 186 ಲಸಿಕೆದಾರರು, 9 ಮೇಲ್ವಿಚಾರಕರು ಕಾರ್ಯ ನಿರ್ವಹಿಸುತ್ತಿದ್ದು, 9 ವಾಹನ ವ್ಯವಸ್ಥೆಯಿದೆ. 23 ವಲಸೆ ತಾಣಗಳಲ್ಲಿ 184 ಗುಡಿಸಲುಗಳನ್ನು ಪತ್ತೆ ಮಾಡಿದ್ದು ಅಲ್ಲಿ 5 ವರ್ಷ ಒಳಗಿರುವ 196 ಮಕ್ಕಳಿಗೆ ವಿಶೇಷ ಗಮನ ನೀಡಿ ಲಸಿಕೆ ಹಾಕುವ ಗುರಿ ಇದೆ. ಜಾತ್ರೆ, ಮದುವೆಗಳಲ್ಲಿ ಯಾವ ಮಗುವೂ ತಪ್ಪಿಸಿಕೊಳ್ಳದಂತೆ ವಿಶೇಷ ಲಸಿಕಾ ದಳ ಕಾರ್ಯ ನಿರ್ವಹಿಸಿತು. ತಾಲೂಕು ಆರೋಗ್ಯಾಧಿಕಾರಿ ತಿಮ್ಮಯ್ಯ, ಆಡಳಿತ ಸಹಾಯಕಾಧಿಕಾರಿ ಡಾ.ಉಮಾದೇವಿ, ಹೆಲ್ತ್ ಆಫೀಸರ್ ಸುಬ್ರಹ್ಮಣ್ಯ, ಹಿರಿಯ ಆರೋಗ್ಯ ಸಹಾಯಕ ಎಚ್.ಎಸ್.ವೆಂಕಟೇಶ್, ರಾಜೇಗೌಡ, ಹಿರಿಯ ಆರೋಗ್ಯ ಸಹಾಯಕಿ ವನಜಾಕ್ಷಿ ಮುಂತಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

